ಮುಖ್ಯಾಂಶಗಳು
- 2026ರಲ್ಲಿ ಗರಿಷ್ಠ 15 ದಿನಗಳ ರಜೆ ನಗದೀಕರಣಕ್ಕೆ ಮಾತ್ರ ಅವಕಾಶ.
- ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಹೊಸ ನಿಯಮ ಅನ್ವಯ.
- ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳ ನೌಕರರಿಗೂ ಈ ಆದೇಶ ಅನ್ವಯ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು 2026ನೇ ಸಾಲಿನ ‘ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ’ (Encashment of Earned Leave) ಸೌಲಭ್ಯದ ಬಗ್ಗೆ ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶವು ನೌಕರರಿಗೆ ರಜೆ ನಗದೀಕರಣದ ಮಿತಿಯನ್ನು ಮತ್ತು ಪ್ರಕ್ರಿಯೆಯನ್ನು ಸ್ಪಷ್ಟಪಡಿಸಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಹೀಗಿದೆ
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31.12.2025 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2026 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. ಅದರಂತೆ ಈ ಆದೇಶಿಸಿದ್ದಾರೆ.
2026 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಸೌಲಭ್ಯವು ದಿನಾಂಕ:1.1.2026 ರಿಂದ 31.12.2026ರ ಅವಧಿಯವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ 15 ದಿನಗಳ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ ಎಂದಿದ್ದಾರೆ.
ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂದು ಹೇಳಿದ್ದಾರೆ.
ಗೆಜೆಟೆಡ್ ಅಧಿಕಾರಿಗಳ ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದಂತೆ, 2026 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್ಆರ್ಎಂಎಸ್ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದು ತಿಳಿಸಿದ್ದಾರೆ.
ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಹೇಳಿದ್ದಾರೆ.


ಏನಿದು ಹೊಸ ಆದೇಶ?
ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ (KCSR) ನಿಯಮ 118(2)(i) ಅಡಿಯಲ್ಲಿ ಸರ್ಕಾರ ಪ್ರತಿ ವರ್ಷ ನೌಕರರಿಗೆ ಗಳಿಕೆ ರಜೆ ಅಧ್ಯರ್ಪಿಸಿ ಹಣ ಪಡೆಯಲು ಅವಕಾಶ ನೀಡುತ್ತದೆ. ಈಗ 2026ರ ಬ್ಲಾಕ್ ಅವಧಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಹೊಸ ಅಧಿಕೃತ ಆದೇಶ ಹೊರಡಿಸಿದೆ. ಈ ನಿಯಮವು ಕೇವಲ ಸರ್ಕಾರಿ ನೌಕರರಿಗೆ ಮಾತ್ರವಲ್ಲದೆ, ಸರ್ಕಾರದ ಅಧೀನದಲ್ಲಿರುವ ನಿಗಮ ಮಂಡಳಿಗಳು ಮತ್ತು ಅನುದಾನಿತ ಸಂಸ್ಥೆಗಳಿಗೂ ಅನ್ವಯವಾಗಲಿದೆ.
ಮುಖ್ಯವಾಗಿ ನೀವು ತಿಳಿಯಲೇಬೇಕಾದ ಅಂಶಗಳು:
- ದಿನಗಳ ಮಿತಿ: ಈ ಬಾರಿ ನೀವು ಗರಿಷ್ಠ 15 ದಿನಗಳ ಗಳಿಕೆ ರಜೆಯನ್ನು ಮಾತ್ರ ನಗದೀಕರಣ ಮಾಡಿಕೊಳ್ಳಬಹುದು.
- ಅರ್ಜಿ ಸಲ್ಲಿಕೆ: ನಿಮಗೆ ಹಣ ಬೇಕಾದ ತಿಂಗಳಿಗಿಂತ ಒಂದು ತಿಂಗಳು ಮುಂಚಿತವಾಗಿ ಮನವಿ ಪತ್ರ ಸಲ್ಲಿಸುವುದು ಕಡ್ಡಾಯ.
- ಅವಧಿ: ಈ ಸೌಲಭ್ಯವು 2026ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಲಭ್ಯವಿರುತ್ತದೆ.
2026ರ ರಜೆ ನಗದೀಕರಣದ ವಿವರ
| ವಿವರ | ಮಾಹಿತಿ |
|---|---|
| ಗರಿಷ್ಠ ದಿನಗಳು | 15 ದಿನಗಳು ಮಾತ್ರ |
| ಬ್ಲಾಕ್ ಅವಧಿ | 01-01-2026 ರಿಂದ 31-12-2026 |
| ಯಾರಿಗೆ ಅನ್ವಯ? | ಎಲ್ಲಾ ರಾಜ್ಯ ಸರ್ಕಾರಿ ನೌಕರರು & ಅನುದಾನಿತ ಸಂಸ್ಥೆಗಳು |
| ಅರ್ಜಿ ಸಲ್ಲಿಕೆ ಸಮಯ | ಕನಿಷ್ಠ 1 ತಿಂಗಳು ಮುಂಚಿತವಾಗಿ |
ಪ್ರಮುಖ ಸೂಚನೆ: ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು (ಹಣವನ್ನು) ಆಯಾ ಆರ್ಥಿಕ ವರ್ಷ ಮುಗಿಯುವ ಮೊದಲೇ ಪಡೆದುಕೊಳ್ಳಬೇಕು. ವಿಳಂಬವಾದರೆ ತಾಂತ್ರಿಕ ತೊಂದರೆ ಎದುರಾಗಬಹುದು.
ನಮ್ಮ ಸಲಹೆ
ಸಲಹೆ: ಗೆಜೆಟೆಡ್ ಅಧಿಕಾರಿಗಳು ತಮ್ಮ HRMS (Human Resource Management System) ನಲ್ಲಿ ರಜೆ ಲೆಕ್ಕಾಚಾರ ಸರಿಯಾಗಿದೆಯೇ ಎಂದು ಮೊದಲು ಪರಿಶೀಲಿಸಿಕೊಳ್ಳಿ. ಒಂದು ವೇಳೆ ಲೆಕ್ಕಾಚಾರದಲ್ಲಿ ವ್ಯತ್ಯಾಸವಿದ್ದು, ಹೆಚ್ಚು ಹಣ ಪಡೆದರೆ ಮುಂದೆ ಮಹಾಲೇಖಪಾಲರ (AG) ತಪಾಸಣೆ ವೇಳೆ ಅದನ್ನು ಮರುಪಾವತಿಸಬೇಕಾಗುತ್ತದೆ. ಹಾಗಾಗಿ, ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ರಜೆ ಖಾತೆಯನ್ನು (Leave Account) ಅಪ್ಡೇಟ್ ಮಾಡಿಕೊಳ್ಳಿ.
ಸಾಮಾನ್ಯ ಪ್ರಶ್ನೆಗಳು (FAQs)
ಪ್ರಶ್ನೆ 1: ನಾನು 30 ದಿನಗಳ ರಜೆಯನ್ನು ನಗದೀಕರಣ ಮಾಡಿಕೊಳ್ಳಬಹುದೇ?
ಉತ್ತರ: ಇಲ್ಲ, ಸರ್ಕಾರದ ಹೊಸ ಆದೇಶದ ಪ್ರಕಾರ 2026ರ ಸಾಲಿನಲ್ಲಿ ಗರಿಷ್ಠ 15 ದಿನಗಳಿಗೆ ಮಾತ್ರ ಮಿತಿ ಹೇರಲಾಗಿದೆ.
ಪ್ರಶ್ನೆ 2: ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಇದು ಅನ್ವಯವಾಗುತ್ತದೆಯೇ?
ಉತ್ತರ: ಹೌದು, ಸರ್ಕಾರದ ಅಧೀನದ ಅಥವಾ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಯನ್ನು ಆಧರಿಸಿ ಈ ಸೌಲಭ್ಯ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




