ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

new schemes

ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಸ್ತುತ, ರಾಜ್ಯಮಟ್ಟದ ಸರ್ಕಾರಿ ನೌಕರರ ಸಮ್ಮೇಳನವ(State level government employees conference) ಆಯೋಜಿಸಿದ್ದು. ಸಿಎಂ ಸಿದ್ದರಾಮಯ್ಯ( CM Siddaramaiah ) ಅವರು ಈ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪಂಚ್ ಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಇಕ್ಕಟ್ಟಿನಲ್ಲೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್. ಪಿ. ಎಸ್(NPS) ತೆಗೆದು ಹಳೆ ಪಿಂಚಣಿ(Pension) ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ಇದಲ್ಲದೆ, ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುಷ್ಠಾನ ಕುರಿತಾಗಿಯೂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದ್ದಾರೆ. ಸರ್ಕಾರಿ ನೌಕರರು ಸರ್ಕಾರ ಮತ್ತು ಜನರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅವರ ಕೆಲಸ ಪರಿಣಾಮಕಾರಿಯಾಗಿದ್ದು, ಜನರಿಗೆ ಉತ್ತಮ ಸೇವೆ ಒದಗಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 7.50 ಲಕ್ಷ ಸರ್ಕಾರಿ ಹುದ್ದೆಗಳಿವೆ ಎಂದು ತಿಳಿದುಬಂದಿದೆ. ಈ ಪೈಕಿ 5.19 ಲಕ್ಷ ಹುದ್ದೆಗಳಲ್ಲಿ ಈಗಾಗಲೇ ನೌಕರರು ಕೆಲಸ ಮಾಡುತ್ತಿದ್ದಾರೆ. ಉಳಿದ 2.50 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. ಕರ್ನಾಟಕದ ಒಟ್ಟು ಜನಸಂಖ್ಯೆ ಏಳು ಕೋಟಿ ಎಂದು ತಿಳಿದುಬಂದಿದೆ. ಈ ಏಳು ಕೋಟಿ ಜನರ ಕಷ್ಟ-ಸುಖಗಳಲ್ಲಿ ಭಾಗಿಯಾಗಿ, ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಜವಾಬ್ದಾರಿ 7.50 ಲಕ್ಷ ಸರ್ಕಾರಿ ನೌಕರರಿಗೆ ಇದೆ ಎಂದು ತಿಳಿಸಲಾಗಿದೆ. ಖಾಲಿ ಉಳಿದಿರುವ 2.50 ಲಕ್ಷ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ಮೂಲಕ, ರಾಜ್ಯದ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಬಹುದು ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಜನರು ನಮ್ಮನ್ನು ಐದು ವರ್ಷಗಳಿಗೊಮ್ಮೆ ಆಯ್ಕೆ ಮಾಡುತ್ತಾರೆ. ಆದರೆ, ಒಮ್ಮೆ ಸರ್ಕಾರಿ ಸೇವೆಗೆ ಸೇರಿದ ನಂತರ, ನಿವೃತ್ತಿಯಾಗುವವರೆಗೂ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಬಹುದು. ಆದರೆ ರಾಜಕಾರಣಿಗಳು ಜನರ ಆಶೀರ್ವಾದವನ್ನು ಐದು ವರ್ಷಗಳಿಗೊಮ್ಮೆ ನವೀಕರಿಸಬೇಕಾಗುತ್ತದೆ.

ರಾಜ್ಯದ ಜನತೆ ಅಮೂಲ್ಯವಾದ ಆಶೀರ್ವಾದದಿಂದ, ನನಗೆ 2ನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ. ಅದರಲ್ಲಿ ನೀವು ಹಾಗೂ ನಿಮ್ಮ ಕುಟುಂಬದವರು ಸಹ ಇದ್ದೀರಿ. ಏಳು ಕೋಟಿ ಕನ್ನಡಿಗರ ಭಾಗವಾದ ಸರ್ಕಾರಿ ನೌಕರರು ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಆರ್ಥಿಕ ಸಮಾನತೆಯ ತರಬೇಕು ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದು ಒತ್ತಿ ಹೇಳಿದ್ದಾರೆ.

whatss

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಸರಕಾರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು, ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ ನಿಜ, ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೆಯ ಆದ್ಯತೆ ಬೇಡಿಕೆಗಳು ನಂತರದ ಆದ್ಯತೆ ಇನ್ನು ಸ್ಪಷ್ಟವಾಗಿ ನೀವು ಅರ್ಥ ಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಭಾವನೆ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, ಆರನೇ ವೇತನ ಆಯೋಗವನ್ನು ನಮ್ಮ ಸರಕಾರ ಜಾರಿಗೆ ತಂದಿತ್ತು. ಆದರೆ ಸಂದರ್ಭದಲ್ಲಿ ನೌಕರರ ವಿರುದ್ಧವಿರುವದಾಗಿ ನನ್ನ ಮೇಲೆ ಆರೋಪ ಮಾಡಿದ್ದರು. ಇದರ ಹೊರತಾಗಿಯೂ ನಾನೇ ಆರನೇ ವೇತನ ಆಯೋಗವನ್ನು ರಚಿಸಿದ್ದೆ. ಸರಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರವು 6ನೇ ವೇತನ ಆಯೋಗದ ಶಿಫಾರಸಿನಂತೆ ಶೇಕಡ 30ರಷ್ಟು ಪಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈ ಹಣವು ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಲಾಭವಾಗಲಿದೆ. 7ನೇ ವೇತನ ಆಯೋಗದ ಮಧ್ಯಂತರ ವರದಿಯ ಪ್ರಕಾರ, ರಾಜ್ಯ ಸರ್ಕಾರಿ ನೌಕರರಿಗೆ ಶೇಕಡ 17ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ವೇತನ ಆಯೋಗದ ಅಧ್ಯಕ್ಷ ಸುಧಾಕರ್ ಅಂತಿಮ ವರದಿಯನ್ನು ನೀಡಲು ಕಾಲಾವಕಾಶ ಕೊರಿದ್ದು, ಮಾರ್ಚ್ 15 ರವರೆಗೆ ಸಮಯ ನೀಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವರದಿಯಲ್ಲಿ ಶೀಘ್ರ ಸಲ್ಲಿಸುವುದಾಗಿ ಹೇಳಿದ್ದು, ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಶೀಘ್ರವೇ ಬೇಡಿಕೆ ಈಡೇರಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!