ಹೊಸ ʻAPL-BPLʼ ರೇಷನ್ ಕಾರ್ಡ್ ಈ ದಿನದೊಳಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ – ಕೆ. ಎಚ್ ಮುನಿಯಪ್ಪ

new ration card 2

ಈಗಾಗಲೇ ಹಲವಾರು ದಿನಗಳಿಂದ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರ ಮೊಗದಲ್ಲಿ ನಗುವರಳಲಿದೆ. ಹೊಸ ಎಪಿಎಲ್‌, ಬಿಪಿಎಲ್‌ ಸೇರಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2.5 ಲಕ್ಷಕ್ಕೂ ಅಧಿಕ ಮಂದಿ ರೇಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ಈ ಕಾರ್ಡ್‌ಗಳನ್ನು ಚೆಕ್ ಮಾಡುವ ಕಾರ್ಯ ನಡೆಯುತ್ತಿದೆ. ಯಾರೆಲ್ಲಾ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಹರೋ ಅವರಿಗೆ ಆದಷ್ಟು ಬೇಗ ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ನೀಡಲು ಆಹಾರ ಮತ್ತು ನಾಗರಿಕರ ಇಲಾಖೆ(Department of Food and Civil) ಮುಂದಾಗಿದೆ. ಬಿಪಿಎಲ್‌(BPL) ಪಡಿತರ ಕಾರ್ಡ್‌ಗಾಗಿ(Ration card ) ಅರ್ಜಿ ಸಲ್ಲಿಸಿ ಕಾಯುತ್ತಿದ್ದವರಿಗೆ ಮತ್ತೊಂದು ಸಿಹಿಸುದ್ದಿ ಇದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

15 ದಿನದೊಳಗೆ ಹೊಸ ಪಡಿತರ ಚೀಟಿ ವಿತರಣೆ :

ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ.

tel share transformed

6ತಿಂಗಳಿನಿಂದ ರೇಷನ್‌ ಪಡೆಯದ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಪೈಕಿ ಒಟ್ಟು 3.26 ಲಕ್ಷ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡಲು ಮುಂದಾಗಿದೆ. ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್‌ ಕಾರ್ಡ್ದಾರರು ಆರು ತಿಂಗಳಿಂದ ರೇಷನ್ ಪಡೆಯುತ್ತಿಲ್ಲ ಎಂದು ಇಲಾಖೆ ಹೇಳಿದೆ. ಇಂತಹ ಕಾರ್ಡ್‌ಗಳ ರದ್ದತಿಗೆ ಸರ್ಕಾರ ಸೂಚನೆ ಕೊಟ್ಟಿದೆ.

ಇಂಥವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ :

ಅನರ್ಹರು ಬಿಪಿಎಲ್‌ ಕಾರ್ಡ್‌(BPL card)ಪಡೆದಿದ್ದರೆ ಅಂತಹವರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇವು ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲಾಗುವುದು. ಇದರ ಜೊತೆಗೆ, ಪಡಿತರ ಅಕ್ಕಿ ದುರುಪಯೋಗವಾದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಇಂತಹ ದೂರುಗಳು ಬಂದ ಕಡೆ ತನಿಖೆ ಮಾಡಿಸುತ್ತೇವೆ ಎಂದು ತಮ್ಮ ಮಾತಿನಲ್ಲಿ ಕೆ.ಎಚ್‌. ಮುನಿಯಪ್ಪ ಅವರು ಸೇರಿಸಿದ್ದಾರೆ.

2013 ರಲ್ಲಿ ಆಹಾರ ಭದ್ರತೆ ಕಾಯ್ದೆಯನ್ನು ಯುಪಿಎ(UPA) ಸರ್ಕಾರವು ಅನ್ನಭಾಗ್ಯ ಯೋಜನೆ(Annabhagya yojana)ಯನ್ನು ಜಾರಿಗೆ ತಂದಿತ್ತು. ಈಗ ಕೇಂದ್ರ ಸರ್ಕಾರ(BJP) ಈ ಯೋಜನೆಯನ್ನು ಮುನ್ನಡೆಸುತ್ತಿದೆ. ರಾಜ್ಯ ಸರಕಾರವು ತನ್ನ ಗ್ಯಾರಂಟಿ ಯೋಜನೆಯಲ್ಲಿ ತಿಳಿಸಿರುವ ಪ್ರಕಾರ ಪ್ರತಿ ರೇಷನ್ ಕಾರ್ಡ್ ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು. ಈ ಕಾರ್ಯಕ್ಕಾಗಿಯೇ ರಾಜ್ಯ ಸರ್ಕಾರವು(state government) ಹೆಚ್ಚಿನ 5 ಕೆಜಿ ಅಕ್ಕಿಯನ್ನು ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವೀ ಮಾಡಿಕೊಂಡಿತ್ತು. ಆದರೆ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಈ ಮನವೀಗೆ ಸ್ವೀಕೃತಿ ನೀಡಲಿಲ್ಲ, ಅಕ್ಕಿಯನ್ನು ಒದಗಿಸಲಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕೀಯ ಮಾಡಿದೆ ಎಂದು ಸಚಿವರು ಟೀಕಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಆಂಧ್ರ ಪ್ರದೇಶ, ತೆಲಂಗಾಣ, ಛತ್ತೀಸ್ಗಢ ಮೊದಲಾದ ರಾಜ್ಯಗಳಲ್ಲಿ ಅಕ್ಕಿ ಹೆಚ್ಚಾಗಿ ಬೆಳೆಯುವುದರಿಂದ ಅಲ್ಲಿ ಹಣಕೊಟ್ಟು ಅಕ್ಕಿಯನ್ನು ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸದ್ಯ 10 ಕೆಜಿ ಯ ಬದಲಾಗಿ, ಸರ್ಕಾರವು ಪಡೆತರ ವಿತಕರಿಗೆ 5 ಕೆಜಿ ಅಕ್ಕಿ ಕಮಿಷನ್ (commission) ಹಾಗೂ ಇನ್ನೂಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಒದಗಿಸುತ್ತಿದೆ. ಈ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಬೇಕಾಗುವಷ್ಟು ಅಕ್ಕಿ ಸಿಕ್ಕ ತಕ್ಷಣ ಹಣ ಕೊಡುವುದನ್ನು ನಿಲ್ಲಿಸಿ, ಫಲಾನುಭವಿಗಳಿಗೆ ಅಕ್ಕಿಯನ್ನು ಕೊಡಲಾಗುವುದು ಎಂದು ಹೇಳಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!