ಬೆಂಗಳೂರು: ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಶುಭಸುದ್ದಿ. ಫೆಬ್ರವರಿ ತಿಂಗಳಿನಿಂದ ‘ಇಂದಿರಾ ಕಿಟ್’ ವಿತರಣೆ ಪ್ರಾರಂಭವಾಗಲಿದೆ ಎಂದು ಇದರ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ದೃಢೀಕರಿಸಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ (PMGKY) ಅಡಿಯಲ್ಲಿ ಈ ಹೊಸ ‘ಇಂದಿರಾ ಕಿಟ್’ ಅನ್ನು ಪರಿಚಯಿಸಲಾಗುವುದು. ಸಚಿವರ ಮಾತಿನಂತೆ, ಈ ಕಿಟ್ನಲ್ಲಿ ಕುಟುಂಬದ ಅವಶ್ಯಕತೆಗೆ ಅನುಗುಣವಾಗಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆ ಸೇರಿದಂತೆ ಅತ್ಯಾವಶ್ಯಕ ಆಹಾರ ಪದಾರ್ಥಗಳು ಇರುತ್ತವೆ.
ಕುಟುಂಬದಲ್ಲಿರು ಜನಸಂಖ್ಯೆ ಆಧಾರದ ಮೇಲೆ ವಿಂಗಡಣೆ:
ಸಚಿವರು ವಿವರಿಸಿದಂತೆ, ಪಡಿತರ ಚೀಟಿಯಲ್ಲಿರುವ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಕಿಟ್ಗಳನ್ನು 3 ವಿಭಾಗಗಳಾಗಿ ವಿಂಗಡಿಸಲಾಗಿದೆ:
- 1-2 ಸದಸ್ಯರು: ಈ ಕಿಟ್ನಲ್ಲಿ 750 ಗ್ರಾಂ ತೊಗರಿ ಬೇಳೆ, 0.5 ಲೀಟರ್ ಅಡುಗೆ ಎಣ್ಣೆ, ಮತ್ತು 500 ಗ್ರಾಂ (ಅರ್ಧ ಕಿಲೋ) ಸಕ್ಕರೆ ಮತ್ತು ಉಪ್ಪು ಸೇರಿರುತ್ತದೆ.
- 3-4 ಸದಸ್ಯರು: ಈ ಕುಟುಂಬಗಳಿಗೆ 1.5 ಕಿಲೋ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, ಮತ್ತು 1 ಕಿಲೋ ಸಕ್ಕರೆ ಮತ್ತು ಉಪ್ಪು ನೀಡಲಾಗುವುದು.
- 5 ಮತ್ತು ಅದಕ್ಕಿಂತ ಹೆಚ್ಚು ಸದಸ್ಯರು: ಇಂತಹ ದೊಡ್ಡ ಕುಟುಂಬಗಳಿಗೆ 2.25 ಕಿಲೋ ತೊಗರಿ ಬೇಳೆ, 1.5 ಲೀಟರ್ ಅಡುಗೆ ಎಣ್ಣೆ, ಮತ್ತು 1.5 ಕಿಲೋ ಸಕ್ಕರೆ ಮತ್ತು ಉಪ್ಪು ಒದಗಿಸಲಾಗುವುದು.
ಯೋಜನೆಯ ಉದ್ದೇಶ:
‘ಇಂದಿರಾ ಆಹಾರ ಕಿಟ್’ ಯೋಜನೆಯು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ 5 ಕಿಲೋ ಉಚಿತ ಅಕ್ಕಿಯ ಸ್ಥಾನ ಪಡೆಯಲಿದೆ. ಈ ಹೊಸ ಕಿಟ್ ಕೇವಲ ಅಕ್ಕಿ ಮಾತ್ರವಲ್ಲದೇ, ತೊಗರಿ ಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆಯನ್ನು ಒಳಗೊಂಡಿರುತ್ತದೆ. ರಾಜ್ಯದ ಬಿಪಿಎಲ್ ಕುಟುಂಬಗಳಿಗೆ ಹೆಚ್ಚು ಸಮತೋಲಿತ ಮತ್ತು ಪೋಷಕಾಂಶದ ಆಹಾರ ಸರಬರಾಜು ಖಚಿತಪಡಿಸುವುದೇ ಈ ಬದಲಾವಣೆಯ ಮುಖ್ಯ ಉದ್ದೇಶವಾಗಿದೆ.
ಈ ಕ್ರಮವು ದೇಶದ ಗರೀಬ್ ಕಲ್ಯಾಣ ಯೋಜನೆಗಳೊಂದಿಗೆ ಹೊಂದಿಕೊಂಡು, ಬಡ ಮತ್ತು ದುರ್ಬಲ ವರ್ಗದ ಜನತೆಗೆ ಸಮಗ್ರ ಆಹಾರ ಸುರಕ್ಷತೆ ನೀಡುವ ದಿಶೆಯಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.
ಹೆಚ್ಚಿನ ಮಾಹಿತಿಗೆ:
- ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (https://food.karnataka.gov.in)
- ಟೋಲ್-ಫ್ರಿ ಹೆಲ್ಪ್ಲೈನ್: 1967

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




