ಅಪರಾಧ ಕೃತ್ಯಗಳಲ್ಲಿ ನಕಲಿ ನೋಂದಣಿ ಸಂಖ್ಯೆಯ ವಾಹನಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ದೇಶದಲ್ಲಿ ಏಕರೂಪ ನೋಂದಣಿ ಸಂಖ್ಯೆ ಫಲಕ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಏನಿದು ಅಂತ ತಿಳಿದುಕೊಳ್ಳ ಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
HSRP(ಎಚ್‌ಎಸ್‌ಆರ್‌ಪಿ) ರಿಜಿಸ್ಪ್ರೇಷನ್ ಪ್ಲೇಟ್ಸ್ ವಾಹನಗಳಿಗೆ ಕಡ್ಡಾಯ :
ಕರ್ನಾಟಕದ ಎಲ್ಲ ಹಳೆಯ ವಾಹನಗಳ ನಂಬರ್‌ಪ್ಲೇಟ್ ಬದಲಾಯಿಸಿ ಅತಿ ಸುರಕ್ಷಿತ ನೋಂದಣಿ ಫಲಕ HSRP(ಎಚ್‌ಎಸ್‌ಆರ್‌ಪಿ) ಅಳವಡಿಸಿಕೊಳ್ಳುವಂತೆ ರಾಷ್ಟ್ರೀಯ ರಸ್ತೆ ಸುರಕ್ಷತೆ ಸಮಿತಿ ತಿಳಿಸಿದೆ.
HSRP (ಎಚ್‌ಎಸ್‌ಆರ್‌ಪಿ)-ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ಪ್ಲೇಟ್ಸ್ ಯೋಜನೆಯು ವಾಹನದ ಸುರಕ್ಷತೆ ಮತ್ತು ಭದ್ರತೆಯನ್ನು ನೀಡುವ ಮೂಲಕ ನೇರವಾಗಿ ರಾಷ್ಟ್ರೀಯ ಭದ್ರತೆಗೆ ಕೊಡುಗೆ ನೀಡುತ್ತದೆ. ಅಲ್ಲದೇ ವಾಹನ ಸಂಬಂಧಿತ ಅಪರಾಧ ಚಟುವಟಿಕೆಗಳನ್ನು ನಿರ್ಬಂಧಿಸುತ್ತದೆ. 2019 ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳು ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈಗಾಗಲೇ ದೇಶದ ದೆಹಲಿ, ಉತ್ತರ ಪ್ರದೇಶ, ಬಿಹಾರ, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಸಿಕ್ಕಿಂ ಸೇರಿದಂತೆ 18 ರಾಜ್ಯಗಳು ಎಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಹಿಂದೆಯೇ ಇದು ಕಡ್ಡಾಯವಾಗಿತ್ತು.
ವಾಹನಗಳ ಮಾಲೀಕರು ಶೋ ರೂಂ ಅಥವಾ ಡೀಲರ್‌ಗಳಲ್ಲಿ ನಂಬರ್ ಪ್ಲೇಟ್ ಬದಲಾವಣೆಗೆ ಕೋರಿಕೆ ಸಲ್ಲಿಸಬಹುದು. ನಾಲ್ಕುಚಕ್ರದ ವಾಹನಗಳಿಗೆ 400 ರಿಂದ 500 ರೂ .ಗಳವರೆಗೆ ಶುಲ್ಕ ಇರುತ್ತದೆ. ಒರಿಜಿನಲ್ ಇಕ್ಯುಪ್‌ಮೆಂಟ್ ಮ್ಯಾನುಫ್ಯಾಕ್ಚರರ್‌ರಿಂದ(ಒಇಎಂ) ಅಧಿಕೃತ ಫೋರ್ಟಲ್‌ನಲ್ಲಿ ನಮೂದಿಸಿದ ಮೇಲೆ HSRP (ಎಚ್‌ಎಸ್‌ಆರ್‌ಪಿ) ಅಳವಡಿಸಲಾಗುತ್ತದೆ. ರಾಜ್ಯಾದ್ಯಂತ ಸುಮಾರು ನಾಲ್ಕು ಸಾವಿರ ಡೀಲರ್ ಪಾಯಿಂಟ್‌ಗಳಲ್ಲಿ ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲಾಗುತ್ತದೆ. ವಾಹನಗಳ ಮಾಲೀಕರಿಗೆ ಎಚ್‌ಎಸ್‌ಆರ್‌ಪಿಗಳನ್ನು ಆರ್ಡರ್ ಮಾಡಲು, ಡೀಲರ್ ತಾಣಗಳನ್ನು ಕಂಡುಕೊಳ್ಳಲು ಮತ್ತು ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ, ಸಮಯ ಆಯ್ಕೆ ಮಾಡಲು ಅವಕಾಶ ನೀಡುತ್ತದೆ ಎಂದು ತಿಳಿಸಿದರು.
HSRP ಅಳವಡಿಸದಿದ್ದರೆ ಏನೆಲ್ಲಾ ಆಗುತ್ತದೆ:
HSRP (ಎಚ್‌ಎಸ್‌ಆರ್‌ಪಿ) ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಅಪ್ಡೇಟ್, ಸಾಮರ್ಥ್ಯ ಅನುಮೋದನೆ ಇತ್ಯಾದಿ ಸಾಧ್ಯವಿಲ್ಲ. ಎಚ್‌ಎಸ್‌ಆರ್‌ಪಿ ನಂಬರ್ ಅಳವಡಿಕೆ ಮಾಡಿಕೊಂಡ ಮಾಹಿತಿಯನ್ನು ವಾಹನ ತಂತ್ರಾಂಶದಲ್ಲಿ ಮಾಲೀಕರ ಮಾಹಿತಿ ಲಭ್ಯವಾಗುತ್ತದೆ. ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಇದು ಸಹಾಯಕವಾಗಲಿದೆ ಎಂದು ಅವರು ಹೇಳಿದರು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಎಚ್‌ಎಸ್‌ಆರ್‌ಪಿ ಅನ್ನು ಅಳವಡಿಸಿಕೊಂಡ ನಂತರ, ಅಧಿಕೃತ ವಿತರಕರು ಅಥವಾ ತಯಾರಕರು ವಾಹನ್ ಪೋರ್ಟಲ್‌ನಲ್ಲಿ ಲೇಸರ್-ಕೋಡಿಂಗ್ ಅನ್ನು ನವೀಕರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ತಿಳಿಸಿದೆ.
HSRP (ಎಚ್‌ಎಸ್‌ಆರ್‌ಪಿ) ಅವಶ್ಯಕತೆ ಏನು?:
ಟ್ಯಾಂಪರಿಂಗ್ ಮತ್ತು ಪ್ಲೇಟ್‌ಗಳನ್ನು ನಕಲಿ ಮಾಡುವುದನ್ನು ತಡೆಯುವ ಎಚ್‌ಎಸ್‌ಆರ್‌ಪಿ ತಡೆಯಲಿದೆ. ವಾಹನಗಳಿಂದ ಉಂಟಾಗುವ ಅಪರಾಧಗಳನ್ನು ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಾಯ ಮಾಡಲಿದೆ. ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಹಾಯ ಮಾಡುತ್ತದೆ ಎಂದು ಸಾರಿಗೆ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group








