ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಖಾಲಿ ಇರುವ 52 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನ.
ಉದ್ಯೋಗದ ಮುಖ್ಯಾಂಶಗಳು (Job Highlights)
- ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
- ಹುದ್ದೆಯ ಹೆಸರು: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET)
- ವೇತನ (Salary): ಮಾಸಿಕ ₹40,000 ರಿಂದ ₹1,40,000/-
- ಅರ್ಜಿ ಶುಲ್ಕ & ಪರೀಕ್ಷೆ: ಯಾವುದೇ ಅರ್ಜಿ ಶುಲ್ಕವಿಲ್ಲ. ಕೇವಲ ಸಂದರ್ಶನದ (Interview) ಮೂಲಕ ನೇರ ಆಯ್ಕೆ ಮಾಡಲಾಗುವುದು.
ಕೇಂದ್ರ ಸರ್ಕಾರದ ಪ್ರತಿಷ್ಠಿತ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಇಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಖಾಲಿ ಇರುವ 52 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET-2025) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು (Advt. No.: 07/26) ಹೊರಡಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮೇ 29, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷವೆಂದರೆ, ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಹಾಗೂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ದೈನಂದಿನ ತಾಜಾ ಉದ್ಯೋಗ ಮಾಹಿತಿಗಾಗಿ ತಪ್ಪದೆ ನಮ್ಮ needsofpublic.in ವೆಬ್‌ಸೈಟ್‌ಗೆ ಭೇಟಿ ನೀಡಿ. ಅಥವಾ, ಉಚಿತವಾಗಿ ಹಾಗೂ ಕ್ಷಣಕ್ಷಣದ ಉದ್ಯೋಗದ ಅಪ್‌ಡೇಟ್‌ಗಳನ್ನು ನೇರವಾಗಿ ನಿಮ್ಮ ಮೊಬೈಲ್‌ನಲ್ಲೇ ಪಡೆಯಲು ನಮ್ಮ ವಾಟ್ಸಾಪ್ (WhatsApp) ಚಾನೆಲ್ ಅನ್ನು ಈಗಲೇ ಜಾಯಿನ್ ಆಗಿ!
ಹುದ್ದೆಗಳ ವಿವರ (Vacancy Details)
ಒಟ್ಟು 52 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿಭಾಗವಾರು ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ:
| ವಿಭಾಗ (Department) | ಹುದ್ದೆಗಳ ಸಂಖ್ಯೆ (No. of Posts) |
|---|---|
| ಮೈನಿಂಗ್ (Mining) | 25 ಹುದ್ದೆಗಳು |
| ಸಿವಿಲ್ (Civil) | 27 ಹುದ್ದೆಗಳು |
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ (Eligibility Criteria)
- ಶೈಕ್ಷಣಿಕ ಅರ್ಹತೆ (Educational Qualification): ಎನ್‌ಟಿಪಿಸಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಿಂದ ಕಡ್ಡಾಯವಾಗಿ BE / B.Tech (ಸಂಬಂಧಿಸಿದ ವಿಭಾಗದಲ್ಲಿ) ಪದವಿ ಪೂರ್ಣಗೊಳಿಸಿರಬೇಕು.
- ವಯೋಮಿತಿ (Age Limit): ಅಭ್ಯರ್ಥಿಗಳ ವಯೋಮಿತಿಯನ್ನು ಎನ್‌ಟಿಪಿಸಿ (NTPC) ನಿಬಂಧನೆಗಳ ಪ್ರಕಾರ ನಿಗದಿಪಡಿಸಲಾಗಿದೆ (ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ).
ಪ್ರಮುಖ ದಿನಾಂಕಗಳು (Important Dates)
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ, ಆನ್‌ಲೈನ್ ಲಿಂಕ್ ಸಕ್ರಿಯಗೊಂಡ ಕೂಡಲೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-05-2026 (ಮೇ 15, 2026)
- ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-05-2026 (ಮೇ 29, 2026)
ಅರ್ಜಿ ಸಲ್ಲಿಸುವ ವಿಧಾನ (How to Apply)
Step 1: ಆಸಕ್ತ ಅಭ್ಯರ್ಥಿಗಳು ಮೊದಲು ಎನ್‌ಟಿಪಿಸಿ ಅಧಿಕೃತ ವೆಬ್‌ಸೈಟ್ ntpc.co.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಅದು ಇಲ್ಲಿ ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆನ್‌ಲೈನ್ ಅರ್ಜಿ ತುಂಬುವ ಮೊದಲು, ಸಕ್ರಿಯವಾಗಿರುವ ಇಮೇಲ್ ಐಡಿ (Email ID) ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಇಟ್ಟುಕೊಳ್ಳಿ.
Step 2: ನಂತರ advt.07/26 ನ APPLY ಬಟನ್ ಮೇಲೆ ಕ್ಲಿಕ್ ಮಾಡಿ, ನಂತರ ನೀವು ಮೊದಲ ಬಾರಿಗೆ ಅರ್ಜಿ ಸಲ್ಲಿಸುತ್ತಿದ್ದರೆ, Registration ಮಾಡಿಕೊಳ್ಳಬೇಕು.

Step 3: ಐಡಿ ಪ್ರೂಫ್ (ಆಧಾರ್ ಕಾರ್ಡ್), ವಯಸ್ಸಿನ ದಾಖಲೆ, ಶೈಕ್ಷಣಿಕ ಪ್ರಮಾಣಪತ್ರಗಳು, ರೆಸ್ಯೂಮ್ ಮತ್ತು ಪಾಸ್‌ಪೋರ್ಟ್ ಅಳತೆಯ ಫೋಟೋವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
Step 4: ನಂತರ ನಿಮ್ಮ ಆಧಾರ್ ಕಾರ್ಡ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಂಡು, ನಂತರ ಲಾಗಿನ್ ಆಗಿ, ಸರಿಯಾದ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿ

Step 5: ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಕೊನೆಯದಾಗಿ Submit ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ನಂಬರ್ (Application Number) ಪ್ರಿಂಟ್ ತೆಗೆದುಕೊಳ್ಳಿ.
To Download Short Notification
Apply Online for 52 Engineering Executive Trainees (EET)

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್‌ಡೇಟ್‌ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




