ಬೈಕ್ ಟ್ಯಾಕ್ಸಿ ನಿಷೇಧದ ವಿರುದ್ಧ ಆಕ್ರೋಶದ ಮೆರವಣಿಗೆ: ಜೀವನೋಪಾಯ ಕಳೆದುಕೊಂಡು ಪ್ರತಿಭಟನೆಗೆ ಒಗ್ಗಟ್ಟಾದ ಸಾವಿರಾರು ಸವಾರರು
ಕರ್ನಾಟಕದಲ್ಲಿ ಇತ್ತೀಚೆಗೆ ಜಾರಿಗೆ ಬಂದಿರುವ ಬೈಕ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧವು ಸಾವಿರಾರು ಕುಟುಂಬಗಳ ಜೀವನಕ್ಕೆ ಹೊಡೆತ ನೀಡಿದ್ದು, ಇದನ್ನು ವಿರೋಧಿಸಿ ರಾಜ್ಯದ ವಿವಿಧೆಡೆಗಳಿಂದ ಬಂದ 5,000 ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸವಾರರು ಶನಿವಾರ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಶಾಂತಿಯುತ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಜೀವನೋಪಾಯ ಕಳೆದುಕೊಂಡ ಜನತೆ, ಸರ್ಕಾರದಿಂದ ಸ್ಪಷ್ಟ ನಿಯಂತ್ರಣ ನೀತಿ ರೂಪಿಸಿ ನಿಷೇಧವನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇನ್ನು, ಈ ಮೆರವಣಿಗೆಯು ವಿಧಾನಸೌಧದವರೆಗೆ ಸಾಗಿದ್ದು, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಹಾಗೂ ಕನಕಪುರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಲವು ಸಾವಾರರು ಹೋರಾಟದಲ್ಲಿ ಪಾಲ್ಗೊಂಡಿದ್ದರು. “ಇದು ಕೇವಲ ಉದ್ಯೋಗವಲ್ಲ, ಬದಲಾಗಿ ಬದುಕು ನಡೆಸುವ ಹಕ್ಕಿಗೆ ಹೋರಾಟ,” ಎಂದು ಪ್ರತಿಭಟನಾಕಾರರು ಭಾವುಕರಾಗಿ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವರು ತಮ್ಮ ದಿನನಿತ್ಯದ ಸಂಕಷ್ಟಗಳನ್ನು ಹಂಚಿಕೊಂಡಿದ್ದಾರೆ:
ನಿಷೇಧಕ್ಕೂ ಮುನ್ನ ನಾವು ಸರಾಸರಿ ಆದಾಯದಿಂದ ಕುಟುಂಬದ ಪೋಷಣೆಗೆ ಸಾಕಾಗುವಷ್ಟು ಸಂಪಾದಿಸುತ್ತಿದ್ದೆವು. ಈಗ ಆ ಆದಾಯವಿಲ್ಲದೆ ಒಪ್ಪತ್ತಿನ ಊಟಕ್ಕೂ ಕಷ್ಟವಾಗಿದೆ. ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಬದುಕು ನಿಷೇಧದಿಂದ ಸಂಪೂರ್ಣ ಹಾಳಾಗಿದೆ,” ಎಂದು ಸವಾರರು ತಮ್ಮ ಅಳಲು ತೊಂಡಿಕೊಂಡಿದ್ದಾರೆ.
ಅದರ ಜೊತೆಗೆ, ಕರ್ನಾಟಕದ 6 ಲಕ್ಷಕ್ಕೂ ಹೆಚ್ಚು ಜನರ ಬದುಕಿಗೆ ಬೈಕ್ ಟ್ಯಾಕ್ಸಿ ನೇರವಾಗಿತ್ತು. ಆದರೆ ಇದೀಗ ಈ ನಿರ್ಧಾರ ತೀವ್ರ ಆರ್ಥಿಕ ಹೊಡೆತ ನೀಡುತ್ತಿದ್ದು, ಅಸೋಸಿಯೇಷನ್‌ಗಳು ಹಾಗೂ ಸಂಬಂಧಿತ ಸಂಘಟನೆಗಳು ನಿಷೇಧವನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸುತ್ತಿವೆ.
ಸರ್ಕಾರಕ್ಕೆ ಮನವಿ ಸಲ್ಲಿಸಿದ ತಂಡ:
ಈ ಹಿನ್ನೆಲೆಯಲ್ಲಿ, ಬೈಕ್ ಟ್ಯಾಕ್ಸಿ ಅಸೋಸಿಯೇಷನ್‌ನ 110 ಮಂದಿ ಸವಾರರ ತಂಡವು ಗುರುವಾರ ಸಾರಿಗೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ, ನಿಷೇಧವನ್ನು ಹಿಂಪಡೆಯುವ ಜೊತೆಗೆ ಈ ಸೇವೆಗೆ ಕಾನೂನು ಮಾನ್ಯತೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ತೀರ್ಪು ಮತ್ತು ನಿಷೇಧದ ಹಿನ್ನೆಲೆ:
ರಾಜ್ಯ ಸರ್ಕಾರವು ರಾಪಿಡೋ, ಓಲಾ, ಮತ್ತು ಉಬರ್ ಮೋಟೋ ಸೇರಿದಂತೆ ಹಲವಾರು ಬೈಕ್ ಟ್ಯಾಕ್ಸಿ ಪ್ಲಾಟ್‌ಫಾರ್ಮ್‌ಗಳ ಕಾರ್ಯಾಚರಣೆಯನ್ನು ಸ್ಪಷ್ಟ ನಿಯಂತ್ರಣ ವ್ಯವಸ್ಥೆಯ ಕೊರತೆಯನ್ನು ಉಲ್ಲೇಖಿಸಿ ಕಾನೂನುಬಾಹಿರವೆಂದು ಘೋಷಿಸಿತ್ತು. ಈ ಕುರಿತು ಉಂಟಾದ ನ್ಯಾಯಾಂಗ ವಿವಾದದ ನಂತರ, ಕರ್ನಾಟಕ ಹೈಕೋರ್ಟ್ ಏಪ್ರಿಲ್‌ನಲ್ಲಿ ಸರ್ಕಾರ ನಿರ್ಧಾರವನ್ನು ಎತ್ತಿಹಿಡಿದಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಸಲ್ಲಿಸಲಾದ ಮನವಿಯನ್ನು ಜೂನ್ 16ರಂದು ತಿರಸ್ಕರಿಸಿದ ನಂತರ, ನಿಷೇಧ ಅಧಿಕೃತವಾಗಿ ಜಾರಿಗೆ ಬಂದಿದೆ.
ಒಟ್ಟಾರೆಯಾಗಿ, ಈ ನಿರ್ಧಾರದ ವಿರುದ್ಧ ಸಾರ್ವಜನಿಕ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಸ್ಪಷ್ಟ ನೀತಿ ರೂಪಿಸಿ, ಸಂಕಷ್ಟದಲ್ಲಿರುವ ಸಾವಿರಾರು ಸವಾರರ ಬದುಕನ್ನು ಉಳಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಎಲ್ಲೆಡೆಯಿಂದಲೂ ಕೇಳಿಬರುತ್ತಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




