Ration Card – ಎಪಿಎಲ್‌, ಬಿಪಿಎಲ್‌ ಪಡಿತರ ಚೀಟಿದಾರರಿಗೆ ಹೊಸ ಸ್ಮಾರ್ಟ್ ರೇಷನ್‌ ಕಾರ್ಡ್‌ ವಿತರಣೆ – ಕೆ. ಎಚ್‌ ಮುನಿಯಪ್ಪ

new updated ration card

ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ರಾಜ್ಯದಲ್ಲಿ ಎಪಿಎಲ್ (APL Card) ಹಾಗೂ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ (BPL Card ) ಹೊಸ ರೇಷನ್ ಕಾರ್ಡ್ ( New Updated Ration Card ) ನೀಡಲು ರಾಜ್ಯ ಸರ್ಕಾರ(State Government) ಮುಂದಾಗಿದೆ. ಇದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಎಪಿಎಲ್ ಹಾಗೂ ಬಿಪಿಎಲ್ ಹೊಸ ರೇಷನ್ ಕಾರ್ಡ್ :

ಹಲವು ದಿನಗಳ ಹಿಂದೆ ಅಷ್ಟೇ ರಾಜ್ಯದ ಜನತೆಗೆ ಎಪಿಎಲ್ (APL card) ಹಾಗೂ ಬಿಪಿಎಲ್ (BPL card) ಕಾರ್ಡ್ ಹೊಂದಿದವರಿಗೆ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ನಿರ್ಧರಿಸಿತ್ತು. ಆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

ಆದರೆ ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ( KH Muniyappa ) ಹಲವಾರು ಬದಲಾವಣೆಯನ್ನು ಈ ಒಂದು ಹೊಸ ರೇಷನ್ ಕಾರ್ಡ್ ನಲ್ಲಿ ಮಾಡಲಾಗಿದೆ ಇದರಿಂದ ನಿಮಗೆ ತುಂಬಾ ಪ್ರಯೋಜನ ಇದೆ ಎಂದು ತಿಳಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹೊಸ ರೇಷನ್ ಕಾರ್ಡ್ ನಲ್ಲಿ ಏನೆಲ್ಲ ಇದೆ ಮತ್ತು ಹೊಸ ಬದಲಾವಣೆಯನ್ನು ಒಳಗೊಂಡ ರೇಷನ್ ಕಾರ್ಡ್ ನ ಪ್ರಯೋಜನಗಳು :

ಸಚಿವ ಕೆಎಚ್ ಮುನಿಯಪ್ಪ ಅವರು ಈ ಹೊಸ ರೇಷನ್ ಕಾರ್ಡ್ ವಿತರಣೆ ಬಗ್ಗೆ ಮಾತನಾಡಿ , ಅಪ್ ಡೇಟ್ ಆದ ಹೊಸ ರೇಷನ್ ಕಾರ್ಡ್ ಅನ್ನು ಆದಷ್ಟು ಬೇಗ ಮಾಡಿ ಕೊಡುತ್ತೇವೆ. ಹಾಗೂ ಕೇಂದ್ರ ಸರ್ಕಾರ ಪಡಿತರ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ನ ರಶೀದಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಹಾಗೆಯೇ ಈ ಹೊಸ ರೇಷನ್ ಕಾರ್ಡ್ ನಲ್ಲಿ ಕೇಂದ್ರ ಸರ್ಕಾರದ ಅನುದಾನದ ಜೊತೆಗೆ ರಾಜ್ಯ ಸರ್ಕಾರದ ಅನುದಾನವು ಇರುತ್ತದೆ ಎಂದು ತಿಳಿಸಿದ್ದಾರೆ.

ಈ ಹೊಸ ಕಾರ್ಡ್ ನ ಪ್ರಯೋಜನ ನೋಡುವುದಾದರೆ, ಇದರಲ್ಲಿ ಅನ್ನಭಾಗ್ಯ ಯೋಜನೆ(Annabhagya scheme)ಯ ಪ್ರಯೋಜನ ಪಡೆದುಕೊಳ್ಳಬಹುದು. ಹಾಗೆಯೇ ಇದರ ಜೊತೆಗೆ ಐಡಿ ಕಾರ್ಡ್ (ID card) , ವಿಮಾನ ನಿಲ್ದಾಣ (airport) , ಬ್ಯಾಂಕ್ (Bank), ಸರ್ಕಾರಿ ಕಚೇರಿಗಳಲ್ಲಿಯೂ (government office) ಕೂಡ ಪಡಿತರ ಚೀಟಿಯನ್ನು ಬಳಸಬಹುದು. ಹಾಗಾಗಿ ಈ ಹೊಸ ರೇಷನ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

2,444 ಕೋಟಿ ಹಣ ಡಿಬಿಟಿ ಗೆ ವರ್ಗಾವಣೆ ಮಾಡಲಾಗಿದೆ :

ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ 1,10,96,413 ಕಾರ್ಡ್ ಹೊಂದಿದವರಿಗೆ ಡಿಬಿಟಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹಾಗೆಯೇ 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರಿಸಲಾಗಿದೆ. ಮತ್ತು 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಒಂದು ಕಾರ್ಯ ಮುಂದುವರೆಯಲು ಬಹಳಷ್ಟು ಸಮಸ್ಯೆಗಳು ಕಾರಣವಾಗಿದೆ. ಮತ್ತು ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಆದಷ್ಟು ಬೇಗ ಈ ಸಮಸ್ಯೆಗಳನ್ನು ಸರಿಪಡಿಸಿ ಹೊಸ ರೇಷನ್ ಕಾರ್ಡ್ ಅನ್ನು ಮಾಡಿ ಕೊಡಲಾಗುವುದು ಎಂದು ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!