Ration card – ರೇಷನ್ ಕಾರ್ಡ್ ನಲ್ಲಿ ಯಜಮಾನಿಯ ಹೆಸರನ್ನು ಬದಲಿಸುವ ವಿಧಾನ ಇಲ್ಲಿದೆ, How to change Family head name? BPL, AAY

WhatsApp Image 2023 07 28 at 10.46.52

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ಪಡಿತರ ಚೀಟಿಯಲ್ಲಿ(Ration card) ಮುಖ್ಯಸ್ಥರ ಹೆಸರನ್ನು ಬದಲಾಯಿಸಲು ಅವಕಾಶ ನೀಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಅನೇಕ ಜನರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ ಏಕೆಂದರೆ ಹಲವಾರು ಜನರು ಕುಟುಂಬದ ಮುಖ್ಯಸ್ಥರನ್ನು ಬದಲಾವಣೆ ಮಾಡಲು ಕಾಯುತ್ತಿದ್ದರು. ಅಂತೂ ಸರಕಾರ ಇದಕ್ಕೆ ಒಪ್ಪಿಗೆಯನ್ನು ನೀಡಿದೆ. ಮುಖ್ಯಸ್ಥರ ಹೆಸರನ್ನು ಬದಲಾವಣೆ ಮಾಡಲು ಯಾವ ನಿಯಮಗಳನ್ನು ಅನುಸರಿಸಬೇಕು?, ಎಲ್ಲಿ ಮುಖ್ಯಸ್ಥರ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರೇಷನ್ ಕಾರ್ಡಿನಲ್ಲಿ ಮುಖ್ಯಸ್ಥರ ಹೆಸರು ಬದಲಾವಣೆಗೆ ಸರ್ಕಾರದಿಂದ ಅವಕಾಶ :

ಹಲವಾರು ಜನರ ಪಡಿತರ ಚೀಟಿಯಲ್ಲಿ ಪುರುಷರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು, ಅಂತವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯುವುದಿಲ್ಲ ಎಂದು ನಿಮಗೆ ತಿಳಿದೇ ಇದೆ. ಹಾಗಾಗಿ ಹಲವು ಜನರು ಪಡಿತರ ಚೀಟಿಯಲ್ಲಿ ಮುಖ್ಯಸ್ಥರ ಬದಲಾವಣೆಯನ್ನು ಮಾಡಲು ನಿರೀಕ್ಷಿಸುತ್ತಿದ್ದರು. ಅಂತವರಿಗೆ ಈ ಅವಕಾಶವೂ ಒಂದು ಸಂತೋಷದ ಸುದ್ದಿ ಎನ್ನಬಹುದು. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಬದಲಾವಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಆಯಾ ಜಿಲ್ಲಾ ಆಹಾರ ಇಲಾಖೆ ಕಚೇರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಈಗಾಗಲೇ ರಾಮನಗರದ ನ್ಯಾಯಬೆಲೆ ಅಂಗಡಿಯಲ್ಲಿ ಮುಖ್ಯಸ್ಥರನ್ನು ಬದಲಾವಣೆ ಮಾಡಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂದು ಉಪ ನಿರ್ದೇಶಕಿ ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

whatss

ಮುಖ್ಯಸ್ಥರ ಬದಲಾವಣೆಯ ನಿಯಮಗಳು :

ಸಂಬಂಧಗಳು ತಪ್ಪಾಗಿ ನಮೂದಾಗಿದ್ದಲ್ಲಿ ಅಥವಾ ಪುರುಷರು ಕುಟುಂಬದ ಮುಖ್ಯಸ್ಥರಾಗಿದ್ದಲ್ಲಿ ಅಂತಹ ಕುಟುಂಬದ ಮುಖ್ಯಸ್ಥರನ್ನಾಗಿ ಮಹಿಳೆಯನ್ನು ಆಯ್ಕೆ ಮಾಡಲು ಅವಕಾಶ ಲಭ್ಯವಿರುತ್ತದೆ ಹಾಗೂ ಪಡಿತರ ಚೀಟಿಯಲ್ಲಿ ಮರಣ ಹೊಂದಿರುವ ಸದಸ್ಯರನ್ನು ತೆಗೆಯಲು ನ್ಯಾಯಬೆಲೆ ಅಂಗಡಿ ಇ-ಕೆವೈಸಿ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಸಾರ್ವಜನಿಕರು ತಮ್ಮ ಪಡಿತರ ಚೀಟಿಗೆ ಸಂಬಂಧಿಸಿದ ಕುಂದು ಕೊರತೆಗಳಿಗೆ ಆಯಾ ತಾಲೂಕಿನ ಆಹಾರ ಶಾಖೆಯನ್ನು ಸಂಪರ್ಕಿಸಲು ತಿಳಿಸಿದೆ.

ರೇಷನ್ ಕಾರ್ಡಿನಲ್ಲಿ ಮುಖ್ಯಸ್ಥರನ್ನು ಬದಲಾಯಿಸುವ ವಿಧಾನ:

ರೇಷನ್ ಕಾರ್ಡ್‌ ಮುಖ್ಯಸ್ಥರ ಹೆಸರು ಬದಲಾವಣೆಗೆ ಹೀಗೆ ಈ ಕೆಳಗಿನ ಹಂತಗಳನ್ನು ಅನುಸರಿಸಿ :
ಮೊದಲಿಗೆ, ನಿಮ್ಮ ಸಮೀಪದ ಪಡಿತರ ಚೀಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.
ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಕ್ಕೆ ಅರ್ಜಿಯನ್ನು ಭರ್ತಿ ಮಾಡಿ.
ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ.
ಬಯೋಮೆಟ್ರಿಕ್‌ ದೃಡೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಿ.
ಪಡಿತರ ಸೇವಾ ಕೇಂದ್ರದಲ್ಲಿ ಮಾಹಿತಿಯನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಲಾಗುತ್ತದೆ.
ಅಲ್ಲಿ ನೀಡಲಾಗುವ ಸ್ವೀಕೃತಿಯನ್ನು ಜಾಗ್ರತೆಯಿಂದ ಸಂರಕ್ಷಿಸಿ ಇಟ್ಟುಕೊಂಡಿರಿ.
ಅರ್ಜಿ ಸಲ್ಲಿಕೆ ನಂತರ, ಆಹಾರ ಕಚೇರಿಯಿಂದ ನಿಮಗೆ ಎಸ್‌ಎಂಎಸ್ ಬರಲಿದೆ
ಎಸ್‌ಎಂಎಸ್‌ ಬಂದ ಬಳಿಕ ನಿಮ್ಮಲ್ಲಿರುವ ಸ್ವೀಕೃತಿ ಪತ್ರವನ್ನು ನೀಡಿ ಹೊಸ (ಮನೆ ಯಜಮಾನಿಯನ್ನು ಬದಲಿಸಿದ) ಪಡಿತರ ಚೀಟಿ ಪಡೆಯಬಹುದು.

ನ್ಯಾಯಬೆಲೆ ಅಂಗಡಿಯಲ್ಲಿ ಹೆಸರು ಬದಲಿಸಬಹುದಾ ?

ನಿಮ್ಮ ನ್ಯಾಯಬೆಲೆ ಅಂಗಡಿಯಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ e-kyc ಮಾಡಿಸಬಹುದು ಮತ್ತು ಮನೆ ಯಜಮಾನಿಯ ಹೆಸರನ್ನು (Ration card Family Head) ಬದಲಿಸಬಹುದು ಮನೆ ಯಜಮಾನ ಹೆಸರನ್ನು ಬದಲಿಸುವ ಆಯ್ಕೆಯನ್ನು ಕೊಟ್ಟಿದ್ದಾರೆ ಆದರೆ ನ್ಯಾಯ ಬೆಲೆ ಅಂಗಡಿಯಲ್ಲಿ ನೀವು ಮನೆ ಯಜಮಾನಿ ಹೆಸರಿನ ಬದಲಾಯಿಸಿದ ಮೇಲೆ ಅದು ಗೃಹಲಕ್ಷ್ಮಿ ಪೋರ್ಟಲ್ ನಲ್ಲಿ ಸದ್ಯಕ್ಕೆ ಬದಲಾಯಿರುವ ಹೆಸರು ಕಾಣುತ್ತಿಲ್ಲ ಎಂದು ನ್ಯಾಯಬೆಲೆಯ ಅಂಗಡಿಯ ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅಗತ್ಯ ದಾಖಲೆಗಳು :

ಪಡಿತರ ಚೀಟಿ,
ಅರ್ಜಿದಾರರ ವಿಳಾಸದ ಹಾಗೂ ಗುರುತಿನ ಪುರಾವೆಗೆ : ಆಧಾರ್ ಕಾರ್ಡ್ ಪ್ರತಿ/ ವೋಟರ್ ಐಡಿ
ಪಾನ್ ಕಾರ್ಡ್
ಹೊಸ ಕುಟುಂಬ ಸದಸ್ಯರ ಪಾಸ್‌ಪೋರ್ಟ್ ಅಳತೆಯ ಫೋಟೋ, ಆಧಾರ್ ಕಾರ್ಡ್.
ಕುಟುಂಬದಲ್ಲಿ ಮರಣವನ್ನು ಹೊಂದಿದ್ದರೆ  ಅವರನ್ನು ಪಡಿತರ ಚೀಟಿಯಿಂದ ತೆಗೆಯಲು ಮರಣ ಪ್ರಮಾಣ ಪತ್ರ ಬೇಕಾಗುತ್ತದೆ.

ಕೆಲವರು ಪಡಿತರ ಚೀಟಿಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಹಿತಿ ಕೇಳಲು ಬರುತ್ತಿದ್ದಾರೆ. ಮೊದಲೇ ದಾಖಲೆ ನೀಡಿದವರಿಗೆ ಕೂಡಲೇ ತಿದ್ದುಪಡಿ ಮಾಡಿಕೊಡಲಾಗುತ್ತಿದೆ. ಹೊಸದಾಗಿ ದಾಖಲೆ ನೀಡಿದವರಿಗೆ ಮುಂದಿನ ದಿನಾಂಕ ಗುರುತಿಸಿ ಟೋಕನ್‌ಗಳನ್ನು ನೀಡಲಾಗುತ್ತಿದೆ.’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!