ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ– ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಏಪ್ರಿಲ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. DIPR Karnataka ‘X” ಪೇಜ್ ನಲ್ಲಿ ಅಧಿಕೃತವಾಗಿ ಸರ್ಕಾರ ಹೊಸ ಪಡಿತರ ಚೀಟಿಯ ಕುರಿತು ಹೇಳಿಕೆ ನೀಡಿದೆ. ಚುನಾವಣಾ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಈಗಾಗಲೇ ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್ (New Ration Card Application)
ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಪಡಿಸಿದಕ್ಕಾಗಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ( KH Muniyappa ) ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ… pic.twitter.com/JXSseMGY23
— DIPR Karnataka (@KarnatakaVarthe) February 15, 2024
ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:
– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು
– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.
– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು
– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.
ರೇಷನ್ ಕಾರ್ಡ್: ತಿದ್ದುಪಡಿಗೆ ಅವಕಾಶ, (Ration card correction)
ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.
ಹೊಸ ರೇಷನ್ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್,
ಮನೆಯ ಸದಸ್ಯರ ಆಧಾರ್ ಕಾರ್ಡ್‌ಗಳು,
ಆದಾಯ, ಜಾತಿ, ನಿವಾಸ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ (ಕಡ್ಡಾಯ)
ಬಾಡಿಗೆದಾರರಿಗೆ ಒಪ್ಪಂದ ಪತ್ರ (ಕಡ್ಡಾಯ)
ಅರ್ಜಿ ಸಲ್ಲಿಸುವುದು ಹೇಗೆ:
ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
ಹೊಸ ರೇಷನ್ ಕಾರ್ಡ್ ಕಾಯುವಿಕೆ : ಕೊನೆಗೂ ಭರವಸೆ ಮೂಡಿತೆ?
ಹೌದು, ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ LKG &1ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- 1 ಲಕ್ಷ ರೂ. ನೇರವಾಗಿ ಖಾತೆಗೆ ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಉತ್ತರ ಕರ್ನಾಟಕದ ಜೋಳದ ರೊಟ್ಟಿ ಊಟ ಸವಿಯಲು ಬೆಣ್ಣೆ ನಗರಿ ದಾವಣಗೆರೆಯೇ ಬೆಸ್ಟ್!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.