ಉಚಿತ ವಿದ್ಯುತ್ ಸೋಲಾರ್ ಅಳವಡಿಕೆ, ಕೇಂದ್ರದ ಉಚಿತ ವಿದ್ಯುತ್ ಯೋಜನೆಗೆ ಆಪ್ಲೈ ಮಾಡಿ!

IMG 20240920 WA0011

WhatsApp Group Telegram Group
ಕೇಂದ್ರ ಸರ್ಕಾದಿಂದ ಗುಡ್ ನ್ಯೂಸ್, ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಆಹ್ವಾನ!

ಕೇಂದ್ರ ಸರಕಾರದ (central government) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಎಂದರೆ ಪ್ರಧಾನಮಂತ್ರಿ ಸೂರ್ಯ ಘರ್‌(Pradhana mantri Surya ghar) ಉಚಿತ ವಿದ್ಯುತ್‌ ಯೋಜನೆ. ಈ ಯೋಜನೆಗಾಗಿ ಕೇಂದ್ರ ಸರಕಾರ 75 ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಣವನ್ನು ವ್ಯಯಿಸಿದೆ. 2024-25 ನೇ ಸಾಲಿನಲ್ಲಿ ಯೋಜನೆಗಾಗಿ 10,000 ಕೋ. ರೂ.ಗಳನ್ನು ಮೀಸಲಿರಿಸಲಾಗಿದೆ. ದೇಶದಲ್ಲಿ ಸೌರಶಕ್ತಿಯ ಬಳಕೆಯನ್ನು ಹೆಚ್ಚಿಸುವ ಜತೆಜತೆಯಲ್ಲಿ ಜನರ ಮೇಲಣ ವಿದ್ಯುತ್‌ ಬಿಲ್‌ (Current bill) ನ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಸೂರ್ಯ ಘರ್‌ ಉಚಿತ ವಿದ್ಯುತ್‌ ಯೋಜನೆ :

ಭಾರತದ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ (PM suryaghar yojana) ಮೂಲಕ ಅಳವಡಿಸಲಾಗಿದೆ. ಈ ಯೋಜನೆಯ ಮೂಲಕ ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್  ಬಿಲ್  ಕಡಿಮೆಗೊಳಿಸುವ, ಅಂದರೆ ಉಚಿತ ವಿದ್ಯುತ್‌(free current ) ಒದಗಿಸುವ ಯೋಜನೆ ಇದಾಗಿದೆ. ಇದರಿಂದ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ (300 unit) ವಿದ್ಯುತ್ ಉಚಿತವಾಗಿ ಸಿಗಲಿದೆ.

ಕಡಿಮೆ ಆದಾಯ ವರ್ಗದ ಮನೆಗಳಲ್ಲಿ ವಾಸಿಸುವ ಜನರಿಗೆ ಉಚಿತ ಸೌರಶಕ್ತಿ :

ಕಡಿಮೆ ಆದಾಯ ವರ್ಗದ ಮನೆಗಳಲ್ಲಿ ವಾಸಿಸುವ ಜನರು ಉಚಿತ ಸೌರಶಕ್ತಿಯನ್ನು(free solar energy) ಪಡೆಯಬಹುದು ಕೇಂದ್ರ ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್‌ಕೆ ಸಿಂಗ್ ಪ್ರಕಾರ, ಹೊಸ ಮೇಲ್ಛಾವಣಿ ಸೌರ ಯೋಜನೆಗಾಗಿ ಸರ್ಕಾರವು ತಿಂಗಳಿಗೆ 300 ಯೂನಿಟ್‌ಗಳವರೆಗೆ ವಿದ್ಯುತ್ ಅನ್ನು ಬಳಸುವ ಕುಟುಂಬಗಳನ್ನು ಗುರುತಿಸುತ್ತದೆ. ಅದಕ್ಕಿಂತ ಮುಖ್ಯವಾಗಿ, ಅಂತಹ ಕುಟುಂಬಗಳು ತಮ್ಮ ಮೇಲ್ಛಾವಣಿಯ ಮೇಲೆ ಸೌರ ವಿದ್ಯುತ್ ಅನ್ನು ಸ್ಥಾಪಿಸಲು ಪಾವತಿಸಬೇಕಾಗಿಲ್ಲ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕಡಿಮೆ ಆದಾಯದ ಮನೆಗಳನ್ನು ಮಂಜೂರು ಮಾಡಿದ ಜನರನ್ನು ಪರಿಗಣಿಸಲಾಗುತ್ತದೆ.

ಸರ್ಕಾರದಿಂದ ಎಂಟು ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳ (CPSUs) ನೇಮಕ :

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 10 ಮಿಲಿಯನ್ ಕುಟುಂಬಗಳಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲು ಸರ್ಕಾರವು ಎಂಟು ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳನ್ನು (CPSUs) ನೇಮಿಸಿದೆ. ಸೋಲಾರ್ ಪವರ್ ಸಿಸ್ಟಮ್ (solar power system) ಅಳವಡಿಸಿದ ನಂತರ, ಕಡಿಮೆ ಆದಾಯದ ಕುಟುಂಬವು ತಮ್ಮ ಮೇಲ್ಛಾವಣಿಯ ಮೇಲೆ ಉತ್ಪಾದಿಸುವ ವಿದ್ಯುತ್ ಮೂಲಕ ಪ್ರತಿ ತಿಂಗಳು 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಬಹುದು.

ಪ್ರಧಾನಮಂತ್ರಿ ಸೂರ್ಯ ಘರ್‌ ಉಚಿತ ವಿದ್ಯುತ್‌ ಯೋಜನೆಯ ಗ್ರಿಡ್ ಸಂಪರ್ಕದ (Grid connection) ಲಾಭವೇನು ?

ಮನೆಯ ರೂಫ್‌ ಟಾಪ್ ಸೋಲಾರ್‌ ವ್ಯವಸ್ಥೆಯನ್ನು ಗ್ರಿಡ್‌ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್‌ ಬಿಲ್‌ ಪಾವತಿಸಬೇಕಿಲ್ಲ.
ಮನೆಗಳ ಮೇಲ್ಛಾವಣೆಯಲ್ಲಿ ಅಳವಡಿಸುವುದರಿಂದ ಹೆಚ್ಚುವರಿ ಜಾಗದ ಅಗತ್ಯ ಇಲ್ಲ.
ನಿರ್ವಹಣೆ ವೆಚ್ಚ ಕೂಡ ತೀರಾ ಕಡಿಮೆ.
ಈ ಯೋಜನೆಯೂ 2 ಕಿಲೋ ವ್ಯಾಟ್ ಸಾಮರ್ಥ್ಯದವರೆಗಿನ ವ್ಯವಸ್ಥೆಗಳಿಗೆ ಸೌರ ಘಟಕದ ವೆಚ್ಚದ 60% ಮತ್ತು 2 ರಿಂದ 3 ಕಿಲೋ ವ್ಯಾಟ್ ಸಾಮರ್ಥ್ಯದ ನಡುವಿನ ವ್ಯವಸ್ಥೆಗಳಿಗೆ ಹೆಚ್ಚುವರಿ ಸಿಸ್ಟಮ್ ವೆಚ್ಚದ 40%ರಷ್ಟು ಸಹಾಯಧನ ಒದಗಿಸುತ್ತದೆ.

ಪ್ರಧಾನಮಂತ್ರಿ ಸೂರ್ಯ ಘರ್‌ ಉಚಿತ ವಿದ್ಯುತ್‌ ಯೋಜನೆಯಲ್ಲಿ ದೊರೆಯುವ ಸಬ್ಸಿಡಿ (subsidy) :

ಈ ಯೋಜನೆಯಲ್ಲಿ 1 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 30,000 ರೂ. ಸಬ್ಸಿಡಿ ದೊರೆಯುತ್ತಿದ್ದು, 2 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 60,000 ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. 3 ಕಿಲೋ ವ್ಯಾಟ್‌ ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ ಸಬ್ಸಿಡಿ ಮಿತಿ 78,000 ರೂ. ದೊರೆಯಲಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು (Qualifications) :

ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
ಸೌರ ಫಲಕಗಳನ್ನು ಅಳವಡಿಸಲು ಸೂಕ್ತವಾದ ಮೇಲ್ಛಾವಣಿಯನ್ನು ಹೊಂದಿರುವ ಮನೆಯನ್ನು ಹೊಂದಿರಬೇಕು.
ಮನೆಯು ಮಾನ್ಯವಾದ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು.
ಮನೆಯವರು ಸೋಲಾರ್ ಪ್ಯಾನೆಲ್‌ಗಳಿಗೆ ಬೇರೆ ಯಾವುದೇ ಸಬ್ಸಿಡಿಯನ್ನು ಪಡೆದಿರಬಾರದು.

ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ (steps for applying application) :

ಹಂತ 1 : ಮೊದಲಿಗೆ ಗ್ರಾಹಕರು www.pmsuryagarh.gov.in ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ರಾಜ್ಯ ಮತ್ತು ವಿದ್ಯುತ್ ವಿತರಣಾ ಕಂಪನಿಯನ್ನು (ಡಿಸ್ಕಾಂ) ಆಯ್ಕೆ ಮಾಡುವ ಮೂಲಕ ಈ ಕೆಲಸವನ್ನು ಮಾಡಬೇಕಾಗುತ್ತದೆ.
ಹಂತ 2 : ಎಲೆಕ್ಟ್ರಿಕ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಸಹ ನಮೂದಿಸಬೇಕಾಗುತ್ತದೆ.
ಹಂತ 3 : ಒಮ್ಮೆ ನೋಂದಾಯಿಸಿಕೊಂಡ ನಂತರ ಗ್ರಾಹಕ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಮಾಡಬಹುದು.
ಪೋರ್ಟಲ್‌ನಲ್ಲಿ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಗ್ರಾಹಕರು ಮೇಲ್ಛಾವಣಿ ಸೌರಕ್ಕಾಗಿ ಅರ್ಜಿ ಸಲ್ಲಿಸಬಹುದು. ಇದಾದ ನಂತರ ಗ್ರಾಹಕರು ಸ್ಥಳೀಯ ಡಿಸ್ಕಾಂನಿಂದ ಅನುಮೋದನೆಗಾಗಿ ಕಾಯಬೇಕಾಗುತ್ತದೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!