ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣದ ಸಿಹಿ ಸುದ್ದಿಯೊಂದನ್ನು ರಾಜ್ಯ ಸರ್ಕಾರ ಕೊಟ್ಟಿದೆ, ಸರ್ಕಾರ ಜಾರಿಗೆ ತಂದಿರುವ ಈ ಗೃಹಲಕ್ಷ್ಮೀ ಯೋಜನೆಯು ಅದೆಷ್ಟೋ ಮಹಿಳೆಯರಿಗೆ ( For Women’s ) ದಾರಿ ದೀಪವಾಗಿದೆ. ಅವರು ಆರ್ಥಿಕ ಪರಿಸ್ಥಿಯನ್ನು ದೂರ ಮಾಡಿ ಸ್ವಲ್ಪ ಮಟ್ಟಿಗೆ ಆರ್ಥಿಕ ನಿಲುವನ್ನು ಸಾರ್ಕರ ನೀಡಿದೆ. ಇದರಿಂದ ಅವರ ಸಣ್ಣ ಪುಟ್ಟ ಕೆಲಸ ಕಾರ್ಯಗಳಿಗೆ ಈ ಒಂದು ಯೋಜನೆಯಿಂದ ಬರುವ ದುಡ್ಡು ಬಹಳ ಉಪಯೋಗವಾಗಿದೆ. ಹೌದು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಮತ್ತು ಅನ್ನಭಾಗ್ಯದ ಯೋಜನೆಯ ಮಾರ್ಚ್ ತಿಂಗಳ ಹಣದ ಕುರಿತು ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪೆಂಡಿಂಗ್ (pending amount) ಇರುವ ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳಲು ಈ ಕ್ರಮ ಕೈಗೊಳ್ಳಬೇಕು :
ಸಿಡಿಪಿಓ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿದ ದಾಖಲೆಗಳನ್ನು ನೀಡಬೇಕು (Visit CDPO office)
ಅದೆಷ್ಟೋ ಮಹಿಳೆಯರ ಖಾತೆಗೆ ಇನ್ನು ಒಂದು ಕಂತಿನ ಹಣವೂ ಬಂದಿಲ್ಲ. ಈ ರೀತಿಯ ಸಮಸ್ಯೆ ಇದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ್ದಕ್ಕೆ ಸಿಕ್ಕಿರುವ ಸ್ವೀಕೃತಿ ಎಲ್ಲವನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ (Money Deposit) ಬಂದಿಲ್ಲ ಎನ್ನುವ ಮಾಹಿತಿಯನ್ನು ಪಡೆಯಿರಿ. ಯಾವ ತಾಂತ್ರಿಕ ಸಮಸ್ಯೆಯಿಂದ ನಿಮ್ಮ ಖಾತೆಗೆ (Bank Account) ಹಣ ಬಂದಿಲ್ಲ ಎನ್ನುವುದನ್ನು ತಿಳಿಸುತ್ತಾರೆ. ಅದರ ಮೂಲಕ ಆ ಸಮಸ್ಯೆಯನ್ನು ಬಗೆಹರಿಸಿ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವ ಹಾಗೆ ಮಾಡಬಹುದು.
ಸಿ ಡಿ ಪಿ ಓ ಕಚೇರಿಯಲ್ಲಿ ( CDPO Office ) ನಿಮ್ಮ ಅರ್ಜಿ ಅನುಮೋದನೆ ಬಾಕಿ ಇದ್ದರೆ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಿ. ಇದಾದ ಬಳಿಕ ನಿಮ್ಮ ಖಾತೆಗೆ ಕೆವೈಸಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದರೆ ಪೆಂಡಿಂಗ್ ಇರುವ ಹಣ ಕೂಡ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಯಾಕಂದ್ರೆ ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿರುತ್ತದೆ.
ಇ ಕೆ ವೈ ಸಿ ಕಡ್ಡಾಯ ( EKYC Compulsory ) :
ಮೊದಲು ನೀವು ಸಲ್ಲಿಸಿದ ಗೃಹಲಕ್ಷ್ಮೀ ಯೋಜನೆಯ ಬ್ಯಾಂಕ್ ಖಾತೆಗೆ ಇ ಕೆ ವೈ ಸಿ ಪ್ರಕ್ರಿಯೆ ಪೂರ್ಣಗೊಂಡಿದ್ಯಾ ಚೆಕ್ ಮಾಡಿಕೊಳ್ಳಬೇಕು. ಯಾಕೆಂದರೆ, ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಇ ಕೆ ವೈ ಸಿ ಕೂಡ ಕಡ್ಡಾಯ. ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ (E-KYC ) ಆಗದೆ ಇದ್ರೆ ಹಣ ಜಮಾ ಆಗಲು ಸಾಧ್ಯವೇ ಇಲ್ಲ. ಹಾಗಾಗಿ ನೀವು ಬ್ಯಾಂಕ್ ನಲ್ಲಿ ನಿಮ್ಮ ಖಾತೆಗೆ ಇ ಕೆ ವೈ ಸಿ ಆಗಿದೆಯಾ ಎನ್ನುವುದನ್ನು ಚೆಕ್ ಮಾಡಬೇಕಾಗುತ್ತದೆ.
ಆಧಾರ್ ಲಿಂಕಿಂಗ್ ಕಡ್ಡಾಯ ( Adhar Linking is Compulsory ) :
ಇನ್ನೊಂದು ಮುಖ್ಯ ವಿಷಯ ಎಂದರೆ, ಆಧಾರ್ ಲಿಂಕ್, ಹೌದು, ನಿಮ್ಮ ಬ್ಯಾಂಕ್ ಖಾತೆಗೆ ಮುಖ್ಯವಾಗಿ ಆಧಾರ್ ಲಿಂಕ್ ಆಗಿರಲೇಬೇಕು. ಆಧಾರ್ ಲಿಂಕ್ ಆಗಿರಲಿಲ್ಲ ಎಂದರೆ, ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗುವುದಿಲ್ಲ. NPCI mapping ಕೂಡ ಕಡ್ಡಾಯವಾಗಿರುವುದರಿಂದ ಆದಷ್ಟು ಬೇಗ ಬ್ಯಾಂಕ್ ಗೆ ಹೋಗಿ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕು.
ಈ ಮೇಲಿನ ಎಲ್ಲ ಸಮಸ್ಯೆಗಳನ್ನು ( All problems ) ಪರಿಹರಿಸಿ ನಿಮ್ಮ ಗೃಹಲಕ್ಷ್ಮಿ ಯೋಜನೆಗೆ ಬೇಕಾದ ಎಲ್ಲ ಮುಖ್ಯ ದಾಖಲೆಗಳನ್ನು ನೀಡಿದರೆ, ಗೃಹಲಕ್ಷ್ಮೀ ಯೋಜನೆಯ ಪ್ರತಿ ಒಂದು ಕಂತಿನ ಹಣ ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಒಟ್ಟಿಗೆ ಬಂತು ರೂ.10,000/-
ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಡಿಸೆಂಬರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಇದೇ ತಿಂಗಳು 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನ ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೀವು ನೋಡಬಹುದು.

ಮಾರ್ಚ್ ತಿಂಗಳ ಅಕ್ಕಿ ಹಣ ಜಮಾ
ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.

ಈ ಅನ್ನಭಾಗ್ಯ ಹಣ (Anna Bhagya Money) ಈ ತಿಂಗಳಲ್ಲೂ ಕೂಡ ಸರಕಾರ ಬಿಡುಗಡೆ ಮಾಡಿದ್ದು ಎಲ್ಲಾ ಜಿಲ್ಲೆಯ ಫಲಾನುಭವಿಗಳಿಗೂ ಈ ಹಣ ಬಿಡುಗಡೆ ಗೊಳ್ಳಲಿದೆ ಎಂದು ಆಹಾರ ಇಲಾಖೆಯು ಸ್ಪಷ್ಟನೆ ಯನ್ನು ನೀಡಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು ಸರ್ಕಾರವು ಒಂದು ಅಧಿಕೃತ ಜಾಲತಾಣ(ವೆಬ್ಸೈಟ್)ವನ್ನು ಬಿಡುಗಡೆ ಮಾಡಿದೆ. ಹಾಗಾಗಿ ನೀವು ಸ್ಟೇಟಸ್ ಅನ್ನು ನೋಡಿ ತಿಳಿದುಕೊಳ್ಳಬಹುದಾಗಿದೆ.
ಎಲ್ಲಾ ಸರಿ ಇದ್ರೂ ಹಣ ಬಂದಿಲ್ಲ ಅನ್ನೋರು ಇದೊಂದು ಪ್ರಯತ್ನ ಮಾಡಿ
ಎಲ್ಲಾ ದಾಖಲಾತಿ ಸರಿಯಿದೆ ಆದರೂ ಹಣ ಬರುತ್ತಿಲ್ಲ ಎಂದು ಹಾವೇರಿ ಯಜಮಾನಿ ಒಬ್ಬರು ಹೇಳುತ್ತಿದ್ದರು, ನಂತರ ಬ್ಯಾಂಕ್ ಖಾತೆ ಸಮಸ್ಯೆ ಇದೆಯಾ ಎಂದು ಬ್ಯಾಂಕ್ ಆಫ್ ಬರೋಡ ದಲ್ಲಿ ಹೊಸ ಖಾತೆ ತೆರೆದ ಕೇವಲ ಮೂರು ದಿನದಲ್ಲಿ ಖಾತೆಗೆ ಹಣ ಬಂದು ಜಮಾ ಆಗಿದೆ
ಎಲ್ಲ ದಾಖಲಾತಿ ಸರಿ ಇದ್ದವರು ಮತ್ತೊಮ್ಮೆ ಪೋಸ್ಟ್ ಆಫೀಸ್ನಲ್ಲಿ ಒಂದು ಹೊಸ ಖಾತೆಯನ್ನು ತೆರೆಯುವುದು ಉತ್ತಮ, ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆಯನ್ನು ತೆರೆಯಿರಿ ಉದಾ : ಬ್ಯಾಂಕ್ ಆಫ್ ಬರೋಡ, ಕೆನರಾ, SBI, ಎಲ್ಲಾ ಸರಿ ಇದ್ರೂ ಹಣ ಬರ್ತಿಲ್ಲ ಅಂದ್ರೆ ಅದು ಬ್ಯಾಂಕ್ ಆಧಾರ್ ಸೀಡಿಂಗ್ ಸಮಸ್ಯೆಯೂ ಆಗಿರಬಹುದು ಹಾಗಾಗಿ ಹೊಸ ಖಾತೆಯನ್ನು ನೀವು ಆಧಾರ್ ದೃಢೀಕರಣ ಮೂಲಕ ತೆರೆದಾಗ DBT ವರ್ಗಾವಣೆ ಸುಲಭವಾಗಿ ಆಗುತ್ತದೆ. ಇದೊಂದು ಪ್ರಯತ್ನ ಮಾಡಿ ನೋಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಲೋಕಸಭಾ ಚುನಾವಣೆ ದಿನಾಂಕ ಘೋಷಣೆ! ಇಲ್ಲಿದೆ ಮಾಹಿತಿ
- ಸೋಲಾರ್ ಪಂಪ್ ಸೆಟ್ ಖರೀದಿಗೆ 50% ಸಬ್ಸಿಡಿ ವಿತರಣೆಗೆ ಅರ್ಜಿ ಅಹ್ವಾನ. ಇಲ್ಲಿದೆ ಅರ್ಜಿ ಲಿಂಕ್
- ಉಚಿತ ಆಧಾರ್ ಕಾರ್ಡ್ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ
- ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನೋದ್ರಿಂದ ಇಷ್ಟೆಲ್ಲಾ ಲಾಭವಿದೆಯಾ..? ಕಲ್ಲಂಗಡಿಗೆ ಮುಗಿಬಿದ್ದ ಜನ
- ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಪೆಂಡಿಂಗ್ ಹಣ ಬಿಡುಗಡೆ, 2000/- ಹಣ ಬರದೇ ಇದ್ದವರು ಹೀಗೆ ಮಾಡಿ!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






