ಭಾರತದಲ್ಲಿ ಪ್ರತಿವರ್ಷ ಸಾವಿರಾರು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಸಂಚಾರ ನಿಯಮಗಳನ್ನು ಪಾಲಿಸದಿರುವುದು. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು 2025ರಿಂದ ಹೊಸ ಮತ್ತು ಕಠಿಣ ಸಂಚಾರ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳನ್ನು ಮುರಿದರೆ, ಗತಕಾಲಕ್ಕಿಂತ ಹೆಚ್ಚಿನ ದಂಡ ಮತ್ತು ಶಿಕ್ಷೆಗಳನ್ನು ಎದುರಿಸಬೇಕಾಗಬಹುದು. ಇಲ್ಲಿ ಹೊಸ ನಿಯಮಗಳ ವಿವರಗಳನ್ನು ನೋಡೋಣ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
1. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ
ಹೊಸ ನಿಯಮದ ಪ್ರಕಾರ, ಮದ್ಯಪಾನ ಮಾಡಿ ವಾಹನ ಓಡಿಸಿದರೆ ₹10,000 ದಂಡ ಅಥವಾ 6 ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದೇ ವ್ಯಕ್ತಿ ಮತ್ತೆ ಇದೇ ಅಪರಾಧ ಮಾಡಿದರೆ, ₹15,000 ದಂಡ ಮತ್ತು 2 ವರ್ಷದ ಜೈಲು ಶಿಕ್ಷೆ ಕೊಡಲಾಗುತ್ತದೆ.
2. ಸಿಗ್ನಲ್ ಮೀರಿದರೆ
ಹಳೆಯ ನಿಯಮದಲ್ಲಿ ಸಿಗ್ನಲ್ ಮೀರಿದರೆ ₹500 ದಂಡವಿತ್ತು. ಆದರೆ ಈಗ ₹5,000 ದಂಡ ವಿಧಿಸಲಾಗುತ್ತದೆ.
3. ವೇಗ ಮಿತಿ ಮೀರಿದರೆ
ನಿಗದಿತ ವೇಗ ಮಿತಿಯನ್ನು ಮೀರಿದರೆ ₹5,000 ದಂಡ ವಿಧಿಸಲಾಗುತ್ತದೆ. ವಾಣಿಜ್ಯ ವಾಹನಗಳು ನಿಗದಿತ ತೂಕಕ್ಕಿಂತ ಹೆಚ್ಚು ಸರಕು ಸಾಗಿಸಿದರೆ ₹20,000 ದಂಡ ಕಟ್ಟಬೇಕಾಗುತ್ತದೆ.
4. ಚಾಲನಾ ಪರವಾನಗಿ ಇಲ್ಲದೆ ಓಡಿಸಿದರೆ
ಮಾನ್ಯ ಚಾಲನಾ ಪರವಾನಗಿ (DL) ಇಲ್ಲದೆ ವಾಹನ ಚಲಾಯಿಸಿದರೆ ₹5,000 ದಂಡ ವಿಧಿಸಲಾಗುತ್ತದೆ. ಆದರೆ, ಡಿಜಿಲಾಕರ್ ಅಥವಾ ಎಂಪರಿವಾಹನ್ ಅಪ್ಲಿಕೇಶನ್‌ನಲ್ಲಿ ಮಾನ್ಯವಾದ DL ಇದ್ದರೆ ಸಾಕು.
5. ಪಾಲ್ಯೂಷನ್ ಕಂಟ್ರೋಲ್ (PUC) ಸರ್ಟಿಫಿಕೇಟ್ ಇಲ್ಲದಿದ್ದರೆ
ವಾಹನದಿಂದ ಹೊರಡುವ ಹೊಗೆಯನ್ನು ನಿಯಂತ್ರಿಸಲು PUC ಪ್ರಮಾಣಪತ್ರ ಕಡ್ಡಾಯ. ಇದು ಇಲ್ಲದಿದ್ದರೆ ₹10,000 ದಂಡ, 6 ತಿಂಗಳ ಜೈಲು ಶಿಕ್ಷೆ ಮತ್ತು ಸಮುದಾಯ ಸೇವೆಗೆ ಆದೇಶಿಸಬಹುದು.
6. ಸೀಟ್ ಬೆಲ್ಟ್ ಧರಿಸದಿದ್ದರೆ
ಚಾಲಕ ಮತ್ತು ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಇದನ್ನು ಪಾಲಿಸದಿದ್ದರೆ ₹1,000 ದಂಡ ವಿಧಿಸಲಾಗುತ್ತದೆ.
7. ಬೈಕ್‌ನಲ್ಲಿ ಮೂವರು ಪ್ರಯಾಣಿಸಿದರೆ
ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತರೆ ₹1,000 ದಂಡ ವಿಧಿಸಲಾಗುತ್ತದೆ.
8. ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಿದರೆ
ಹಳೆಯ ನಿಯಮದಲ್ಲಿ ಹೆಲ್ಮೆಟ್ ಇಲ್ಲದೆ ಓಡಿಸಿದರೆ ₹100 ದಂಡವಿತ್ತು. ಆದರೆ ಈಗ ₹1,000 ದಂಡ ಮತ್ತು 3 ತಿಂಗಳ DL ಅಮಾನತು ಆಗಬಹುದು.
9. ಅಪ್ರಾಪ್ತ ವಯಸ್ಕರು ವಾಹನ ಓಡಿಸಿದರೆ
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಓಡಿಸಿದರೆ, ಅವರ ಪೋಷಕರಿಗೆ ₹25,000 ದಂಡ, 3 ವರ್ಷ ಜೈಲು ಶಿಕ್ಷೆ ಮತ್ತು ವಾಹನದ ನೋಂದಣಿಯನ್ನು 1 ವರ್ಷ ರದ್ದು ಮಾಡಲಾಗುತ್ತದೆ. ಅಲ್ಲದೆ, ಅಪ್ರಾಪ್ತ ವಯಸ್ಕನಿಗೆ 25 ವರ್ಷ ವಯಸ್ಸಾಗುವವರೆಗೆ DL ನೀಡುವುದಿಲ್ಲ.
10. ಚಾಲನೆಯ ಸಮಯದಲ್ಲಿ ಮೊಬೈಲ್ ಬಳಸಿದರೆ
ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದರೆ ₹5,000 ದಂಡ ವಿಧಿಸಲಾಗುತ್ತದೆ.
ಸರ್ಕಾರದ ಈ ಹೊಸ ನಿಯಮಗಳು ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿವೆ. ಆದ್ದರಿಂದ, ಎಲ್ಲಾ ವಾಹನ ಸವಾರರು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ. ಇಲ್ಲದಿದ್ದರೆ, ಭಾರೀ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply