ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್‌ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ ಗುರುತಿನ ಪುರಾವೆಯಾಗಿದೆ. ದುರದೃಷ್ಟವಶಾತ್, ಇನ್ನೂ ಸಾಕಷ್ಟು ಜನರಿಗೆ ಪಡಿತರ ಚೀಟಿಗಳಿಲ್ಲ. ಈ ಕಾರಣದಿಂದಾಗಿ, ಅವರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಮತ್ತು ಅಗತ್ಯವಿರುವ ಆಹಾರವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ , ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆದರೆ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ಬಿಪಿಎಲ್(BPL) ಮತ್ತು ಎಪಿಎಲ್(APL) ರೇಷನ್ ಕಾರ್ಡ್‌ಗಳ ಅರ್ಜಿಗಳ ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಷ್ಟು ತಿಂಗಳಾದರೂ ಅರ್ಹರಿಗೆ 5 ಕೆಜಿ ಅಕ್ಕಿ ಹಣ ಇನ್ನೂ ಅವರ ಬ್ಯಾಂಕ್ ಖಾತೆಗೆ (Bank Account) ಜಮಾ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಪ್ರತಿಪಕ್ಷದ ನಾಯಕ ಆರ್ ಅಶೋಕ್(R Ashok) ಅವರು ಕೂಡ ಈ ಬಗ್ಗೆ ಮಾತನಾಡಿ, ಬಿಪಿಎಲ್ ರೇಷನ್ ಕಾರ್ಡ್ (BPL Ration Card) ವಿತರಣೆಯನ್ನು ಸರ್ಕಾರವು ನಿಲ್ಲಿಸಿದೆ ಎಂದು ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಎಚ್ ಮುನಿಯಪ್ಪ ಅವರು ಸುಮಾರು 2.5 ಲಕ್ಷ ಬಿಪಿಎಲ್(BPL) ಕಾರ್ಡ್ ಗಳನ್ನ ಈ ವರ್ಷ ವಿತರಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಇನ್ನುಳಿದ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗಿದೆ, ಏಪ್ರಿಲ್ 1 ರಿಂದಲೇ ಬಿಪಿಎಲ್(BPL) ಮತ್ತು ಎಪಿಎಲ್(APL) ರೇಷನ್ ಕಾರ್ಡ್ ಗಳನ್ನು (Ration card) ವಿತರಿಸಲಾಗುವುದು ಎಂದು ಭರವಸೆ ನೀಡಿದೆ.
ಈಗಾಗಲೇ ಸಾರ್ವಜನಿಕರಿಂದ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿದಾರರಿಗೆ ರೇಶನ್ ಕಾರ್ಡ ವಿತರಣೆ ಮಾಡುವುದರ ಜೊತೆಗೆ ಈ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಮುಗಿದ ಬಳಿಕ ಅಂದರೆ ಏಪ್ರಿಲ್ 1 2024ರ ನಂತರ ಹೊಸ ಕಾರ್ಡುಗಳಿಗೆ ಅರ್ಜಿಯನ್ನು ಕೂಡ ಆಹ್ವಾನಿಸಲು ಅವಕಾಶ ಕಲ್ಪಿಸಲಾಗಿದೆ.
ಮತ್ತು ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವರಾಗಿದ್ದರೆ ಈ ಕೆಳಗೆ ನೀಡಿರುವ ಲಿಂಕ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದು: ಲಿಂಕ್: https://ahara.kar.nic.in/
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವಾಗ ಅಗತ್ಯವಿರುವ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:
ವಯಸ್ಸಿನ ಪುರಾವೆ.
ಗುರುತಿನ ಪುರಾವೆ.
ವಿಳಾಸ ಪುರಾವೆ.
ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು.
ಆದಾಯ ಪುರಾವೆ.
ವಾರ್ಡ್ ಕೌನ್ಸಿಲರ್ ಅಥವಾ ಪ್ರಧಾನ್ ಅವರಿಂದ ಪ್ರಮಾಣಪತ್ರ.
ಬಾಡಿಗೆ ಒಪ್ಪಂದ (ಅರ್ಜಿದಾರನು ಹಿಡುವಳಿದಾರನಾಗಿದ್ದರೆ)
ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಈ ದಿನ ರೈತರ ಖಾತೆಗೆ ಬರಲಿದೆ ಪಿಎಂ ಕಿಸಾನ್ 16ನೇ ಕಂತಿನ ಹಣ, ಇಲ್ಲಿದೆ ಮಾಹಿತಿ
- ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 35,000 ರೂಪಾಯಿ ಪ್ರೋತ್ಸಾಹ ಧನ | Prize Money Scholarship Application 2024 @sw.kar.nic.in
- ಇನ್ಮುಂದೆ ನಂಬರ್ ಬದಲಿಗೆ ಕರೆ ಮಾಡುವವರ ಹೆಸರು ಡಿಸ್ಪ್ಲೇ! ಇಲ್ಲಿದೆ ಬಿಗ್ ಅಪ್ಡೇಟ್
- HSRP ನಂಬರ್ ಪ್ಲೇಟ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!
- ಇನ್ನೂ ಖಾತೆಗೆ 2000/- ಹಣ ಬರದೇ ಇರುವ ಮ್ಸಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






