New Ration card: ಹೊಸ ರೇಷನ್ ಕಾರ್ಡ್ ಅರ್ಜಿ ಗೆ ಈ ದಾಖಲೆಗಳು ಕಡ್ಡಾಯ! ಈಗಲೇ ರೆಡಿ ಮಾಡಿಕೊಳ್ಳಿ!

ration card update

ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ವೆಬ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್‌ ಮಾಡಲಾಗಿತ್ತು. ಇನ್ನು ಈಗಾಗಲೇ ಕಾರ್ಡ್ ಇದ್ದವರು ತಿದ್ದುಪಡಿಗೆ ಸರ್ವರ್ ಸಮಸ್ಯೆಯಿಂದ ತಿದ್ದುಪಡಿ ಕೇಂದ್ರಗಳಿಗೆ ಅಲೆದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಬಂಪರ್ ಗುಡ್ ನ್ಯೂಸ್ ಬಂದಿದ್ದು, ಶೀಘ್ರದಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಹೊಸದಾಗಿ ಅರ್ಜಿ ಸ್ವೀಕಾರ ಆರಂಭಿಸುವುದಾಗಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೊಸ ರೇಷನ್ ಕಾರ್ಡ್‌ (New Ration Card Application)

ಕಾಂಗ್ರೆಸ್‌ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್‌ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಪಡಿಸಿದಕ್ಕಾಗಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ( KH Muniyappa ) ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಶೀಘ್ರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:

– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು

– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.

– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು

– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ಹೊಸ ರೇಷನ್‌ ಕಾರ್ಡ್‌ ಪಡೆಯಲು ಅಗತ್ಯ ದಾಖಲೆಗಳು

ಆಧಾರ್‌ ಕಾರ್ಡ್‌,
ಮನೆಯ ಸದಸ್ಯರ ಆಧಾರ್‌ ಕಾರ್ಡ್‌ಗಳು,
ಆದಾಯ, ಜಾತಿ, ನಿವಾಸ ಪ್ರಮಾಣ ಪತ್ರ
ಮೊಬೈಲ್‌ ಸಂಖ್ಯೆ (ಕಡ್ಡಾಯ)
ಬಾಡಿಗೆದಾರರಿಗೆ ಒಪ್ಪಂದ ಪತ್ರ‌ (ಕಡ್ಡಾಯ)

ಅರ್ಜಿ ಸಲ್ಲಿಸುವುದು ಹೇಗೆ:

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!