WhatsApp Image 2025 10 15 at 2.55.59 PM

BREAKING: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್ ಅಧಿಕೃತ ಆದೇಶ.!

WhatsApp Group Telegram Group


ರಾಜ್ಯದ ವಿದ್ಯಾರ್ಥಿಗಳಿಗೆ ಒಂದು ಸಂತಸದ ಸುದ್ದಿ. ಎಸ್.ಎಸ್.ಎಲ್.ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕಗಳ ಮಿತಿಯನ್ನು ಸರ್ಕಾರ ಕಡಿಮೆ ಮಾಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಶೇ. 33ರಷ್ಟು ಅಂಕಗಳನ್ನು ಗಳಿಸಿದರೂ ಪಾಸಾಗುತ್ತಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪಿಯುಸಿಯಲ್ಲಿ (ಒಟ್ಟು 600 ಅಂಕಗಳಲ್ಲಿ) ಈ ಹಿಂದೆ 35% ಅಂದರೆ 210 ಅಂಕಗಳನ್ನು ಪಡೆಯುವುದು ಕಡ್ಡಾಯವಿತ್ತು. ಈಗ 33% ಅಂಕಗಳಿಗೆ ಇಳಿಕೆ ಮಾಡಿರುವುದರಿಂದ, ವಿದ್ಯಾರ್ಥಿಗಳು 198 ಅಂಕಗಳನ್ನು ಪಡೆದರೂ ಉತ್ತೀರ್ಣರಾಗುತ್ತಾರೆ. ಈ ನಿರ್ಧಾರವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುವುದು.

ಉತ್ತೀರ್ಣ ಅಂಕವನ್ನು 35% ರಿಂದ 33% ಕ್ಕೆ ಇಳಿಕೆ ಮಾಡುವ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ನಡೆದ ಚರ್ಚೆಯಲ್ಲಿ 701 ಮಂದಿ 33 ಅಂಕಗಳ ಪರವಾಗಿ ಒಲವು ವ್ಯಕ್ತಪಡಿಸಿದ್ದು, ಕೇವಲ 8 ಅಭಿಪ್ರಾಯಗಳು ಮಾತ್ರ 35 ಅಂಕಗಳ ಪರವಾಗಿ ಬಂದಿದ್ದವು. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವರ್ಷದಿಂದಲೇ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿಪಡಿಸಲಾಗಿದೆ. ಈ ಕುರಿತು ನಾಳೆ ಅಧಿಕೃತ ಅಧಿಸೂಚನೆ (Notification) ಹೊರಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಆದರೆ, ಕನ್ನಡ ಭಾಷೆಗೆ ನಿಗದಿಪಡಿಸಲಾಗಿರುವ 125 ಅಂಕಗಳನ್ನು 100ಕ್ಕೆ ಇಳಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

WhatsApp Image 2025 09 05 at 11.51.16 AM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories