PM KISANS

ಪಿಎಂ ಕಿಸಾನ್ : 35 ಲಕ್ಷಕ್ಕೂ ಹೆಚ್ಚು ಜನರಿಗೆ ₹2000 ಹಣ ಸಿಗಲ್ಲ ! ಯಾರು ಅರ್ಹರು, ಯಾರು ಅನರ್ಹರು?

WhatsApp Group Telegram Group

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಮಹತ್ವದ ಪರಿಷ್ಕರಣೆ ನಡೆಯುತ್ತಿದ್ದು, ಅರ್ಹರಲ್ಲದ ಫಲಾನುಭವಿಗಳನ್ನು ಕೈಬಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಸುಮಾರು 35 ಲಕ್ಷಕ್ಕೂ ಹೆಚ್ಚು ಜನರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅನರ್ಹರ ಕೈಬಿಡಲು ಕೇಂದ್ರದ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ (ರೇಷನ್ ಕಾರ್ಡ್) ರದ್ದತಿಯ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವೂ ಅನರ್ಹರಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿರುವವರನ್ನು ಮಟ್ಟ ಹಾಕಲು ಮುಂದಾಗಿದೆ. ಇದೇ ಭಾಗವಾಗಿ, ಕೇಂದ್ರವು ಪಿಎಂ ಕಿಸಾನ್ ಯೋಜನೆಯಡಿ ಭಾರಿ ಪರಿಶೀಲನೆ (ಸರ್ಜರಿ) ನಡೆಸುತ್ತಿದೆ.

ರಾಜ್ಯಕ್ಕೆ ಕೆಲವೇ ದಿನಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ (17ನೇ ಕಂತು) ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಅದಕ್ಕೂ ಮುನ್ನ ಕೇಂದ್ರ ಸರ್ಕಾರವು ಅನರ್ಹ ಫಲಾನುಭವಿಗಳನ್ನು ಹೊರಹಾಕಲು ಪ್ರಕ್ರಿಯೆ ಆರಂಭಿಸಿದೆ.

ಹೌದು, ಈ ಹಿಂದೆ ಸುಮಾರು 10 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದರು. ಆದರೆ ದಿಢೀರ್ ಎಂದು 35 ಲಕ್ಷಕ್ಕೂ ಹೆಚ್ಚು ಜನರನ್ನು ಯೋಜನೆಯಿಂದ ಕೈಬಿಡಲಾಗಿದೆ. ಅನರ್ಹರನ್ನು ಹೊರಗಿಡುವ ಈ ಪ್ರಕ್ರಿಯೆಯು ದಿನದಿಂದ ದಿನಕ್ಕೆ ಮುಂದುವರಿದಿದ್ದು, ಇನ್ನಷ್ಟು ಜನರನ್ನು ಯೋಜನೆಯಿಂದ ತೆಗೆದುಹಾಕುವ ಸಾಧ್ಯತೆ ಇದೆ.

ಕಳೆದ ವರ್ಷ 10,06,85,615 ಜನರು ಪಿಎಂ ಕಿಸಾನ್ ಹಣ ಪಡೆಯುತ್ತಿದ್ದರು, ಆದರೆ ಪ್ರಸ್ತುತ ಅದು 9,71,41,402ಕ್ಕೆ ಇಳಿದಿದೆ. ಜುಲೈ ತಿಂಗಳ ನಂತರ ಯಾವ ಹೊಸ ಹೆಸರುಗಳನ್ನೂ ಯೋಜನೆಯಲ್ಲಿ ಸೇರಿಸಲಾಗಿಲ್ಲ. ಈ ಪರಿಷ್ಕರಣೆ ಮುಂದುವರಿದರೆ, ಇನ್ನೂ ಸುಮಾರು 25 ಲಕ್ಷ ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ನಿರೀಕ್ಷೆಯಿದೆ.

ನೀವು ಮಾಡಬೇಕಿರುವುದು ಏನು?

ಯಾವುದೇ ಗೊಂದಲ ಇಲ್ಲದೆ ಯೋಜನೆಯ ಲಾಭ ಪಡೆಯಲು, ಎಲ್ಲಾ ಫಲಾನುಭವಿಗಳು eKYC ಪರಿಶೀಲನೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಅನರ್ಹರೆಂದು ಗುರುತಿಸಿದವರು ಅಗತ್ಯವಿದ್ದರೆ ಮರು ನೋಂದಣಿ ಮಾಡಿಕೊಳ್ಳುವ ಬಗ್ಗೆ ಮಾಹಿತಿ ಪಡೆಯಬಹುದು.

ಯಾರು ಅರ್ಹರು, ಯಾರು ಅನರ್ಹರು?

ಸರ್ಕಾರದ ನಿಯಮಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಗೆ eKYC ಮತ್ತು ಭೂ ದಾಖಲೆಗಳ ಪರಿಶೀಲನೆ ಪೂರ್ಣಗೊಳಿಸಿದ ಸಣ್ಣ ಮತ್ತು ಅತಿ ಸಣ್ಣ ರೈತರು ಅರ್ಹರಾಗಿರುತ್ತಾರೆ. ಆದರೆ, ಉನ್ನತ ಹುದ್ದೆಯಲ್ಲಿರುವವರು, ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಮತ್ತು ಸಾಂಸ್ಥಿಕ ಭೂ ಹಿಡುವಳಿದಾರರು ಈ ಯೋಜನೆಗೆ ಅನರ್ಹರಾಗುತ್ತಾರೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories