ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 30000/- ರೂಪಾಯಿ ಪ್ರೋತ್ಸಾಹ ಧನ ನೇರವಾಗಿ ಬ್ಯಾಂಕ್ ಖಾತೆಗೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳು ಪ್ರೈಸ್ ಮನಿಯನ್ನು ಪಡೆದುಕೊಳ್ಳುವ ವಿಧಾನದ ಬಗ್ಗೆ ತಿಳಿಸಿಕೊಡುತ್ತೇವೆ. ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಪ್ರೈಜ್ ಮನಿ ದೊರೆಯಲಿದೆ . ಹಾಗಾದರೆ, ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ಬೇಕಾಗುವ ದಾಖಲೆ ಪ್ರಮಾಣ ಪತ್ರಗಳು ಯಾವುವು?, ಯಾರು ಯಾರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರು?, ಈ ವಿದ್ಯಾರ್ಥಿ ವೇತನಕ್ಕೆ  ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡುತ್ತೇವೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ರೋತ್ಸಾಹ ಧನ | ಬಹುಮಾನ ಹಣ( Prize money ) 2023:

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿನ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವರ್ಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ.  ಹಾಗಾದರೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳುವುದು ಸೂಕ್ತ.

Untitled 1 scaled

ವಿದ್ಯಾರ್ಥಿ ವೇತನದ ಮಾನದಂಡಗಳು,

ವಿಶೇಷ ಸೂಚನೆಗಳು ಮತ್ತು ಈ ವಿದ್ಯಾರ್ಥಿವೇತನದ ಅರ್ಜಿಯನ್ನು ಸಲ್ಲಿಸಲು ತಾವು ಅರ್ಹರು ಎಂಬ ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ಆರ್ಥಿಕವಾಗಿ ದುರ್ಬಲ ಕುಟುಂಬದ ವಿದ್ಯಾರ್ಥಿಗಳನ್ನು ಬೆಂಬಲಿಸಲು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ.  ಅಂತಹ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ 10,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ : ಈಗಲೇ ಅರ್ಜಿ ಸಲ್ಲಿಸಿ

ಈ ಪ್ರೋತ್ಸಾಹ ಧನ ಅಥವಾ ಬಹುಮಾನ ಹಣದ ವಿವರ :

  1. ವಿದ್ಯಾರ್ಥಿ ವೇತನದ ಹೆಸರು :- ಪ್ರೈಜ್ ಮನಿ
  2. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :- 28- ಫೆಬ್ರುವರಿ-2023.
  3. ವಿದ್ಯಾರ್ಥಿ ವೇತನದ  ಮೊತ್ತ :- 25000-35000/-

ಅರ್ಜಿ ಸಲ್ಲಿಸುವ ವಿಧಾನ :- ಆನ್ಲೈನ್ ಮೂಲಕ

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ವರ್ಗಗಳಿಗೆ ಸೇರಿದವರಾಗಿರಬೇಕು.
  2. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು.
  3. 2021 ನೇ ಸಾಲಿನ ವ್ಯಾಸಂಗದಲ್ಲಿ ಪ್ರಥಮ ಬಾರಿಗೆ ಹಾಗೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣತೆಯನ್ನು ಹೊಂದಿರಬೇಕು.

app download scaled

ಯಾವ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ?:

  1. ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ :  ₹20,000/- ನೀಡಲಾಗುವುದು.
  2. ಪದವಿ ವಿದ್ಯಾರ್ಥಿಗಳಿಗೆ : ₹25,000/- ನೀಡಲಾಗುವುದು.
  3. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ :  ₹30,000/- ನೀಡಲಾಗುವುದು.
  4. ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ : ₹35,000/- ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1.  ಆಧಾರ್ ಕಾರ್ಡ್.
  2. ಬ್ಯಾಂಕ್ ಪಾಸ್ ಬುಕ್.
  3. ವಿದ್ಯಾರ್ಥಿಗಳ ಇತ್ತೀಚಿನ 2 ಫೋಟೋ
  4. ಹಿಂದಿನ ವರ್ಷದ ಅಂಕಪಟ್ಟಿ.
  5. ಜಾತಿ ಮತ್ತು ಆದಾಯ ದೃಢೀಕರಣ ಪತ್ರ

ವಿಶೇಷ ಸೂಚನೆ:
ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೆಂದರೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಶ್ರೇಣಿ ಆಧಾರದ ಮೇಲೆ ವಿದ್ಯಾರ್ಥಿ ವೇತನವು ನಿಗದಿಯಾಗಿರುತ್ತದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ:

ಹಂತ 1: ವಿದ್ಯಾರ್ಥಿಗಳು ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ಮುಖಪುಟದಲ್ಲಿ ಮೆಟ್ರಿಕ್ ನಂತರದ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ, ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

telee

ಹಂತ 3: ಮುಂದುವರೆದು ಆನ್‌ಲೈನ್‌ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ.

ಹಂತ 4: ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ಹಂತ 5: ಕೊನೆಯದಾಗಿ, ಅರ್ಜಿಯನ್ನು ಸಲ್ಲಿಸಲು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಸೂಚನೆ :- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಇಲಾಖೆಯು ಸೂಚಿಸಿದೆ.

ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕ:
ಈಗಾಗಲೇ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸುವಿಕೆಯ ಪ್ರಕ್ರಿಯೆ ಆರಂಭಗೊಂಡಿದ್ದು

28- ಫೆಬ್ರುವರಿ-2023 ಕೊನೆಯ ದಿನಾಂಕ ವಾಗಿರುತ್ತದೆ.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಪ್ರೋತ್ಸಾಹ ಧನದಿಂದ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡು ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಸಹಾಯಕಾರಿಯಾಗಿದೆ. ಆದ್ದರಿಂದ ಈ ವಿದ್ಯಾರ್ಥಿ ವೇತನದ ಸೌಲಭ್ಯವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ . ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ಹಾಗೂ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

6 thoughts on “ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 30000/- ರೂಪಾಯಿ ಪ್ರೋತ್ಸಾಹ ಧನ ನೇರವಾಗಿ ಬ್ಯಾಂಕ್ ಖಾತೆಗೆ

Leave a Reply

Your email address will not be published. Required fields are marked *