ration card 3

ಹೊಸ ಪಡಿತರ ಚೀಟಿ ವಿತರಣೆಗೆ ಮಹೂರ್ತ ಫಿಕ್ಸ್, ಈ ದಿನ ಸಿಗದೆ ಹೊಸ ರೇಷನ್ ಕಾರ್ಡ್ – ಸಚಿವ ಮುನಿಯಪ್ಪ

WhatsApp Group Telegram Group

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರೇಷನ್​ ಕಾರ್ಡ್​ ಹೋಲ್ಡರ್​ಗಳಿಗೆ ಹೆಚ್ಚು ಪ್ರಾಮುಖ್ಯತೆ ಸಿಗುತ್ತಿದೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್​ ಕಾರ್ಡ್​ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್​ ಕಾರ್ಡ್​​​ ಪಡೆಯಲು ಕಾದು ಕುಳಿತಿದ್ದಾರೆ. ಹೌದು ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಬಂದಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 

ಹೊಸ ಪಡಿತರ ಚೀಟಿ ಹಂಚಿಕೆ ಯಾವಾಗ?

ರಾಜ್ಯಾದ್ಯಂತ ಪಡಿತರ ಚೀಟಿಗೆ (Ration Card) ಸಲ್ಲಿಸಿರುವ ಅರ್ಜಿಗಳನ್ನು ಇದೇ ಬರುವ ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ (KH Muniyappa) ಸದನದಲ್ಲಿ ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್​ ಅರ್ಜಿ ಸಲ್ಲಿಕೆ & ತಿದ್ದುಪಡಿ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ, ಹಾಗಾಗಿ ರಾಜ್ಯದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಬೇಕೆಂದು ಶಾಸಕಿ ನಯನ ಮೋಟಮ್ಮ ಮತ್ತು ವಿರೋಧಪಕ್ಷದ ನಾಯಕ ಆರ್ ಅಶೋಕ್ ಪ್ರಶ್ನೆ ಕೇಳಿದರು.

57 ಸಾವಿರ ಹೊಸ ಕಾರ್ಡ್ ವಿತರಣೆ

ಇದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಮುನಿಯಪ್ಪ, ವಿಧಾಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್‌ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಲಾಗಿದೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ ಎಂದು ಹೇಳಿದರು.

whatss

ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್‌ಗಳನ್ನು ವಿತರಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದರ ಆದೇಶ ಹೊರಡಿಸಲಾಗಿದೆ. ಈ ಕೆಲಸ ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಬರುವ ಮಾರ್ಚ್ 31ರ ನಂತರ ಹೊಸ ರೇಷನ್ ಕಾರ್ಡ್ ನಿಮಗೆ ಸಿಗಲಿದೆ. ಹೊಸ ಪಡಿತರ ಚೀಟಿಗೆ ಕಾಯುತ್ತಿರುವ ಎಲ್ಲಾ ಫಲಾನುಭವಿಗಳಿಗೆ ತಪ್ಪದೇ ಈ ಮಾಹಿತಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories