ಮುಖ್ಯ ವಿವರಗಳು:
ಕರ್ನಾಟಕ ಸರ್ಕಾರವು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ (Defined Pension Scheme) ಒಳಪಟ್ಟ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 247-A ಅನ್ವಯವಾಗಿ, ನೌಕರರ ಅರ್ಹತಾದಾಯಕ ಸೇವೆಯನ್ನು ಪಿಂಚಣಿ ಸೌಲಭ್ಯಕ್ಕಾಗಿ ಪರಿಗಣಿಸಲು ಹೊಸ ಆದೇಶ ಹೊರಡಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾವಾಗ ಈ ಯೋಜನೆ ಜಾರಿಗೆ ಬಂದಿದೆ?
- 01.04.2006 ರಂದು ಅಥವಾ ಅನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರಿಗೆ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನೆ (NPS) ಕಡ್ಡಾಯವಾಗಿ ಅನ್ವಯಿಸಲಾಗುತ್ತದೆ.
- ಆದರೆ, 31.03.2006 ರೊಳಗೆ ನೇಮಕಗೊಂಡ ನೌಕರರು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಟ್ಟಿರುತ್ತಾರೆ.
ವಿಶೇಷ ಸಂದರ್ಭಗಳಿಗೆ ಸಡಿಲಿಕೆ:
ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, 1.4.2006 ರ ನಂತರ ನೇಮಕಗೊಂಡ ನೌಕರರನ್ನು ಸಹ ಡಿಫೈನ್ ಪಿಂಚಣಿ ಯೋಜನೆಗೆ ಸೇರಿಸಲು ಅನುಮತಿ ನೀಡಲಾಗಿದೆ. ಇದಕ್ಕೆ ಕೆಲವು ಷರತ್ತುಗಳು ಅನ್ವಯಿಸುತ್ತವೆ.
OPS ಯೋಜನೆಯೊಂದಿಗೆ ಸಂಬಂಧ:
- 17.02.2021 ಮತ್ತು 24.01.2024 ರ ಸರ್ಕಾರಿ ಆದೇಶಗಳ ಪ್ರಕಾರ, ಹಳೆಯ ಪಿಂಚಣಿ ಯೋಜನೆ (OPS)ಗೆ ಸೇರಿದ ನೌಕರರಿಗೆ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ.
- 11-05-2025 ರಂದು ಹೊಸ ಆದೇಶ ಹೊರಡಿಸಿ, ಡಿಫೈನ್ ಪಿಂಚಣಿ ಯೋಜನೆಗೆ ಸೇರಿದ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಬದಲಿಗೆ, ನಾಲ್ಕನೇ ಭಾಗದ (Part IV) ನಿಯಮಗಳು ಅನ್ವಯಿಸುತ್ತವೆ.


ಮುಂದಿನ ಕ್ರಮ:
ಈ ನಿರ್ಣಯಕ್ಕೆ ಅನುಗುಣವಾಗಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗುವುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.