ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೇನು ಕೇವಲ ಎರಡು ದಿನ ಮಾತ್ರ ಕಾಲಾವಕಾಶವಿದ್ದು, ನಿಮ್ಮ ಹೆಸರು ಮತದಾರ ಪಟ್ಟಿಯಲ್ಲಿ ಇಲ್ಲದೇ ಇದ್ದರೆ ತಕ್ಷಣವೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಮತ್ತು ಈಗಾಗಲೇ 2024ರ ಅಂತಿಮ ಮತದಾರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಆದರೂ 18 ವರ್ಷ ತುಂಬಿದ ಅರ್ಹ ನಾಗರಿಕರಿಗೆ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶವಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ..ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅಂತಿಮ ಮತದಾರರ ಪಟ್ಟಿಯನ್ನು (Final Electoral Roll) 2024 :
ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ(Chief Electoral Officer, Karnataka) ಅವರು ಅಂತಿಮ ಮತದಾರರ ಪಟ್ಟಿಯನ್ನು ಹೊರಡಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಕಛೇರಿಯು ರಾಜ್ಯದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ, ಭಾವಚಿತ್ರವಿರುವ ಗುರುತಿನ ಚೀಟಿಯನ್ನು (ಎಪಿಕ್ ಕಾರ್ಡ್) ಮತದಾರರಿಗೆ ಒದಗಿಸುವುದರ ಜೊತೆಗೆ ಮತದಾರರಲ್ಲಿ ಚುನಾವಣಾ ಜಾಗೃತಿ ಮೂಡಿಸಿ, ಚುನಾವಣಾ ವ್ಯವಸ್ಥೆಯಲ್ಲಿ ಮುಕ್ತ, ನ್ಯಾಯೋಚಿತ ಹಾಗೂ ಪಾರದರ್ಶಕತೆಯನ್ನು ಜಾರಿಗೊಳಿಸಿ, ಚುನಾವಣೆ ನಡೆಸುವುದು ಈ ಕಛೇರಿಯ ಧ್ಯೇಯೋದ್ದೇಶವಾಗಿರುತ್ತದೆ. ಈ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಕಛೇರಿಯ ಜಾಲತಾಣವನ್ನು ಹೊಸದಾಗಿ ರೂಪಿಸಲಾಗಿದ್ದು, ಈ ಜಾಲತಾಣವು ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದ ನಿಯಮ, ಆದೇಶ, ಮಾರ್ಗಸೂಚಿ, ಕೈಪಿಡಿ, ಮತಕ್ಷೇತ್ರದ ಪರಿಮಿತಿ ಹಾಗೂ ಚುನಾವಣಾ ಕಾರ್ಯನಿರತ ಅಧಿಕಾರಿಗಳ ವಿವರವನ್ನೊಳಗೊಂಡ ಮಾಹಿತಿಗಳನ್ನು ನಾಗರೀಕರಿಗೆ ಒದಗಿಸುವುದರ ಜೊತೆಗೆ ಮತದಾರರ ನೋಂದಣಿ ಮತ್ತು ಗುರುತಿನ ಚೀಟಿಯ (ಎಪಿಕ್) ವಿತರಣೆಯಲ್ಲಿ ನಾಗರೀಕರ ಮತ್ತು ಈ ಕಛೇರಿಯ ನಡುವೆ ಸಂಪರ್ಕ ಕೊಂಡಿಯಂತೆ ಕಾರ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ. ಅಷ್ಟೇ ಅಲ್ಲದೆ ಈ ಕಚೇರಿಯ(office) ಜಾಲತಾಣದಲ್ಲಿ ನಾವು ಅಂತಿಮ ಮತದಾರರ ಪಟ್ಟಿಯನ್ನು ಕೂಡ ನೋಡಬಹುದಾಗಿದೆ. ಅದರ ವಿಧಾನ ಕೆಳಗಿನಂತಿದೆ :
ಅಂತಿಮ ಮತದಾರರ ಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕದ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ https://ceo.karnataka.gov.in/kn
ನಂತರ ಇಲ್ಲಿ ನಿಮ್ಮ ಜಿಲ್ಲೆ ತಾಲೂಕು ಮತ್ತು ಭಾಷೆಯನ್ನು ಆಯ್ಕೆ ಮಾಡಿ ಕೆಳಗಿರುವ ಕ್ಯಾಪ್ಚ ಕೋಡ್ ಅನ್ನು ಸರಿಯಾಗಿ ಎಂಟರ್ ಮಾಡಬೇಕು
ಹಂತ 2: ನಂತರ ಸ್ಕ್ರೀನ್ ಮೇಲೆ ಕಾಣುವ ನಿಮ್ಮ ಪೋಲಿಂಗ್ ಬೂತ್ ಮುಂದುಗಡೆ ಇರುವ ಫೈನಲ್ ರೋಲ್ 2024ರ ಕೆಳಗೆ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡಬೇಕು

ಹಂತ 4: ಈಗ ನಿಮ್ಮ ಪೊಲೀಸ್ ನ ಫೈನಲ್ ಆಗಿರುವ ಎಲ್ಲಾ ಮತದಾರರ ಯಾದಿ ನಿಮಗೆ ಕಾಣಿಸುತ್ತದೆ

ಹೀಗೆ ನಿಮ್ಮ ಫೋನಿನಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ನೋಡಬಹುದಾಗಿದೆ. ಅಷ್ಟೇ ಅಲ್ಲದೇ ನಿಮ್ಮ ಹೆಸರು ಸರಿಯಿದೆಯೇ ಎಂಬ ಮಾಹಿತಿ ಕೂಡ ಅಲ್ಲಿ ದೊರೆಯುತ್ತದೆ.
ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 9 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.
ಮತದಾರರೇ ನೇರವಾಗಿ https://www.nvsp.in ಮತ್ತು https://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ
- Voter ID: ವೋಟರ್ ಐಡಿಗೆ ಅರ್ಜಿ ಸಲ್ಲಿಸುವುದು ಹೇಗೆ? ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸುವ ವಿಡಿಯೋ ಇಲ್ಲಿದೆ
- ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ LKG &1ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- SSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024
- ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 35,000 ರೂಪಾಯಿ ಪ್ರೋತ್ಸಾಹ ಧನ
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





