Manaswini Pension: ಮನಸ್ವಿನಿ ಯೋಜನೆ ಪ್ರತಿ ತಿಂಗಳು 800 ಪಿಂಚಣಿ ಪಡೆಯುವ ವಿಧಾನ

manaswini scheme

ಮನಸ್ವಿನಿ ಯೋಜನೆಯಿಂದ ಆರ್ಜಿ ಅಹ್ವಾನ! ಯೋಜನೆ ಅಡಿಯಲ್ಲಿ ರೂ 800 ಪಿಂಚಣಿ.

ಸಾಮಾಜಿಕವಾಗಿ (socially) ಹಾಗೂ ಆರ್ಥಿಕವಾಗಿ (economically) ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ (unmarried, separated and divorced women) ಆರ್ಥಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರದಿಂದ (Karnataka govt) ಮನಸ್ವಿನಿ ಯೋಜನೆ (manaswini scheme) ವತಿಯಿಂದ ರೂ 800 ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಂದು ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ. ಅದಕ್ಕೆ ಕಾರಣ ಅವರಿಗೆ ಆರ್ಥಿಕವಾಗಿ ನೆರವಿಗೆ ಬರುವ ಹಲವಾರು ಯೋಜನೆಗಳು. ಈ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಜೀವನವನ್ನು ನೆಡೆಸುವ ಶಕ್ತಿ ನೀಡಲಿ ಎಂದು. ಬರುವ ಆ ಯೋಜನೆಯ ಹಣದಿಂದ ಸ್ವಂತವಾಗಿ ಸಣ್ಣ ಪುಟ್ಟ ಉದ್ಯಮಗಳನ್ನು ಅಥವಾ ಅವರ ಖರ್ಚುಗಳಿಗೆ ಬಳಸಿಕೊಳ್ಳುತ್ತಾರೆ. ಅದೇ ರೀತಿ ಮನಸ್ವಿನಿ ಯೋಜನೆಯೂ ಕೂಡ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ನೀಡಲಿದೆ.

ಮನಸ್ವಿನಿ ಯೋಜನೆಯು ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಚನೆಯು ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಮಾಸಿಕ ವೇತನ ನೀಡುವ ಯೋಜನೆಯಾಗಿದೆ. ಇದರಿಂದ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಜೀವನ ನಡೆಸಲು ಹಣಕಾಸಿನ ಸಹಾಯ ನೀಡುವಂತ ಯೋಜನೆ.ಬಡತನದಲ್ಲಿ ಇರುವಂತಹ ಮಹಿಳೆಯರಿಗೆ ಇದು ಸ್ವಲ್ಪಮಟ್ಟಿಗೆ ಆರ್ಥಿಕ ವ್ಯವಸ್ಥೆಯನ್ನು ಒದಗಿಸಿ ಕೊಡುತ್ತದೆ. ಮತ್ತು ಅವರು ಉತ್ತಮ ಜೀವನ ನಡೆಸಲು ಸಹಾಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶ ( purpose of this scheme) :

ಕರ್ನಾಟಕ ಸರ್ಕಾರವು 2013 ರಲ್ಲಿ ಮನಸ್ವಿನಿ ಯೋಜನೆಯನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಅವಿವಾಹಿತ, ಬೇರ್ಪಟ್ಟ ಮತ್ತು ವಿಚ್ಛೇದಿತ ಮಹಿಳೆಯರನ್ನು ರಕ್ಷಿಸಲು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅವಿವಾಹಿತ ಮತ್ತು ವಿಚ್ಛೇದಿತ ಬಡ ಮಹಿಳೆಯರಿಗೆ ಪಿಂಚಣಿ ನೀಡುತ್ತದೆ.
ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿನ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಮನಸ್ವಿನಿ ಯೋಜನೆ ಜಾರಿಗೊಳಿಸಲಾಗಿದೆ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತಾ ಮಾನದಂಡ (qualifications) :
 
ಫಲಾನುಭವಿಯು 40 ರಿಂದ 64 ವರ್ಷದೊಳಗಿರಬೇಕು.
ವಾರ್ಷಿಕ ಆದಾಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರೂ.32,000/- ಕ್ಕಿಂತ ಕಡಿಮೆ ಇರಬೇಕು.
ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ದೇವದಾಸಿ ವೇತನ ಅಥವಾ ಅಂಗವಿಕಲರ ವೇತನ ಅಥವಾ ಯಾವುದೇ ರೀತಿಯ ಮಾಸಾಶನವನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರುವ ವ್ಯಕ್ತಿಗಳು ಈ ಯೋಜನೆಯಡಿಯಲ್ಲಿ ಮಾಸಾಶನ ಪಡೆಯಲು ಅರ್ಹರಾಗಿರುವುದಿಲ್ಲ.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು (important documents) :

ಬಿಪಿಲ್‌ ಪಡಿತರ ಚೀಟಿ (BPL card) ಇಲ್ಲದಿದ್ದಲ್ಲಿ ಆದಾಯ ಪ್ರಮಾಣ ಪತ್ರ (income certificate)
ಚುನಾವಣಾ ಗುರುತಿನ ಚೀಟಿ (voter ID) ಅಥವಾ ವಿಳಾಸದ ಬಗ್ಗೆ ದೃಢೀಕರಣ ದಾಖಲೆ/ವಯಸ್ಸಿನ ಬಗ್ಗೆ ದೃಢೀಕರಣ ಪತ್ರ.
ಅವಿವಾಹಿತರು ತಮಗೆ ವಿವಾಹ ಆಗಿಲ್ಲದಿರುವ ಬಗ್ಗೆ ಸ್ವಯಂ ಘೋಷಿತ ಪ್ರಮಾಣ ಪತ್ರ
ವಿವಾಹ ವಿಚ್ಚೇದಿತರು ವಿಚ್ಚೇದನದ ಸ್ವಯಂ ಘೋಷಿತ ಪ್ರಮಾಣ ಪತ್ರ
ಬ್ಯಾಂಕ್‌ ಮತ್ತು ಅಂಚೆ ಖಾತೆ ವಿವರಗಳು (bank and post office information)
ಆಧಾರ್‌ ಕಾರ್ಡ್ (adhar card)

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿವರ (how to apply manaswini scheme) :

ಈ ಯೋಜನೆಯ ಫಲಾನುಭವಿಗಳಾಗಲು ಬಯಸುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಒಂದೇ ವ್ಯಕ್ತಿಯಿಂದ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಗಮನಿಸಿ (notice) :

ಸಲ್ಲಿಕೆಯಾದ ಅರ್ಜಿಯನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರ (Ataljee Janasnehi Kendra) ಅಥವಾ ನಾಡಕಚೇರಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಯು ಅರ್ಜಿದಾರರ ಹೆಸರು, ತಂದೆ/ ಗಂಡನ ಹೆಸರು ವಿಳಾಸಗಳನ್ನು ದಾಖಲಿಸಿಕೊಳ್ಳುತ್ತಾರೆ. ಅರ್ಜಿ ಸಲ್ಲಿಸಿದ ಒಂದು ತಿಂಗಳಲ್ಲಿ ಉಪ ತಹಸೀಲ್ದಾರ್ (Deputy Tehsildar) ಅವರು ವಿಲೇವಾರಿ ಮಾಡಲಿದ್ದಾರೆ. ಅರ್ಜಿಯಲ್ಲಿ ದಾಖಲೆಗಳು ಸರಿಯಾಗಿಲ್ಲದಿದ್ದರೆ ಅರ್ಜಿಯನ್ನು ರದ್ದು ಮಾಡಲಾಗುತ್ತದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ

ಈ ಮಾಹಿತಿಗಳನ್ನು ಓದಿ


WhatsApp Group Join Now
Telegram Group Join Now

Related Posts

One thought on “Manaswini Pension: ಮನಸ್ವಿನಿ ಯೋಜನೆ ಪ್ರತಿ ತಿಂಗಳು 800 ಪಿಂಚಣಿ ಪಡೆಯುವ ವಿಧಾನ

Leave a Reply

Your email address will not be published. Required fields are marked *

error: Content is protected !!