ಹೊಸ ಪಡಿತರ ಚೀಟಿ ವಿತರಣೆಗೆ ಮುಹೂರ್ತ ಫಿಕ್ಸ್, ಈ ದಿನ ಸಿಗಲಿವೆ ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್

ration card 2

ಹಲವಾರು ದಿನಗಳಿಂದ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರ ಮೊಗದಲ್ಲಿ ನಗುವರಳಲಿದೆ. ಈ ತಿಂಗಳೊಳಗೆ ಹೊಸ ಕಾರ್ಡ್‌ ಅವರ ಕೈಗೆ ಸಿಗಲಿದೆ. 2.5 ಲಕ್ಷಕ್ಕೂ ಅಧಿಕ ಮಂದಿ ರೇಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ಈ ಕಾರ್ಡ್‌ಗಳನ್ನು ಚೆಕ್ ಮಾಡುವ ಕಾರ್ಯ ನಡೆಯುತ್ತಿದೆ. ಯಾರೆಲ್ಲಾ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಹರೋ ಅವರಿಗೆ ಆದಷ್ಟು ಬೇಗ ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ನೀಡಲು ಆಹಾರ ಮತ್ತು ನಾಗರಿಕರ ಇಲಾಖೆ(Department of Food and Civil) ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ?

ಕಳೆದ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್​ಗಳನ್ನು ವಿತರಿಸದೇ ಬಾಕಿ ಉಳಿಸಿಕೊಂಡಿತ್ತು. ಆ ಕಾರ್ಡ್‌ಗಳನ್ನು ಮತ್ತೆ ಪರಿಶೀಲನೆ ಮಾಡಿ, ಎಪಿಎಲ್‌ ಯಾವುದು, ಬಿಪಿಎಲ್‌ ಯಾವುದು ಎಂದು ಪರಿಶೀಲನೆ ನಡೆಸಿ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.

57 ಸಾವಿರ ಹೊಸ ಕಾರ್ಡ್‌ ವಿತರಣೆ:

ಈಗಾಗಲೇ ನಮ್ಮ ಸರ್ಕಾರದಿಂದ 57,000 ಹೊಸ ಪಡಿತರ ಚೀಟಿಗಳನ್ನು ಹಂಚಲಾಗಿದೆ. ಇದುವರೆಗೂ ಮೆಡಿಕಲ್ ಫೆಸಿಲಿಟಿಗಾಗಿ ಅರ್ಜಿ ಕೊಟ್ಟವರ ರೇಷನ್ ಕಾರ್ಡ್ಗಳನ್ನು ಆದಷ್ಟು ಬೇಗ ವಿತರಿಸಲು ಸೂಚಿಸಿದ್ದೇವೆ. ಮತ್ತು ಈಗಾಗಲೇ ಒಟ್ಟು 744 ಫಲಾನುಭವಿಗಳಿಗೆ ಆರೋಗ್ಯ ತುರ್ತು ಕಾರಣಕ್ಕೆ ಬಿಪಿಎಲ್ ಕಾರ್ಡ ಗಳನ್ನು ಕೊಟ್ಟಿದ್ದೇವೆ ಎಂದು ಸಚಿವರು ತಿಳಿಸಿದರು.

ಬಿಪಿಎಲ್ ಕಾರ್ಡ್ ಗಳನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು :

ಬಿಪಿಎಲ್ ಕಾರ್ಡ್ ಅನ್ನು ಪಡೆಯುವ ಮುಖ್ಯ ಮಾನದಂಡವೆಂದರೆ, ವ್ಯಕ್ತಿಯು ತಿಂಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ರೂ.6,400/- ಕ್ಕಿಂತ ಕಡಿಮೆ ಮತ್ತು ನಗರ ಪ್ರದೇಶಗಳಲ್ಲಿ ರೂ.11,850/- ಗಿಂತ ಕಡಿಮೆ ಗಳಿಸಿದರೆ . ಈ ಆದಾಯ ಮಿತಿಯನ್ನು ಮೀರಿದ ಮತ್ತು ನಂತರ ಆ ವ್ಯಕ್ತಿಯು BPL ಕಾರ್ಡ್ ಹೊಂದಲು ಅರ್ಹರಾಗಿರುವುದಿಲ್ಲ. ಹಾಗೆಯೇ ವೈಟ್ ಬೋರ್ಡ್ ಕಾರುಗಳನ್ನು  ಹೊಂದಿದ್ದರೆ ಬಿಪಿಎಲ್ ಕಾರ್ಡ್ ದೊರೆಯುವುದಿಲ್ಲ. ಅಭ್ಯರ್ಥಿಯು ಆದಾಯ ತೆರಿಗೆ ಪಾವತಿದಾರರಾಗಿರಬಾರದು ಯಾವುದೇ ರೀತಿಯ ಸರ್ಕಾರಿ ನೌಕರರಿಗೆ ಅವಕಾಶವಿಲ್ಲ.

ಸಹಕಾರಿ ಸಂಸ್ಥೆಗಳ ಖಾಯಂ ಉದ್ಯೋಗಿಗಳು, ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಉದ್ಯೋಗಿಗಳು, ವಕೀಲರು ಮತ್ತು ಲೆಕ್ಕಪರಿಶೋಧಕರು, (ಸಣ್ಣ ಅಂಗಡಿಗಳು, ಸೈಕಲ್‌ಗಳು ಅಥವಾ ತಳ್ಳುಗಾಡಿಗಳನ್ನು ಹೊರತುಪಡಿಸಿ) ವ್ಯಾಪಾರಿಗಳು ಅಥವಾ ವ್ಯಾಪಾರಸ್ಥರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಅರ್ಹರಲ್ಲ.

ಹೊಸ ರೇಷನ್ ಕಾರ್ಡ್‌ (New Ration Card Application)

ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:

– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು

– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.

– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು

– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

whatss

ರೇಷನ್ ಕಾರ್ಡ್: ತಿದ್ದುಪಡಿಗೆ ಅವಕಾಶ, (Ration card correction)

ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ:

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 


Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!