WhatsApp Image 2025 10 10 at 1.20.44 PM

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತೇ ಆರಂಭ ಈ ದಾಖಲೆಗಳು ಕಡ್ಡಾಯ|ಇಲ್ಲಿದೆ ಸಂಪೂರ್ಣ ವಿವರ.!

Categories:
WhatsApp Group Telegram Group

ಪಡಿತರ ಚೀಟಿ (Ration Card) ಒಂದು ಅತ್ಯಂತ ಪ್ರಮುಖ ದಾಖಲೆಯಾಗಿದೆ. ಇದು ಕೇವಲ ಪಡಿತರ ಪಡೆಯಲು ಮಾತ್ರವಲ್ಲದೆ, ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಮತ್ತು ಇತರ ಅರ್ಜಿಗಳನ್ನು ಸಲ್ಲಿಸಲು ಕೂಡಾ ಅವಶ್ಯಕವಾಗಿದೆ. ಇದೀಗ, ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪುನಃ ಪ್ರಾರಂಭಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮೊದಲು, ನಕಲಿ ದಾಖಲೆಗಳನ್ನು ಬಳಸಿ ಪಡೆದಂತಹ ಬಿಪಿಎಲ್‌ (BPL) ಕಾರ್ಡ್‌ಗಳನ್ನು ರದ್ದುಪಡಿಸಿ ಅವರನ್ನು ಎಪಿಎಲ್‌ (APL) ವರ್ಗಕ್ಕೆ ಸೇರಿಸುವ ಪ್ರಕ್ರಿಯೆ ನಡೆದಿತ್ತು. ಈ ಮಧ್ಯೆಯೇ, ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹೊಸ ಪಡಿತರ ಚೀಟಿ ಅರ್ಜಿಯನ್ನು ಮತ್ತೆ ಸ್ವೀಕರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಯುವ ಕಾರಣಕ್ಕಾಗಿ ಈ ಹಿಂದೆ ಅರ್ಜಿ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು.

ಈಗ ಪುನಃ ಆರಂಭಿಸಿರುವ ಅವಕಾಶವನ್ನು ಅರ್ಹ ಫಲಾನುಭವಿಗಳು ಬಳಸಿಕೊಳ್ಳಬಹುದು. ರಾಜ್ಯದಲ್ಲಿ ಹೊಸ ಬಿಪಿಎಲ್‌, ಎಪಿಎಲ್‌ ಸೇರಿದಂತೆ ಇತರ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಬೇಕಾದ ದಾಖಲೆಗಳು

ಅರ್ಹ ಫಲಾನುಭವಿಗಳು ಇಂದು (ಅಕ್ಟೋಬರ್ 9) ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯನ್ನು ahara.kar.nic.in ಅಧಿಕೃತ ವೆಬ್‌ಸೈಟ್ ಮೂಲಕ ಸಲ್ಲಿಸಬಹುದು. ಮೊಬೈಲ್, ಕಂಪ್ಯೂಟರ್ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕವೂ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.

ಈಗಾಗಲೇ ಯಾವುದೇ ಪಡಿತರ ಚೀಟಿ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದು.

ಹೊಸದಾಗಿ ವಿವಾಹವಾದ ನವದಂಪತಿಗಳು ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ಕುಟುಂಬದ ಆದಾಯದ ಆಧಾರದ ಮೇಲೆ ಪಡಿತರ ಚೀಟಿ (BPL ಅಥವಾ APL) ನಿರ್ಧಾರವಾಗುತ್ತದೆ.

ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವಾಗ ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ:

  • ಆಧಾರ್ ಕಾರ್ಡ್
  • ವೋಟರ್ ಐಡಿ (ಮತದಾರರ ಗುರುತಿನ ಚೀಟಿ)
  • ವಯಸ್ಸಿನ ಪ್ರಮಾಣ ಪತ್ರ
  • ವಾಹನ ಚಾಲನಾ ಪರವಾನಗಿ (Driving License)
  • ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನಗಳು

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಈ ಹಂತಗಳನ್ನು ಅನುಸರಿಸಿ:

kar.nic.in ಅಥವಾ ನೇರವಾಗಿ https://ahara.kar.nic.in/Home/EServices ಈ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಅಲ್ಲಿರುವ ಇ-ಸೇವೆಗಳು (E-Services) ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ನಂತರ ಇ-ಪಡಿತರ ಚೀಟಿ (E-Ration Card) ಆಯ್ಕೆಯನ್ನು ಆರಿಸಿ.

ಕೆಳಗೆ ಸ್ಕ್ರಾಲ್ ಮಾಡಿದಾಗ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ನಿಮಗೆ ಸಿಗುತ್ತದೆ.

ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಿ.

ನಂತರ ಕೇಳುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.

ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎಂಬುದನ್ನು ಆಯ್ಕೆ ಮಾಡಿ ನಮೂದಿಸಿ.

ಕೇಳಲಾದ ದಾಖಲೆಗಳ ಸಾಫ್ಟ್ ಕಾಫಿಗಳನ್ನು (Soft Copies) ಅಪ್ಲೋಡ್ ಮಾಡಿ.

ಈ ಪ್ರಕ್ರಿಯೆ ಪೂರ್ಣಗೊಂಡಾಗ ನಿಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗುತ್ತದೆ.

    WhatsApp Image 2025 09 05 at 11.51.16 AM 12

    ಈ ಮಾಹಿತಿಗಳನ್ನು ಓದಿ

    ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

    WhatsApp Group Join Now
    Telegram Group Join Now

    Popular Categories