Sankranti – ಇನ್ನೇನು ಬಂದೆ ಬಿಡ್ತು ಸಂಕ್ರಾಂತಿ ಹಬ್ಬ, ಇಲ್ಲಿದೆ ಸಂಕ್ರಾಂತಿಯ ದಿನಾಂಕ, ಮಹತ್ವ, ಆಚರಣೆಯ ವಿವರ

sankranti in kannada

ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ( Makara Sankraanthi ) ಹಬ್ಬ ಕೂಡ ಒಂದು. ಮಕರ ಸಂಕ್ರಾಂತಿಯನ್ನು ಭಾರತದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಈ ಹಬ್ಬವನ್ನು ದೇಶದ ವಿವಿಧ ಕಡೆ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳೊಂದಿಗೆ ಆಚರಿಸಲಾಗುತ್ತದೆ. ಈ ಬಾರಿ ಮಕರ ಸಂಕ್ರಾಂತಿ ಯಾವ ದಿನದಂದು ಬಂದಿದೆ, ಮಕರ ಸಂಕ್ರಾಂತಿ ಎಂದರೆ ಏನು ? ಇದರ ಆಚರಣೆ ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

2024 ರ ಸಂಕ್ರಾಂತಿ ಹಬ್ಬದ ದಿನಾಂಕ ಹೀಗಿದೆ :

makara sankranti 2024

ಹಿಂದೂ ಪಂಚಾಂಗದ ಪ್ರಕಾರ ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಆಚರಿಸುತ್ತಾ ಬರಲಾಗಿದೆ. ಹೆಚ್ಚಿನದಾಗಿ ಪ್ರತಿವರ್ಷ ಜನವರಿ 14 ರಂದು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿ ಸಂಕ್ರಾಂತಿ ಹಬ್ಬ ಜನವರಿ 14 ರ ಬದಲು ಜನವರಿ 15 ರಂದು (ಸೋಮವಾರ) ಬಂದಿದೆ. ಏಕೆಂದರೆ ಜನವರಿ 14 ರಂದು ಮಧ್ಯಾಹ್ನ 2:44 ಕ್ಕೆ ಧನು ರಾಶಿಯಿಂದ ಮಕರ ರಾಶಿಗೆ ಸೂರ್ಯನು ಪ್ರವೇಶಿಸುತ್ತಾನೆ. ಜನವರಿ 14 ರ ಮಧ್ಯಾಹ್ನ 2:44ರ ಮೇಲೆ ಹಬ್ಬ ಆಚರಿಸಲು ಆಗುವುದಿಲ್ಲ. ಹೀಗಾಗಿ ಜನವರಿ 15ರಂದು ಆಚರಿಸಬಹುದಾಗಿದೆ.

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ( South India ) ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ( Hindu Religious ) ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

tel share transformed

ಸಂಕ್ರಾಂತಿ ಹಬ್ಬದ ಮಹತ್ವ ( Importans ) :

ಪುರಾಣ ಮತ್ತು ಜ್ಯೋತಿಷ್ಯದ ಪ್ರಕಾರ ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂದು ನಂಬಿಕೆಯಿದೆ. ಈ ಸಮಯದಲ್ಲಿ ಸತ್ತವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ನಂಬಿಕೆಯೂ ಇದೆ. ಶ್ರೀಕೃಷ್ಣನು ( Agree Krishna ) ಗೀತೆಯಲ್ಲಿ ಆಯಣದಲ್ಲಿ ಉತ್ತರಾಯಣ ಅತಿ ಶ್ರೇಷ್ಠ ಎಂದು ಹೇಳಿರುವನು. ಭೀಷ್ಮ ಪಿತಾಮಹನು ಬಾಣಗಳ ಮಂಚದ ಮೇಲೆ ಮಲಗಿ ಯಮ ಯಾತನೆಯನ್ನು ಅನುಭವಿಸುತ್ತಿದ್ದರೂ ದಕ್ಷಿಣಾಯನದಲ್ಲಿ ತನ್ನ ದೇಹವನ್ನು ತ್ಯಜಿಸಲು ಒಪ್ಪದೆ ಉತ್ತರಾಯಣದ ಪುಣ್ಯಕಾಲದ ಅಷ್ಟಮಿ ದಿನ ಸಾವನ್ನು ಬರ ಮಾಡಿಕೊಳ್ಳುತ್ತಾನೆ.

ಕೃತಯುಗದಲ್ಲಿ ಶಿವ ಮತ್ತು ಪಾರ್ವತಿಯರು ( Shiv and Parvathi ) ವಿವಾಹವಾಗಿದ್ದು ಈ ಉತ್ತರಾಯಣದಲ್ಲಿ, ಬ್ರಹ್ಮ ದೇವನು ಈ ಜಗತ್ತಿನ ಸೃಷ್ಟಿಯನ್ನು ಪ್ರಾರಂಭಿಸಿದ್ದು ಇಂದ್ರನಿಗೆ ಗೌತಮರು ಶಾಪ ವಿಮೋಚನೆ ಮಾಡಿದ್ದು, ನಾರಾಯಣನು ವರಹಾ ಅವತಾರದಿಂದ ಭೂಮಿಯ ಮೇಲೆ ಪಾದ ಸ್ಪರ್ಶ ಮಾಡಿದ್ದು, ಸಮುದ್ರ ಮಥನದಲ್ಲಿ ಮಹಾಲಕ್ಷ್ಮಿ ಅವತರಿಸಿದ್ದು ಹಾಗೂ ಋಷಿ ಮುನಿಗಳು ತಪಸ್ಸಿಗೆ ಆಯ್ಕೆ ಮಾಡಿಕೊಂಡಿದ್ದು ಸಹ ಈ ಉತ್ತರಾಯಣದಲ್ಲಿ. ಈ ಎಲ್ಲ ಕಾರಣಕ್ಕಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವಿವಾಹ, ನಾಮಕರಣ, ಗೃಹಪ್ರವೇಶಗಳಂತಹ ಶುಭ ಕಾರ್ಯಗಳನ್ನು ಉತ್ತರಾಯಣದಲ್ಲಿ ಮಾಡುತ್ತಾರೆ.

ಸಂಕ್ರಾಂತಿ ಹಬ್ಬ ಆಚರಣೆಯ ವಿಧಾನ :

ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ(ಸಕ್ಕರೆ) ನೆಲಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಕಬ್ಬು ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ವಿವಾಹಿತ ಹಾಗೂ ಅವಿವಾಹಿತ ಹೆಣ್ಣು ಮಕ್ಕಳು ತಮ್ಮ ಆಪ್ತರಿಗೆ ಹಂಚಿ ಸಂತೋಷವನ್ನು ಪಡುತ್ತಾರೆ. ಈ ದಿನ ಶ್ರೀರಾಮನ ( Shree Ram ) ಪೂಜೆಯನ್ನು ಆಂದ್ರದಲ್ಲಿ ಮಾಡುತ್ತಾರೆ. ತಮಿಳುನಾಡಿನಲ್ಲಿ ಬೆಲ್ಲ, ಅಕ್ಕಿ, ತುಪ್ಪದಿಂದ ತಯಾರಿಸಿದ ಪೊಂಗಲನ್ನು ಸುತ್ತಲೂ ಕಬ್ಬನ್ನು ಕಟ್ಟಿ ಸಿಂಗರಿದ ವಲೆಯಲ್ಲಿ ಮಾಡಿ ಹಬ್ಬವನ್ನು ಆಚರಿಸುತ್ತಾರೆ.

whatss

ರೈತರು ಈ ದಿನದಂದು ಜಾನುವಾರುಗಳಿಗೆ ಮೈತೊಳೆದು, ಸಿಂಗರಿಸಿ ಮೆರವಣಿಗೆ ಮಾಡಿ, ಸಂಜೆ ಊರ ಒಂದು ಬೀದಿಯ ದಾರಿಯಲ್ಲಿ ಕಿಚ್ಚು ಹಾಯಿಸುತ್ತಾರೆ. ಎಳ್ಳಿನ ಹಬ್ಬವೆಂದು ಪ್ರಸಿದ್ಧವಾದ ಈ ದಿನದಂದು, ನಾನಾ ರೂಪಗಳಲ್ಲಿ ಎಳ್ಳನ್ನು ಬಳಸುವುದಲ್ಲದೆ, ಪೀಡಾ ಪರಿಹಾರಾರ್ಥವಾಗಿ ಎಳ್ಳನ್ನು ಹಾಗೂ ಎಳಚಿ ಹಣ್ಣನ್ನು ಸುರಿಯುತ್ತಾರೆ. ಪುರಾಣಗಳ ಹೇಳಿಕೆಯಂತೆ ಈ ದಿನದಿಂದ ದೇವತೆಗಳಿಗೆ ಹಗಲು, ರಾಕ್ಷಸರಿಗೆ ರಾತ್ರಿಯಾಗುವುದರಿಂದ ಆನಂದಕ್ಕಾಗಿ ಎಳ್ಳು ಬೆಲ್ಲ ತಿಂದು ಒಳ್ಳೆಯ ಹಿತ ನುಡಿಯುವ ಉದ್ದೇಶದಿಂದಾಗಿ ಎಳ್ಳು ಬೆಲ್ಲ ಹಂಚುತ್ತಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!