WhatsApp Image 2025 08 23 at 3.46.53 PM

ಗೌರಿ-ಗಣೇಶ ಹಬ್ಬಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ವಿಶೇಷ ಬಸ್ ವ್ಯವಸ್ಥೆ

Categories:
WhatsApp Group Telegram Group

ಹುಬ್ಬಳ್ಳಿ: ಗೌರಿ-ಗಣೇಶೋತ್ಸವದ ಸಂದರ್ಭದಲ್ಲಿ ಹಾಗೂ ವಾರಾಂತ್ಯದಲ್ಲಿ ಸಾರ್ವಜನಿಕರಿಗೆ ಸುಗಮ ಪ್ರಯಾಣದ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು (NWKRTC) ವಿಶೇಷ ಬಸ್ ಸೇವೆಗಳನ್ನು ಆಯೋಜಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ನಿಗಮವು ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆಯಂತಹ ತನ್ನ ಎಲ್ಲಾ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಒಡ್ಡಲು ತೀರ್ಮಾನಿಸಿದೆ.

ಈ ವಿಶೇಷ ಬಸ್ ಸೇವೆಗಳು ಆಗಸ್ಟ್ 22 (ಶುಕ್ರವಾರ), 23 (ಶನಿವಾರ – ಭೀಮನ ಅಮಾವಾಸ್ಯೆ), 24 (ಭಾನುವಾರ), 26 (ಸ್ವರ್ಣ ಗೌರಿ ವ್ರತ) ಮತ್ತು 27 (ಗಣೇಶ ಚತುರ್ಥಿ) ರಂದು ಲಭ್ಯವಿರುತ್ತವೆ. ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಗೆ ಮತ್ತು ಅಂತರ್ರಾಜ್ಯ ಗಮ್ಯಸ್ಥಾನಗಳಿಗೆ ಈ ಬಸ್‌ಗಳನ್ನು ವಿಶೇಷವಾಗಿ ನಿಯೋಜಿಸಲಾಗಿದೆ.

ಹಬ್ಬದ ನಂತರ, ಆಗಸ್ಟ್ 27 ರಿಂದ, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಪ್ರಮುಖ ಮಾರ್ಗಗಳಿಗೆ ಇನ್ನಷ್ಟು ಹೆಚ್ಚುವರಿ ಬಸ್‌ಗಳನ್ನು ಸೇವೆಗೆ ಒಡ್ಡಲಾಗುವುದು.

ಪ್ರಯಾಣಿಕರು ಈ ವಿಶೇಷ ಸಾರಿಗೆ ಸೌಕರ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡು ಸುರಕ್ಷಿತ ಹಾಗೂ ಆರಾಮದಾಯಕ ಪ್ರಯಾಣವನ್ನು ಕೈಗೊಳ್ಳಲು ಮತ್ತು ಸಾರ್ವಜನಿಕ ಬಸ್ ಸೇವೆಗೆ ಆದ್ಯತೆ ನೀಡಲು ನಿಗಮವು ಮನವಿ ಮಾಡಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories