ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರವ್ಯಾಪಿ ಸಾರ್ವಜನಿಕ ರಜೆ ಸಂವಿಧಾನ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14 ರಂದು ಸಾರ್ವಜನಿಕ ರಜೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. 2025ರ ಏಪ್ರಿಲ್ 14 ಸೋಮವಾರವು ಭಾರತದ ಇತಿಹಾಸದಲ್ಲಿ ಗೌರವಾನ್ವಿತ ದಿನವಾಗಿ ದಾಖಲಾಗಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ರಜೆ.!
ಸಿಬ್ಬಂದಿ ಮತ್ತು ಪಿಂಚಣಿ ಸಚಿವಾಲಯವು ಮಾರ್ಚ್ 27, 2025ರಂದು ಹೊರಡಿಸಿದ ಅಧಿಕೃತ ಜ್ಞಾಪಕ ಪತ್ರದ ಪ್ರಕಾರ, ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ರಜೆ ಹೊಂದಿರುತ್ತವೆ. ಯುಪಿಎಸ್ಸಿ, ಸಿವಿಲ್ ಸರ್ವಿಸಸ್, ಎನ್ಎಚ್ಆರ್ಸಿ, ಎನ್ಎಸ್ಸಿ/ಎಸ್ಟಿ ಆಯೋಗ ಸೇರಿದಂತೆ ಎಲ್ಲಾ ಸಚಿವಾಲಯಗಳಿಗೂ ಈ ನಿರ್ಣಯವನ್ನು ತಿಳಿಸಲಾಗಿದೆ.
ಬಾಬಾಸಾಹೇಬರ ಕೊಡುಗೆ ಮತ್ತು ಸಾಮಾಜಿಕ ಸಂದೇಶ
ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನದ ರಚನೆಗೆ ನಾಂದಿ ಹಾಡಿದ ಮಹಾನ್ ವ್ಯಕ್ತಿತ್ವ. ದಲಿತರು ಮತ್ತು ಶೋಷಿತರ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪ್ರತೀಕವಾಗಿದೆ. ಅವರ ಜನ್ಮದಿನವು ಕೇವಲ ರಜೆಯ ದಿನವಲ್ಲ, ಸಮಾಜದಲ್ಲಿ ಏಕತೆ ಮತ್ತು ಅರಿವನ್ನು ಹರಡುವ ಸಂದರ್ಭ.

ರಾಜಕೀಯ ಮತ್ತು ಸಾಮಾಜಿಕ ನಾಯಕರ ಪ್ರತಿಕ್ರಿಯೆ
- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಈ ನಿರ್ಣಯವನ್ನು ಸ್ವಾಗತಿಸಿ, “ಮೋದಿ ಸರ್ಕಾರದ ಈ ನಿರ್ಣಯ ಅಂಬೇಡ್ಕರ್ ಅವರಿಗೆ ಸಲ್ಲಿಸಿದ ಗೌರವ” ಎಂದು ಟ್ವೀಟ್ ಮಾಡಿದ್ದಾರೆ.
- ಬಿಜೆಪಿ ನಾಯಕ ವಿ. ಸೋಮಣ್ಣ ಹೇಳಿದ್ದು, “ಬಾಬಾಸಾಹೇಬರ ಸಮ ಸಮಾಜದ ಕನಸನ್ನು ನನಸುಮಾಡಲು ಬಿಜೆಪಿ ಬದ್ಧವಾಗಿದೆ.”
- ವಿಜಯೇಂದ್ರ ಏನಂದ್ರು ಅವರು “ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ದರ್ಶನವೇ ಭಾರತದ ಶಕ್ತಿ” ಎಂದು ಹೇಳಿದ್ದಾರೆ.
ಸಾರ್ವಜನಿಕ ಆಚರಣೆಗಳು
- ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ.
- ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂವಾದಗಳು ಮತ್ತು ಸಮಾಜ ಸೇವಾ ಚಟುವಟಿಕೆಗಳು ನಡೆಯಲಿವೆ.
- ಪಿಐಬಿ, ಡಿಒಪಿಟಿ ಮತ್ತು ಶಾಸ್ತ್ರಿ ಭವನ ವೆಬ್ಸೈಟ್ಗಳಲ್ಲಿ ಈ ರಜೆಯ ವಿವರಗಳನ್ನು ಪ್ರಕಟಿಸಲಾಗಿದೆ.
ಮೋದಿ ಸರ್ಕಾರದ ಈ ನಿರ್ಣಯ ಡಾ. ಅಂಬೇಡ್ಕರ್ ಅವರಿಗೆ ಸಲ್ಲಿಸಿದ ಗೌರವದಾಸನ. ಅವರ ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜನಮನದಲ್ಲಿ ಬಿತ್ತುವ ದಿನವಾಗಿ ಏಪ್ರಿಲ್ 14 ಅನ್ನು ಆಚರಿಸೋಣ!
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply