new bullet train scaled

Bullet Trains : ದೇಶದಲ್ಲಿ ಮತ್ತೇ ಮೂರು ಬುಲೆಟ್ ಟ್ರೈನ್ ಯೋಜನೆ ಜಾರಿ : ಪ್ರಧಾನಿ ಮೋದಿ

WhatsApp Group Telegram Group

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಕಾಂಗ್ರೆಸ್ ನಿಂದ ಬರೋಬ್ಬರಿ 25 ಗ್ಯಾರಂಟಿಗಳೊಂದಿಗೆ ಚುನಾವಣೆಯಲ್ಲಿ ಎದುರಿಸುತ್ತಿದ್ದರೆ, ಇತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಮತ್ತೆ ಮೂರು ಬುಲೆಟ್ ಟ್ರೈನ್ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ರವಿವಾರ 2024ರ ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಪಿಎಂ ಮೋದಿ, ದೇಶದ ಉತ್ತರ, ಪೂರ್ವ ಮತ್ತು ದಕ್ಷಿಣ ಭಾಗಕ್ಕೆ ಬುಲೆಟ್ ಟ್ರೈನ್(bullet train) ನೀಡುವುದಾಗಿ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ಮುಂಬೈ ಅಹಮದಾಬಾದ್ ಬುಲೆಟ್ ರೈಲಿನ ಕಾಮಗಾರಿ ಭರದಿಂದ ಸಾಗುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ.

Webp.net resizeimage 3 2

ಅದೇ ರೀತಿ ಉತ್ತರ ಭಾರತದಲ್ಲಿ ಒಂದು ಬುಲೆಟ್ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್ ರೈಲು ಮತ್ತು ಪೂರ್ವ ಭಾರತದಲ್ಲಿ ಒಂದು ಬುಲೆಟ್ ರೈಲು ಓಡಲಿದೆ. ಇದಕ್ಕಾಗಿ ಸಮೀಕ್ಷಾ ಕಾರ್ಯವೂ ಶೀಘ್ರದಲ್ಲೇ ಆರಂಭವಾಗಲಿದೆ,’’ ಎಂದು ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಬಿಜೆಪಿಯ ‘ಸಂಕಲ್ಪ ಪತ್ರ’ ಅನಾವರಣಗೊಳಿಸಿದ ಬಳಿಕ ಪ್ರಧಾನಿ ಹೇಳಿದರು.

ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ ನ ಒಟ್ಟು ವೆಚ್ಚವನ್ನು 1.08 ಲಕ್ಷ ಕೋಟಿ ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರವು ಎನ್‌ಎಚ್‌ಎಸ್‌ಆರ್‌ಸಿಎಲ್‌ ಗೆ 10,000 ಕೋಟಿ ರೂಪಾಯಿಗಳನ್ನು ಪಾವತಿಸಬೇಕಿದ್ದರೆ, ಯೋಜನೆಯಲ್ಲಿ ಒಳಗೊಂಡಿರುವ ಎರಡು ರಾಜ್ಯಗಳಾದ ಗುಜರಾತ್ ಮತ್ತು ಮಹಾರಾಷ್ಟ್ರಗಳು ತಲಾ 5,000 ಕೋಟಿ ರೂ. ಪಾವತಿಸಲಿದೆ.

508-ಕಿಮೀ ಉದ್ದದ ಮುಂಬೈ-ಅಹಮದಾಬಾದ್ ಕಾರಿಡಾರ್‌ ನ ಭಾಗವಾಗಿರುವ ಮಹಾರಾಷ್ಟ್ರದ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳಲ್ಲಿ ಬುಲೆಟ್ ರೈಲು ಕೆಲಸ ಪ್ರಾರಂಭವಾಗಿದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಘೋಷಿಸಿದ ಕೆಲವೇ ದಿನಗಳಲ್ಲಿ ಮೋದಿ ಈ ಹೇಳಿಕೆಗಳು ಬಂದಿವೆ.

ಇದೇ ವೇಳೆ, ಬಿಜೆಪಿ ವಂದೇ ಭಾರತ್ ರೈಲುಗಳನ್ನು ದೇಶದ ಮೂಲೆ ಮೂಲೆಗೆ ವಿಸ್ತರಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Popular Categories