pm kisan 21st

PM Kisan: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆಗೆ ಕ್ಷಣ ಗಣನೆ.! ಈ ರೈತರ ಖಾತೆಗೆ ಮಾತ್ರ ಹಣ ಜಮಾ.?

WhatsApp Group Telegram Group

ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan scheme) ಯೋಜನೆಯಡಿಯಲ್ಲಿ ಪ್ರತಿ ವರ್ಷ ರೈತರಿಗೆ (Farmer) ಮೂರು ಕಂತುಗಳಲ್ಲಿ ಒಟ್ಟು ರೂ. 6,000 ನೀಡಲಾಗುತ್ತದೆ. ಪ್ರತಿ ಕಂತಿನಲ್ಲಿ ರೂ. 2,000 ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. 2019 ರಲ್ಲಿ ಪ್ರಾರಂಭವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 20 ಕಂತುಗಳನ್ನು ಯಶಸ್ವಿಯಾಗಿ ಬಿಡುಗಡೆ ಮಾಡಲಾಗಿದೆ.

ಈಗ 9 ಕೋಟಿಗೂ ಅಧಿಕ ನೋಂದಾಯಿತ ರೈತ ಫಲಾನುಭವಿಗಳು 21ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಕಳೆದ ಬಾರಿ ಪಿಎಂ ಕಿಸಾನ್ ಯೋಜನೆಯ 20ನೇ ಕಂತು ಬಿಡುಗಡೆಯಾಗಲು ವಿಳಂಬವಾಗಿತ್ತು. ಮೂಲತಃ ಜೂನ್ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇತ್ತಾದರೂ, ಅದು ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಯಿತು. ಆಗ 2.4 ಕೋಟಿ ಮಹಿಳಾ ರೈತರು ಸೇರಿದಂತೆ 9.8 ಕೋಟಿ ರೈತರಿಗೆ ರೂ. 2,000 ಹಣ ತಲುಪಿತ್ತು. ಆದರೆ, ಈ ಬಾರಿ 21ನೇ ಕಂತಿನ ಹಣ ಈ ತಿಂಗಳಿನಲ್ಲಿ ಅಂದರೆ ಅಕ್ಟೋಬರ್‌ನಲ್ಲೇ ಬರುವ ಸಾಧ್ಯತೆ ಇದೆ. ಒಂದು ವೇಳೆ ಈ ತಿಂಗಳು ಬಿಡುಗಡೆಯಾಗದಿದ್ದರೂ, ಮುಂದಿನ ತಿಂಗಳು ನವೆಂಬರ್‌ನಲ್ಲಿ 21ನೇ ಕಂತು ಖಂಡಿತವಾಗಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಪಿಎಂ ಕಿಸಾನ್ ಯೋಜನೆಯ ಪ್ರಯೋಜನಗಳೇನು?

ಪಿಎಂ ಕಿಸಾನ್ ಯೋಜನೆಯ ಪ್ರಮುಖ ಉದ್ದೇಶವು ರೈತರ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಆರ್ಥಿಕವಾಗಿ ನೆರವಾಗುವುದು. ವ್ಯವಸಾಯದ ಅನುಕೂಲಕ್ಕಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಸರ್ಕಾರವು ರೈತರಿಗೆ ತಲಾ ರೂ. 2,000 ಸಹಾಯಧನವನ್ನು ನೀಡುವುದು ಈ ಯೋಜನೆಯ ಗುರಿಯಾಗಿದೆ.

ಒಟ್ಟಾರೆಯಾಗಿ, ರೈತರಿಗೆ ವರ್ಷಕ್ಕೆ ರೂ. 6,000 ಮೊತ್ತವು ಲಭಿಸುತ್ತದೆ. ಸಾಮಾನ್ಯವಾಗಿ ಈ ಕಂತುಗಳು ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಮತ್ತು ಡಿಸೆಂಬರ್-ಮಾರ್ಚ್ ಈ ಅವಧಿಗಳಲ್ಲಿ ಬಿಡುಗಡೆಯಾಗುತ್ತವೆ.

ಪಿಎಂ ಕಿಸಾನ್ ಯೋಜನೆಗೆ ಯಾರು ಅರ್ಹರು?

ಭಾರತದ ಯಾವುದೇ ರೈತರು ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು, ಆದರೆ ಅವರ ಹೆಸರಿನಲ್ಲಿ ಕೃಷಿ ಭೂಮಿ ಇರಬೇಕು. ಆದಾಗ್ಯೂ, ಐಟಿಆರ್ (ಆದಾಯ ತೆರಿಗೆ ರಿಟರ್ನ್) ಸಲ್ಲಿಸುವವರು, ವೈದ್ಯರು, ಎಂಜಿನಿಯರ್‌ಗಳು ಮುಂತಾದ ವೃತ್ತಿಪರರು, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಗಳು, ಪಿಂಚಣಿದಾರರು (ಮಾಸಿಕ ರೂ. 10,000 ಕ್ಕಿಂತ ಹೆಚ್ಚು), ಮತ್ತು ಹಾಲಿ ಅಥವಾ ಮಾಜಿ ಜನಪ್ರತಿನಿಧಿಗಳು ಕೃಷಿ ಭೂಮಿ ಹೊಂದಿದ್ದರೂ ಸಹ ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿರುವುದಿಲ್ಲ.

ಪಿಎಂ ಕಿಸಾನ್ ಯೋಜನೆಗೆ ನೋಂದಾಯಿಸಿಕೊಳ್ಳಲು ಮತ್ತು ಇತರ ಅಗತ್ಯ ಮಾಹಿತಿಗಾಗಿ, ನೀವು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು: pmkisan.gov.in/

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories