ಬೆಂಗಳೂರು, ಮೇ 8: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಐಎಎಸ್ (IAS) ಮತ್ತು ಕೆಎಎಸ್ (KAS) ಪರೀಕ್ಷೆಗಳಿಗೆ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಶೇಷ ಪರೀಕ್ಷೆಯನ್ನು ನಡೆಸಲಿದೆ. ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ಸಹಯೋಗದೊಂದಿಗೆ ಈ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾರಿಗೆ ಅರ್ಜಿ ಸಲ್ಲಿಸಲು ಅರ್ಹತೆ?
ಕಲ್ಯಾಣ ಕರ್ನಾಟಕ ಪ್ರದೇಶದ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗದ (OBC) ವಿದ್ಯಾರ್ಥಿಗಳು ಈ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಕರ್ನಾಟಕದ ಮೂಲ ನಿವಾಸಿಗಳಾಗಿರಬೇಕು ಮತ್ತು ಐಎಎಸ್/ಕೆಎಎಸ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಾಗಿರಬೇಕು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಮುಖ್ಯ ದಿನಾಂಕಗಳು
- ಆನ್ಲೈನ್ ಅರ್ಜಿ ಪ್ರಾರಂಭ: ಮೇ 8, ಮಧ್ಯಾಹ್ನ 12;00 ಗಂಟೆಗೆ
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಮೇ 19, ಸಂಜೆ 5:೦೦ ಗಂಟೆವರೆಗೆ
- ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: ಮೇ 20, ಸಂಜೆ 5:೦೦ ಗಂಟೆವರೆಗೆ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್: https://cetonline.karnataka.gov.in/kea
ಹೆಚ್ಚಿನ ಮಾಹಿತಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಎಚ್. ಪ್ರಸನ್ನ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಮತ್ತು ಶುಲ್ಕವನ್ನು ಸಮಯಕ್ಕೆ ಪಾವತಿಸಬೇಕು.
ಈ ತರಬೇತಿ ಕಾರ್ಯಕ್ರಮವು UPSC ಮತ್ತು KPSC ಪರೀಕ್ಷೆಗಳಿಗೆ ಸ್ಪರ್ಧಾತ್ಮಕ ತಯಾರಿ ನಡೆಸಲು ಸಹಾಯಕವಾಗಿದೆ. ಹೆಚ್ಚಿನ ವಿವರಗಳಿಗಾಗಿ KEA ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.