ಕೇವಲ 1 ಲಕ್ಷ ಕಟ್ಟಿ ಹೊಸ ಮನೆ ಪಡೆಯಿರಿ, ಸರ್ಕಾರದ ಮತ್ತೊಂದು ಗ್ಯಾರಂಟಿ – ಜಮೀರ್ ಅಹ್ಮದ್ ಖಾನ್

PMAY 2

ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ (Pradhana Mantri Awas Yojana) ಸರ್ವರಿಗೂ ಸೂರು ಅಭಿಯಾನದ ಮೂಲಕ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ (State Government) ನಿರ್ಧರಿಸಿದ್ದು, ಫಲಾನುಭವಿಗಳು (Beneficiaries) ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿರುವ 1.80 ಲಕ್ಷ ಮನೆಗಳಿಗೆ ಫಲಾನುಭವಿಗಳು ಪಾವತಿಸಬೇಕಿದ್ದ 4.5 ಲಕ್ಷ ರೂ.ಗಳಲ್ಲಿ ಕೇವಲ ಒಂದು ಲಕ್ಷ ರೂ. ಭರಿಸಿದರೆ ಸಾಕು ಉಳಿದ 3.5 ಲಕ್ಷ ರು.ಗಳನ್ನು ರಾಜ್ಯ ಸರ್ಕಾರವೇ ಭರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆ 2023

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ. ಆವಾಸ್‌ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.

whatss

ಏನಿದು ರಾಜ್ಯ ಸರ್ಕಾರದ ನಿರ್ಧಾರ ?

ಈ ಹೊಸ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರ ಒಟ್ಟು 500 ಕೋಟಿ ಬಿಡುಗಡೆ ಮಾಡಲು ಒಪ್ಪಿದೆ, ಹಾಗಾಗಿ ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ 1 ಲಕ್ಷ ರೂಪಾಯಿ ಕಟ್ಟಿದರೆ ಸಾಕು  ಉಳಿದ 3.5 ಲಕ್ಷ ರು.ಗಳನ್ನು ರಾಜ್ಯ ಸರ್ಕಾರವೇ ಭರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌, ಈ ಯೋಜನೆಯಡಿ ಮೊದಲ ಹಂತದಲ್ಲಿ 48,796 ಮನೆಗಳನ್ನು ಪೂರ್ಣಗೊಳಿಸಲು 500 ಕೋಟಿ ರೂ. ಬಿಡುಗಡೆ ಮಾಡಲು ಇಂದಿನ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಉಳಿದ 1.30 ಸಾವಿರ ಮನೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಪೂರ್ಣಗೊಳಿಸಲು ಸಂಪುಟ ಸಭೆ ಸಮ್ಮತಿ ನೀಡಿದೆ ಎಂದರು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಹಿಂದಿನ ನಿಯಮ ಏನಿತ್ತು ?

ಈ ಯೋಜನೆಗೆ ಒಟ್ಟು 6,170 ಕೋಟಿ ರೂ. ಬೇಕಾಗಲಿದೆ. ಪ್ರತಿ ಮನೆ ನಿರ್ಮಾಣಕ್ಕೆ 7.5 ಲಕ್ಷ ರೂ. ವೆಚ್ಚವಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದವರಿಗೆ 1.20, ಎಸ್​ಸಿ, ಎಸ್​ಟಿಗಳಿಗೆ 2 ಲಕ್ಷ ರೂ. ಸಹಾಯಧನ ಹಾಗೂ ಕೇಂದ್ರ ಸರ್ಕಾರದಿಂದ ಉಳಿದ ಸಹಾಯಧನ ಸೇರಿ ಒಟ್ಟು 3 ಲಕ್ಷ ರೂ. ಭರಿಸುವುದು. ಉಳಿದ 4.5 ಲಕ್ಷ ರೂ. ಹಣವನ್ನು ಫಲಾನುಭವಿಗಳು ಭರಿಸಬೇಕೆಂಬ ನಿಯಮ ಇತ್ತು. ಆದರೆ, ಈ ಹಣವನ್ನು ಬಹುತೇಕ ಅರ್ಜಿದಾರರು ಭರಿಸಲಾಗಿಲ್ಲ. ಹಾಗಾಗಿ ಇದೀಗ ಸರ್ಕಾರ ಫಲಾನುಭವಿ ತಲಾ ಕೇವಲ 1 ಲಕ್ಷ ರೂ. ಪಾವತಿಸಿದರೆ ಸಾಕು ಎಂದು ತೀರ್ಮಾನಿಸಲಾಗಿದೆ. ಇದರಿಂದ ಫಲಾನುಭವಿಗಳಿಂದ 480 ಕೋಟಿ ರೂ. ಬರಲಿದೆ. ಉಳಿದ 4932 ಕೋಟಿ ರೂ.ಗಳನ್ನು ಸರ್ಕಾರವೇ ಬರಿಸಲಿದೆ ಎಂದು ಜಮೀರ್​ ಮಾಹಿತಿ ನೀಡಿದರು.

ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆ ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು :
https://pmay-urban.gov.in/

ಈ ಮೇಲೆ ನೀಡಿರುವ ವೆಬ್ ಸೈಟನ್ನು ಬಳಸಿಕೊಂಡು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ನೀವು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ ಅಂದರೆ ಈ ಮೇಲೆ ಕೊಟ್ಟಿರುವ ಲಿಂಕ್ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸಿ

ಹಂತ: 1 – PMAY ವೆಬ್‌ಸೈಟ್ pmaymis.gov.in ಗೆ ಲಾಗಿನ್ ಮಾಡಿ.
ಹಂತ: 2 – ‘ ನಾಗರಿಕರ ಮೌಲ್ಯಮಾಪನ ‘ ಆಯ್ಕೆಯನ್ನು ಆರಿಸಿ ಮತ್ತು ಅನ್ವಯಿಸುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ: 3 – ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಿ.
ಹಂತ: 4 – ಇದು ನಿಮ್ಮನ್ನು ಅಪ್ಲಿಕೇಶನ್ ಪುಟಕ್ಕೆ ಮರುನಿರ್ದೇಶಿಸುತ್ತದೆ, ಅಲ್ಲಿ ನೀವು ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಬೇಕಾಗುತ್ತದೆ.
ಹಂತ: 5 – ಭರ್ತಿ ಮಾಡಬೇಕಾದ ವಿವರಗಳು ಹೆಸರು, ಸಂಪರ್ಕ ಸಂಖ್ಯೆ, ಇತರ ವೈಯಕ್ತಿಕ ವಿವರಗಳು, ಬ್ಯಾಂಕ್ ಖಾತೆ ಮತ್ತು ಆದಾಯದ ವಿವರಗಳನ್ನು ಒಳಗೊಂಡಿರುತ್ತವೆ
ಹಂತ: 6 – ಇದನ್ನು ಮಾಡಿದ ನಂತರ, ‘ಉಳಿಸು’ ಆಯ್ಕೆಯನ್ನು ಆರಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ.
ಹಂತ: 7 – ನಂತರ, ‘ ಉಳಿಸು ‘ ಬಟನ್ ಮೇಲೆ ಕ್ಲಿಕ್ ಮಾಡಿ. ಅಪ್ಲಿಕೇಶನ್ ಈಗ ಪೂರ್ಣಗೊಂಡಿದೆ ಮತ್ತು ಈ ಹಂತದಲ್ಲಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!