ಕರ್ನಾಟಕ ರಾಜ್ಯಕ್ಕೆ 50 ವರ್ಷಗಳ ಸಂಭ್ರಮ: ಕನ್ನಡ ರಾಜ್ಯೋತ್ಸವದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ!

kannada rajyostava full deatails

ಮೈಸೂರು ರಾಜ್ಯಕ್ಕೆ ಕರ್ನಾಟಕ( karnataka ) ಎಂದು ನಾಮಕರಣವಾಗಿ 50 ವರ್ಷಗಳು(Golden jubilee) ಗತಿಸಿರುವ ಹಿನ್ನಲೆಯಲ್ಲಿ ನವೆಂಬರ 2 ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50 ರ ವರ್ಷಾಚರಣೆ ನಡೆಸಲಾಗುತ್ತದೆ. ಇದೀಗ ನಾವು 50 ರ ಸಂಭ್ರಮದಲ್ಲಿದ್ದೇವೆ. ನಮ್ಮ ನಾಡಹಬ್ಬ ವಿಶೇಷವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ( CM . Siddaramayya ) ಅವರ ಆಶಯದಂತೆ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ ಮಾಡಲಾಗುದು ಎಂದು ತಿಳಿದು ಬಂದಿದೆ. ಕನ್ನಡ ರಾಜ್ಯೋತ್ಸವದ ಹಾಗೂ ಕನ್ನಡದ ಹಿನ್ನೆಲೆಯ ಕುರಿತಾದ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಎಲ್ಲರಿಗೂ ಕನ್ನಡ ಹಬ್ಬದ ಶುಭಾಶಯಗಳು :

ಎಲ್ಲರೂ ಕರ್ನಾಟಕ ಸಂಭ್ರಮ-50 ಕನ್ನಡದ ಹಬ್ಬವನ್ನು ವಿಜೃಂಬಣೆಯಿಂದ ಆಚರಿಸೋಣ. ಮೆರವಣಿಗೆಗೆ ಬೀದಿಯುದ್ದಕ್ಕೂ ದೀಪಾಲಂಕಾರ, ಪ್ರಮುಖ ವೃತ್ತಗಳಲ್ಲಿ ಸರ್ಕಾರಿ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಎಲ್ಲ ಅಲಂಕಾರಗಳು ಸಹ ಕನ್ನಡಮಯ ವಾತಾವರಣವನ್ನು ಸೃಷ್ಟಿಸಬೇಕಿದೆ.

ನವೆಂಬರ್ 1ರಿಂದ‌ ಮುಂದಿನ‌ ವರ್ಷ 2024ರ ನವೆಂಬರ್ 30ರ ವರೆಗೆ ಅಂದರೆ ಒಂದು ವರ್ಷ ಕರ್ನಾಟಕದ‌ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಹಾಗೆಯೇ ನವೆಂಬರ 1 ರಿಂದ 3 ರ ವರೆಗೆ ಪ್ರತಿ ದಿನ ಸಂಜೆ ಕಾಟನ ಸೇಲ್ ಸೋಸೈಟಿ ಆವರಣದ ಬೃಹತ ವೇದಿಕೆಯಲ್ಲಿ ಸಾಂಸೃತಿಕ ಕಾರ್ಯಕ್ರಮಗಳು( cultural programs ) ಜರುಗಲಿವೆ. ನವೆಂಬರ 1 ರಂದು ಸ್ಥಳೀಯ ಕಲಾವಿದರಿಂದ ನವೆಂಬರ 2 ಮತ್ತು 3 ರಂದು ಸ್ಥಳೀಯ ಹಾಗೂ ರಾಜ್ಯ ಮಟ್ಟದ ಕಲಾವಿದರಿಂದ ಸಾಂಸೃತಿಕ ಕಾರ್ಯಕ್ರಮಗಳು ಜರುಗಲಿವೆ.

ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕನ್ನಡ ಧ್ವಜಾರೋಹಣ ನೆರವೇರಿಕೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ಶಾಸಕರು ಕನ್ನಡ ಧ್ವಜ ವಂದನೆ ನೆರವೇರಿಸಲಿದ್ದಾರೆ. ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂಭ್ರಮ ಸಡಗರದಿಂದ ನಾಡಧ್ವಜದ ಧ್ವಜಾರೋಹಣ ಕಾರ್ಯಕ್ರಮ ನಡೆಸುವುದು. ನಾಡಿನ ಎಲ್ಲ ಕನ್ನಡಿಗರು, ಕನ್ನಡ ಮನಸ್ಸುಗಳು, ಕನ್ನಡ ಪರ ಹೋರಾಟಗಾರರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ.

ಹಿಂದೆಯೂ ಕೂಡ ಹೀಗೆ ಸಂಭ್ರಮದ ಆಚರಣೆ ನಡೆದಿತ್ತು :

ನೋಡುವುದಾದರೆ, 1973ರಲ್ಲಿ‌‌ ಅಂದಿನ‌ ಮುಖ್ಯಮಂತ್ರಿ ದೇವರಾಜ ಅರಸು( CM. Devaraaja aras ) ಅವರ ಅವಧಿಯಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟ ಬಳಿಕ ನವೆಂಬರ್ 2 ರಂದು ಹಂಪಿಯಲ್ಲಿ ಹಾಗೂ ನವೆಂಬರ್ 3 ರಂದು ಗದಗ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈಗಲೂ ಅದೇ ಮಾದರಿಯಲ್ಲಿ ಎರಡು ಜಿಲ್ಲೆಗಳಲ್ಲಿ ಕಾರ್ಯಕ್ರಮ‌ ನಡೆಯಲಿದೆ ಎಂದು ತಿಳಿದು ಬಂದಿದೆ.

ನವೆಂಬರ್ 1ರಂದು ರಾಜ್ಯೋತ್ಸವದ(kannada Rajyostava) ‌ಕಾರ್ಯಕ್ರಮದಲ್ಲಿ ನಾಡಿನ‌ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು( Five kannada songs ) ಹಾಡುವ ಮೂಲಕ ಸಮಸ್ತ ಕನ್ನಡಿಗರು‌ ಕನ್ನಡಾಂಬೆಗೆ ನುಡಿ ನಮನ (ಕನ್ನಡ ಗೀತೆಗಳ ಗಾಯನದ ಮೂಲಕ ) ಸಲ್ಲಿಸಲಾಗುವುದು. ಈ 5 ಕನ್ನಡ ಗೀತೆಗಳೆಂದರೆ :

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು- ಹುಯಿಲಗೋಳ ನಾರಾಯಣರಾಯರು.
ಎಲ್ಲಾದರು ಇರು ಎಂತಾದರು ಇರು.. – ಕುವೆಂಪು
ಒಂದೇ ಒಂದೇ ಕರ್ನಾಟಕ ಒಂದೇ.. – ದ.ರಾ.ಬೇಂದ್ರೆ
ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ.. – ಸಿದ್ದರಯ್ಯ ಪುರಾಣಿಕ್
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ… – ಚನ್ನವೀರ ಕಣವಿ.

ಕರ್ನಾಟಕ ದ 50 ರ ಸಂಭ್ರಮವನ್ನು ಎಲ್ಲರೂ ವಿಜೃಂಭಣೆಯಿಂದ ಆಚರಿಸೋಣ. ನಮ್ಮ ಭಾಷೆ ನಮ್ಮ ಹೆಮ್ಮೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!