BREAKING NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸಬೇಡಿ, ಸರ್ಕಾರದಿಂದ ವಿವಾದಾತ್ಮಕ ಸುತ್ತೋಲೆ!

WhatsApp Image 2023 10 19 at 8.42.21 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಸರಾ, ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿಯನ್ನು ರಾಜ್ಯ ಸರ್ಕಾರ(state government) ನಿಷೇಧ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಯುಧ ಪೂಜೆಯ ಸಮಯದಲ್ಲಿ, ನಿಮಗೆಲ್ಲರಿಗೂ ತಿಳಿದಿರುವಂತೆ ಕುಂಬಳಕಾಯಿಯನ್ನು ಒಡೆಯಲಾಗುತ್ತದೆ. ಅದರ ಒಳಗೆ ಅರಿಶಿಣ ಕುಂಕುಮವನ್ನು ಹಾಕಿ ಓಡೆಯುವುದು ಪದ್ಧತಿ ಇದೆ. ಆದರೆ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಆಯುಧ ಪೂಜೆಯಲ್ಲಿ ಕುಂಕುಮ ಬಳಕೆಯ ನಿಷೇಧದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ :

ಹಿಂದೂ ಸಂಪ್ರದಾಯದ ಪ್ರಕಾರ ಹಬ್ಬ ಹರಿ ದಿನಗಳಲ್ಲಿ ಕುಂಕುಮ ಅರಿಶಿಣ ಮತ್ತು ರಂಗೋಲಿಯನ್ನು ಬಳಸುವುದು ಪ್ರಮುಖವಾಗಿದೆ ಹಾಗೂ ಇದು ಹಿಂದಿನ ಕಾಲದಿಂದಲೂ ನಡೆಯುತ್ತಾ ಬಂದಿದೆ. ಆದರೆ ಸರ್ಕಾರವು, ವಿಧಾನಸೌಧ ವಿಕಾಸಸೌಧ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ವೇಳೆಯಲ್ಲಿ ಕುಂಬಳಕಾಯಿ ಒಳಗೆ ಹಾಗೂ ಬಣ್ಣ ಬಣ್ಣದ ಕೆಮಿಕಲ್ ಉಳ್ಳ ರಂಗೋಲಿಯನ್ನು ಬಳಸಬಾರದೆಂದು ಆದೇಶ ನೀಡಿದೆ. ಇದಕ್ಕೆ ಬಿಜೆಪಿ ನಾಯಕರಿಂದ ಭಾರಿ ದೊಡ್ಡ ಮಟ್ಟದ ವಿರೋಧವೂ ವ್ಯಕ್ತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹಿಂದೂ ದ್ವೇಷಿ ಸುತ್ತೋಲೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಮಂದಿ ಅಸಮಾಧಾನ ಹೊರಹಾಕಿದ್ದರು.

F8xIw5XWUAAh1p3

ಇದರ ಕುರಿತು ಸಿದ್ದರಾಮಯ್ಯನವರ ಸ್ಪಷ್ಟನೆ:

ರಾಸಾಯನಿಕಯುಕ್ತ ಬಣ್ಣಗಳನ್ನು ವಿಧಾನಸೌಧ ವಿಕಾಸಸೌಧ ಹಾಗೂ ಬಹು ಮಹಡಿಯ ಕಟ್ಟಡಗಳ ಒಳಗೆ ಮತ್ತು ಕಾಲಿಡಾರ್ ಗಳಲ್ಲಿ ಬಳಸುವುದರಿಂದ ಅದರ ಕಲೆಗಳು ನೆಲೆಗಳಲ್ಲಿ ಬಿದ್ದು, ಕಟ್ಟಡದ ಸೌಂದರ್ಯಕ್ಕೆ ದಕ್ಕೆ ಉಂಟಾಗುತ್ತದೆ. ಸರ್ಕಾರ ಹೊರಡಿಸಿರುವ ಈ ಸುತ್ತೋಲೆಯು ಹೊಸದೇನಲ್ಲ, ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದೆ ಎಂದು ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಪೂಜಾ ದಿನದಂದು ಕಛೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಹಾಗೂ ವಿದ್ಯುತ್‌ ಸ್ವಿಚ್‌ಗಳನ್ನು ನಂದಿಸಿ ತೆರಳುವಂತೆ ಸೂಚಿಸಲಾಗಿದೆ. ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ವ್ಯವಸ್ಥಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ, ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಇದರ ಕುರಿತಾದ ಚರ್ಚೆ :

ಸಾಮಾಜಿಕ ಜಾಲತಾಣದಲ್ಲಿ ಇದರ ಕುರಿದಾದ ಚರ್ಚೆ ಹೆಚ್ಚಾಗಿದೆ. ತಮಿಳುನಾಡಿನಲ್ಲಿಯೂ ಕೂಡ ಇದೇ ರೀತಿಯ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ. ಇದರ ಕುರಿತಾಗಿ ಸಂಸದ ತೇಜಸ್ವಿಯವರು ಮಾಡಿದ್ದಾರೆ. ಅದರಲ್ಲಿ- ‘ಎರಡು ರಾಜ್ಯ, ಎರಡು ರಾಜ್ಯ ಸರ್ಕಾರಗಳು. ಆದರೆ ಒಂದೇ ಗುರಿ ಅದು ಆಯುಧ ಪೂಜೆ. ಇಂಡಿ ಮೈತ್ರಿ ಪಕ್ಷಗಳ ನಡುವೆ ನೂರು ಭಿನ್ನಾಭಿಪ್ರಾಯಗಳಿರಬಹುದು, ಆದರೆ ಅವರು ಈ ನೆಲದ ಸ್ಥಳೀಯ ಸಂಸ್ಕೃತಿಯ ಮೇಲಿನ ದ್ವೇಷ ಮತ್ತು ತಿರಸ್ಕಾರದ ವಿಚಾರದಲ್ಲಿ ಮಾತ್ರ ಖಂಡಿತವಾಗಿ ಒಂದಾಗುತ್ತಾರೆ. ಆಯುಧ ಪೂಜೆಯ ಸಮಯದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಹೂವುಗಳು, ಕುಂಕುಮ, ಅರಿಶಿನ ಮತ್ತು ಇತರ ಪೂಜೆ ಅಗತ್ಯ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಿ ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂ ಇಂದು ಸರ್ಕಾರಿ ಸುತ್ತೋಲೆಯನ್ನು ಹೊರಡಿಸಿದೆ. ವರ್ಷಗಳಿಂದ, ದಕ್ಷಿಣ ಭಾರತದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಉದ್ಯೋಗಿಗಳು ಆಯುಧ ಪೂಜೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ಮಹತ್ವದ ಸಾಂಸ್ಕೃತಿಕ ಆಚರಣೆಗೆ ಇದೀಗ ಇಂಡಿ ಒಕ್ಕೂಟ ತನ್ನ ಟಾರ್ಗೆಟ್‌ಅನ್ನಾಗಿ ಮಾಡಿಕೊಂಡಿದೆ’ ಎಂದು ಟ್ವೀಟ್ ಮುಖಾಂತರ ಹೇಳಿದ್ದಾರೆ.

whatss

Ration card update – ರೇಷನ್ ಕಾರ್ಡ್‌ದಾರರಿಗೆ ಇಂದಿನಿಂದ ಹೊಸ ರೂಲ್ಸ್‌ ಜಾರಿ : ಕೇಂದ್ರದ ಮಹತ್ವದ ಘೋಷಣೆ

 Gruhalakshmi – ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಕಾಲಾವಕಾಶ – ಯಾವ ಜಿಲ್ಲೆಗೆ ಯಾವ ದಿನ ಇಲ್ಲಿದೆ ಕಂಪ್ಲೀಟ್ ಮಾಹಿತಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!