ಹೊಸದಾಗಿ ಪಡೆತರ ಚೀಟಿ (Ration Card)ಗಾಗಿ ಕೋರಿ ಅರ್ಜಿ ಸಲ್ಲಿದವರಿಗೆ ಶೀಘ್ರದಲ್ಲಿ ಪಡೆತರ ಚೀಟಿಯನ್ನು ವಿತರಣೆ ಮಾಡಲಾಗುವುದು. ಈ ಕುರಿತು ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹೊಸ ರೇಷನ್ ಕಾರ್ಡ್ ವಿತರಣೆಗೆ ಮುಂದಾದ ಸರ್ಕಾರ
ಚುನಾವಣೆ ಕಾರಣದಿಂದಾಗಿ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿದ್ದು, ಜೂನ್ ಅಂತ್ಯಕ್ಕೆ ಒಟ್ಟು 2,95,986 ಅರ್ಜಿ ಬಾಕಿ ಉಳಿದಿವೆ. ಈ ಅರ್ಜಿದಾರರ ಸ್ಥಳ ಪರಿಶೀಲಿಸಲಾಗುವುದು. ಬಳಿಕ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಹೊಸ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು. ತುರ್ತು ವೈದ್ಯಕೀಯ ಕಾರಣಗಳಿಗೆ ಹೊಸ ಪಡಿತರ ಚೀಟಿ ವಿತರಣೆಗೆ ಅನುಮತಿ ನೀಡಲಾಗುವುದು ಎಂದು ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯಲ್ಲಿ(News conference) ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿದ್ದಾರೆ.
ಹೊಸ ಪಡೆತರ ಚೀಟಿ (Ration Card)ಗಾಗಿ ಕೋರಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ, ಅರ್ಜಿಗಳನ್ನು ಪರಿಶೀಲಿಸಿ ಶೀಘ್ರದಲ್ಲಿ ಅರ್ಹರಿಗೆ ಪಡಿತರ ಚೀಟಿ ಕೈ ಸೇರಲಿದೆ, ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇಂಥವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ :
ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅನರ್ಹರು ಬಿಪಿಎಲ್ ಕಾರ್ಡ್(BPL card)ಪಡೆದಿದ್ದರೆ ಅಂತಹವರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇವು ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲಾಗುವುದು. ಇದರ ಜೊತೆಗೆ, ಪಡಿತರ ಅಕ್ಕಿ ದುರುಪಯೋಗವಾದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಇಂತಹ ದೂರುಗಳು ಬಂದ ಕಡೆ ತನಿಖೆ ಮಾಡಿಸುತ್ತೇವೆ ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




