ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

photo1699546913

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY)(Pradhan mantri matru vandana yojaona ) ಅಡಿಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ₹ 6000/- ಪ್ರೋತ್ಸಾಹಧನ ನೀಡಲಾಗುತತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY) :

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY), ಇದು ಭಾರತ ಸರ್ಕಾರದಿಂದ ನಡೆಸಲ್ಪಡುವ ಮಾತೃತ್ವ ಪ್ರಯೋಜನ ಕಾರ್ಯಕ್ರಮವಾಗಿದೆ. ಇದು 19 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಮೊದಲ ನೇರ ಹೆರಿಗೆಗಾಗಿ ಷರತ್ತುಬದ್ಧ ನಗದು ವರ್ಗಾವಣೆ ಯೋಜನೆಯಾಗಿದೆ ಎಂದು ಹೇಳಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಈ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. ಮತ್ತು ₹6000 /- ನಗದು ಪ್ರೋತ್ಸಾಹವನ್ನು ಗರ್ಭಿಣಿಯರು ಮತ್ತು ಹಾಲುಣಿಸುವ /ಬಾಣಂತಿ ತಾಯಂದಿರ ಬ್ಯಾಂಕ್/ಪೋಸ್ಟ್ ಆಫೀಸ್ ಖಾತೆಗೆ (bank/post office account) ನೇರವಾಗಿ ಪಾವತಿಸಲಾಗುತ್ತದೆ.

ಈ ಯೋಜನೆಯಡಿ ಮೊದಲ ಸಲ ಗರ್ಭಿಣಿ ಆದ ಮಹಿಳೆಯರಿಗೆ ಹಾಗೂ ಬಾಣಂತಿ ಮಹಿಳೆಯರಿಗೆ 5,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು.
ಮತ್ತೆ ಎರಡನೇ ಸಲ ಗರ್ಭಿಣಿಯಾಗಿ  ಜನಿಸುವ ಹೆಣ್ಣು ಮಗುವಿಗೆ 6,000 ರೂ. ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿ ಮಹಿಳೆಯರು ಆರೋಗ್ಯವಂತ ಮಗುವಿನ ಜನನಕ್ಕೆ ಪೂರಕ ಪೌಷ್ಠಿಕ ಆಹಾರ ಪಡೆಯಲು ಹಾಗೂ ಮಗುವಿನ ಪಾಲನೆಗೆ ಉಪಯೋಗವಾಗುತ್ತದೆ.

ಎಷ್ಟು ಹಣ ದೊರೆಯುತ್ತದೆ?:

ಮೊದಲನೇ ಭಾರಿ ಗರ್ಭಿಣಿಯಾಗಿರುವ ಅಥವಾ ಬಾಣಂತಿಗೆ ಗರ್ಭಧಾರಣೆ ಖಾತರಿ ನಂತರ ಮೊದಲನೇ ಕಂತಿನಲ್ಲಿ 3,000 ರೂ ಹಣವನ್ನು ನೀಡಲಾಗುತ್ತದೆ. ಮತ್ತು ಅದೇ ಮೊದಲನೇ ಪ್ರಸವದ ಬಾಣಂತಿಗೆ ಮಗು ಜನಿಸಿದ ನಂತರ ಎರಡನೇ ಕಂತಿನಲ್ಲಿ 2,000 ರೂ ಹಣವನ್ನು ನೀಡಲಾಗುತ್ತದೆ. ಹಾಗೂ ಎರಡನೇ ಗರ್ಭಧಾರಣೆಯಲ್ಲಿ ಹೆಣ್ಣು ಮಗು ಜನಿಸಿದ(after birth of girl child) 3 ತಿಂಗಳ ನಂತರದಲ್ಲಿ 6,000 ರೂ. ಗಳನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) (DBT) ಮೂಲಕ ಫಲಾನುಭವಿಯ ಆಧಾರ್ ಲಿಂಕ್ ಇರುವ ಬ್ಯಾಂಕ್ ಖಾತೆಗೆ (bank account linked with adhar number) ವರ್ಗಾವಣೆ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ದಾಖಲೆಗಳು :

ಈ ಯೋಜನೆಗೆ ಅರ್ಜಿ ಸಲ್ಲಿಸುವ ಗರ್ಭಿಣಿಯರು 19 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬಾರದು. (Should be above 19 yrs)

ಈ ಯೋಜನೆಯಡಿಯಲ್ಲಿ, ಜನವರಿ 1, 2017 ರಂದು ಅಥವಾ ನಂತರ ಗರ್ಭಿಣಿಯಾದ ಮಹಿಳೆಯರನ್ನೂ ಅರ್ಹರು ಎಂದು ಪರಿಗಣಿಸಲಾಗುತ್ತದೆ.

ಪಡಿತರ ಚೀಟಿ (Ration card)

ಮಗುವಿನ ಜನನ ಪ್ರಮಾಣಪತ್ರ (baby birth certificate)

ಇಬ್ಬರು ಪೋಷಕರ ಆಧಾರ್ ಕಾರ್ಡ್( parents adhar card)

ಬ್ಯಾಂಕ್ ಖಾತೆ ಪಾಸ್ಬುಕ್ (Bank passbook)

ಇಬ್ಬರೂ ಪೋಷಕರ ಗುರುತಿನ ಚೀಟಿ(parents identity card).

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ 2023 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ :

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹಂತ 1: ಮೊದಲಿಗೆ ನೀವು ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ (official website) https://wcd.nic.in/ ಬೇಟಿ ನೀಡಬೇಕು.

ಹಂತ 2 : ಇಮೇಲ್ ಐಡಿ(E-mail id), ಪಾಸ್‌ವರ್ಡ್ (passward), ಕ್ಯಾಪ್ಚಾ ಕೋಡ್(captch code) ಮುಂತಾದ ಈ ಲಾಗಿನ್ ಫಾರ್ಮ್‌ನಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ನೀವು ಭರ್ತಿ ಮಾಡಿ  ಲಾಗಿನ್ ಬಟನ್ ಅನ್ನು ಕ್ಲಿಕ್ ಮಾಡಬೇಕು.(click login button)

ಹಂತ 3:ಲಾಗಿನ್ ಆದ ನಂತರ, ನೀವು ಈ ಯೋಜನೆಯಡಿಯಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. (Online application).ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ನೀವು ಭರ್ತಿ ಮಾಡಬೇಕಾಗುತ್ತದೆ. ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ ನೀವು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವುಕೆಯನ್ನು ಪೂರ್ಣ ಗೋಳಿಸಬಹುದು.

ಇನ್ನು ನೀವೇನಾದರೂ ಈ ಪ್ರಧಾನ್ ಮಂತ್ರಿ ಮಾತೃ ಯೋಜನೆಗೆ ಆಫ್ ಲೈನ್ ಮೂಲಕ ಅರ್ಜಿ (offline application) ಸಲ್ಲಿಸಬೇಕೆಂದರೆ:

ಈ ಯೋಜನೆಗೆ ಅರ್ಜಿ ಸಲ್ಲಿಸಲು ಗರ್ಭಿಣಿಯರು ಮೂರು ನಮೂನೆಗಳನ್ನು (ಮೊದಲ ನಮೂನೆ, ಎರಡನೇ ನಮೂನೆ, ಮೂರನೇ ನಮೂನೆ) ತುಂಬಬೇಕಾಗುತ್ತದೆ.

ಮೊದಲನೆಯದಾಗಿ ಗರ್ಭಿಣಿಯರು ಅಂಗನವಾಡಿ ಮತ್ತು ಸಮೀಪದ ಆರೋಗ್ಯ ಕೇಂದ್ರಕ್ಕೆ ಹೋಗಿ ನೋಂದಣಿಗಾಗಿ ಮೊದಲ ನಮೂನೆಯನ್ನು ತೆಗೆದುಕೊಂಡು ಅದರಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಇದರ ನಂತರ, ನೀವು ಅಂಗನವಾಡಿ ಮತ್ತು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಹೋಗಿ ಕಾಲಕಾಲಕ್ಕೆ ಎರಡನೇ ನಮೂನೆ ಮತ್ತು ಮೂರನೇ ನಮೂನೆಯನ್ನು ಭರ್ತಿ ಮಾಡಿ ಅದನ್ನು ಸಲ್ಲಿಸಬೇಕಾಗುತ್ತದೆ.

ಎಲ್ಲಾ ಮೂರು ಫಾರ್ಮ್‌ಗಳನ್ನು ಭರ್ತಿ ಮಾಡಿದ ನಂತರ, ಅಂಗನವಾಡಿ ಮತ್ತು ಹತ್ತಿರದ ಆರೋಗ್ಯ ಕೇಂದ್ರಗಳು ನಿಮಗೆ ಸ್ಲಿಪ್ ಅನ್ನು ನೀಡುತ್ತಾರೆ, ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಿಂದ ಆಫ್‌ಲೈನ್ ಅಪ್ಲಿಕೇಶನ್ ಪೂರ್ಣಗೊಳ್ಳುತ್ತದೆ.

ನೀವೂ ಏನಾದರೂ ಈ ಯೋಜನೆಯ ಫಲಾನಭವಿಗಳಾಗಬೇಕೆಂದು ಆಸಕ್ತಿ ಹೊಂದಿದ್ದರೆ ಈ ಮೇಲೆ ತಿಳಿಸಿರುವಂತೆ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಿ ಈ ಪ್ರಧಾನ್ ಮಂತ್ರಿ ಮಾತೃ ವಂದನಾ ಯೋಜನೆಯ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಿ ಮತ್ತು ಇಂತಹ ಉತ್ತಮವಾದ ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!