ಪಿಎಸ್‌ಐ ಹಗರಣದ ಬಳಿಕ ದೊಡ್ಡ ನಿರ್ಧಾರ: ಪೊಲೀಸ್ ಇಲಾಖೆಯ ಕಾನ್ಸೆಬಲ್ ಹುದ್ದೆಗಳಿಗೆ ನೇಮಕಾತಿ, ಯುವಕರಿಗೆ ಉದ್ಯೋಗಾವಕಾಶ
ಕರ್ನಾಟಕದಲ್ಲಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ (state government) ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿರುವ ಮಾಹಿತಿ ಪ್ರಕಾರ, ಶೀಘ್ರದಲ್ಲೇ 8000ಕ್ಕೂ ಹೆಚ್ಚು ಪೊಲೀಸ್ ಕಾನ್ಸೆಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಕಳೆದ ಐದು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ (Police Department) ಯಾವುದೇ ದೊಡ್ಡ ಪ್ರಮಾಣದ ನೇಮಕಾತಿ ನಡೆಯದ ಹಿನ್ನೆಲೆ ಇದೊಂದು ನಿರೀಕ್ಷಿತ ಹಾಗೂ ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಪ್ರಸ್ತುತ ಖಾಲಿ ಹುದ್ದೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಗೆ ಸಹಾಯವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪಿಎಸ್‌ಐ (PSI) ಹಗರಣದ ಕಾರಣ ನೇಮಕಾತಿಯ ಸ್ಥಗಿತ:
ಪಾಲಕರು, ಜನತೆ ಮತ್ತು ಅಭ್ಯರ್ಥಿಗಳು ಬಹುಕಾಲದಿಂದ ನಿರೀಕ್ಷಿಸುತ್ತಿದ್ದ ಪೊಲೀಸ್ ನೇಮಕಾತಿ(Police recruitment) ಇದೀಗ ಪುನರಾರಂಭವಾಗುತ್ತಿರುವುದು ಮಹತ್ವದ್ದಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪಿಎಸ್‌ಐ ಹಗರಣದ ಹಿನ್ನೆಲೆಯಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯದೇ ಇತ್ತು.
ಪಿಎಸ್‌ಐ ಹುದ್ದೆಗಳ ಸ್ಥಿತಿ:
ಸದ್ಯ ಪೊಲೀಸ್ ಉಪನಿರೀಕ್ಷಕರ (PSI) ಹುದ್ದೆಗಳ ಭರ್ತಿ ಕುರಿತು ಮಾತನಾಡಿದ ಸಚಿವರು, ಸುಮಾರು 1000 PSI ಹುದ್ದೆಗಳು ಖಾಲಿಯಿದ್ದು, ಈಗಾಗಲೇ 500 PSI ನೇಮಕಾತಿ ಪ್ರಕ್ರಿಯೆ(Recruitment process) ಪೂರ್ಣಗೊಂಡು, ಅವರು ತರಬೇತಿಯಲ್ಲಿ ಇದ್ದಾರೆ. ಇವರು ಶೀಘ್ರದಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಸೇರಲಿದ್ದಾರೆ.
8000 ಕಾನ್ಸೆಬಲ್ ಹುದ್ದೆಗಳಿಗೆ (Constable jobs) ಹಂತ ಹಂತವಾಗಿ ನೇಮಕಾತಿ:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿ ಕೊರತೆಯ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರತಿ ಜಿಲ್ಲೆಯಲ್ಲಿ(every district) ಎಷ್ಟು ಸಿಬ್ಬಂದಿ ಕೊರತೆಯಿದೆ ಎಂಬ ಕುರಿತ ವರದಿ ಸಂಗ್ರಹಿಸಲಾಗಿದೆ. ಈ ಅಂಕಿಅಂಶಗಳ ಆಧಾರದ ಮೇಲೆ ಆದ್ಯತೆಯ ಕ್ರಮದಲ್ಲಿ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು.
ಒಟ್ಟಾರೆಯಾಗಿ, ಈ ನೇಮಕಾತಿಯ ಮೂಲಕ ರಾಜ್ಯದಲ್ಲಿ ಯುವಕರಿಗೆ ಉದ್ಯೋಗಾವಕಾಶ (Employment) ಕಲ್ಪಿಸುವುದು ಮಾತ್ರವಲ್ಲ, ಸುರಕ್ಷತೆ ವ್ಯವಸ್ಥೆಯಲ್ಲಿಯೂ ದೊಡ್ಡ ಬದಲಾವಣೆಯ ನಿರೀಕ್ಷೆ ಮಾಡಲಾಗುತ್ತಿದೆ. ಪಿಎಸ್‌ಐ ಹಗರಣದ ನಂತರ ನಂಬಿಕೆ ಪುನರ್ ಸ್ಥಾಪಿಸಲು ಸರ್ಕಾರವು ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುವ ಸಾಧ್ಯತೆ ಇದೆ.
ಪೋಲೀಸ್ ಇಲಾಖೆಯಲ್ಲಿ ಹೊಸ ಶಕ್ತಿಯ ಸೇರ್ಪಡೆ ಮೂಲಕ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ (Law and order in the state) ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ನಿರೀಕ್ಷೆ ನಿರ್ಮಾಣವಾಗುತ್ತಿದೆ.
ಇದು ನಿಮ್ಮ ಕನಸು ಸಾಕಾರಗೊಳಿಸುವ ಸಮಯ – ಪದವಿ ಪಡೆದಿರುವ ಪ್ರತಿಯೊಬ್ಬ ಯುವಕರಿಗೂ ಇದು ಬಾಗಿಲು ತೆರೆಯುತ್ತಿರುವ ಅವಕಾಶ.ಮತ್ತು ಇಂತಹ ಉತ್ತಮವಾದ ಮಾಹಿತಿಯನ್ನು ನೀವು ತಿಳಿದಮೇಲೆ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply