Property Tax : ಹೊಸ ಆಸ್ತಿ ತೆರಿಗೆ ಪದ್ದತಿ ಪ್ರಾರಂಭ – ಹೊಲ, ಸ್ವಂತ ಮನೆ ಇದ್ದವರು ತಿಳಿದುಕೊಳ್ಳಿ

new property tax system

ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಹೊಸ ಆಸ್ತಿ ತೆರಿಗೆ ಪದ್ಧತಿ(New property tax system) ಜಾರಿಗೆ ಬಂದಿದೆ. ಈ ಪದ್ಧತಿಯಡಿ, ಮನೆ ಕಟ್ಟುವವರಿಗೆ ‘ನಂಬಿಕೆ ರಕ್ಷೆ’ ಯೋಜನೆಯಡಿ ಕೆಲವು ರಿಯಾಯಿತಿಗಳನ್ನು ನೀಡಲಾಗಿದೆ. ಈ ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವ್ಯವಸ್ಥೆ ಬಗ್ಗೆ ತಿಳಿದುಕೊಳ್ಳುವ ಪ್ರಮುಖ ಮಾಹಿತಿಗಳನ್ನು ಈ ವರದಿಯಲ್ಲಿ ನೀಡಲಾಗಿದೆ. ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Deputy Chief Minister D.K.Sivakumar) ಅವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಅನುಕೂಲವಾಗುವಂತೆ ‘ನಂಬಿಕೆ ರಕ್ಷೆ(Nambike Raksha)’ ಯೋಜನೆಯನ್ನು ಘೋಷಿಸಿದರು. ಪತ್ರಿಕಾಗೋಷ್ಠಿಯ ನಂತರ, ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತರುತ್ತಿರುವ ಕ್ರಾಂತಿಕಾರಿ ಕ್ರಮಗಳನ್ನು ಎತ್ತಿ ತೋರಿಸಿದರು, ಮನೆಗಳನ್ನು ನಿರ್ಮಿಸುವವರಿಗೆ ಗಣನೀಯ ಸುಧಾರಣೆಗಳನ್ನು ಖಾತ್ರಿಪಡಿಸಿದರು. ಹೆಚ್ಚುವರಿಯಾಗಿ, ಅವರು ಹೊಸ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಿದರು.

ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿಗೆ:

ಬೆಂಗಳೂರಿನಲ್ಲಿ 50×80 ಅಡಿ ಅಳತೆಯ ಕಟ್ಟಡಗಳ ಕಟ್ಟಡ ನಕ್ಷೆ ಅನುಮೋದನೆಗಾಗಿ ಸ್ವಯಂಚಾಲಿತಗೊಳಿಸಲಾಗುತ್ತಿದೆ. ಈ ಹೊಸ ವ್ಯವಸ್ಥೆಯಡಿ, ಅರ್ಜಿದಾರರು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅನುಮೋದನೆಯನ್ನು ಇಂಜಿನಿಯರ್‌(engineers)ಗಳಿಂದ ಪಡೆಯಬಹುದು ಎಂದು ಅವರು ಹೇಳಿದರು. ಈ ಯೋಜನೆಯು ಮೊದಲ ಹಂತದಲ್ಲಿ ರಾಜರಾಜೇಶ್ವರಿ ಮತ್ತು ದಾಸರಹಳ್ಳಿ ವಲಯಗಳಲ್ಲಿ ಪ್ರಾರಂಭವಾಗಲಿದೆ ಮತ್ತು ನಂತರ ಬೆಂಗಳೂರಿನ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುವುದು.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ನಕ್ಷೆ ಮಂಜೂರಾತಿ ಒಂದು ಕ್ರಾಂತಿಕಾರಕ ವ್ಯವಸ್ಥೆಯಾದ ʼನಂಬಿಕೆ ನಕ್ಷೆʼಯನ್ನು ವಿಧಾನಸೌಧದಲ್ಲಿ ಇಂದು ಉದ್ಘಾಟಿಸಿದೆ. ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ಬರುತ್ತಿದ್ದು 50×80 ಅಡಿವರೆಗಿನ 4 ಯೂನಿಟ್‌(4 units)ವರೆಗಿನ ಮನೆಗಳ ನಕ್ಷೆಯನ್ನು ಮನೆ ಬಾಗಿಲಿಗೆ ತಲುಪಿಸುವ ಮಹತ್ತರ ವ್ಯವಸ್ಥೆ ಇದಾಗಿದೆ.

ಮನೆ ಕಟ್ಟಲು ಬಯಸುವವರು ಆನ್‌ಲೈನ್‌ ಮೂಲಕ ತಮ್ಮ ದಾಖಲೆಗಳನ್ನು ಸಲ್ಲಿಸಿ ಸರ್ಕಾರವೇ ನಿಗದಿಪಡಿಸಿರುವ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಿದರೆ, ಎಂ ಪ್ಯಾನಲ್‌ ಮೂಲಕ ನೋಂದಣಿಯಾದ ಎಂಜಿನಿಯರ್‌ ದಾಖಲೆಗಳನ್ನು ಪರಿಶೀಲಿಸಿ ನಕ್ಷೆಯನ್ನು ಅರ್ಜಿದಾರರ ಮನೆಬಾಗಿಲಿಗೆ ತಲುಪಿಸಲಿದ್ದಾರೆ. ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಇದು ಜಾರಿಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡಿಎ ವ್ಯಾಪ್ತಿಗೂ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು” ಎಂದು ಉಪಮುಖ್ಯಮಂತ್ರಿ X ನಲ್ಲಿ ಟ್ವೀಟ್ ಮಾಡಿದ್ದಾರೆ.

whatss

ಕಟ್ಟಡ ನಕ್ಷೆ ಅನುಮತಿ: ಇನ್ನು ಪಾಲಿಕೆ ಕಚೇರಿ ಅಲೆದಾಡುವ ಅಗತ್ಯವಿಲ್ಲ

ಬೆಂಗಳೂರಿನಲ್ಲಿ ಮನೆ ಕಟ್ಟುವುದು ಈಗ ಹಿಂದೆಗಿಂತ ಸುಲಭವಾಗಿದೆ. ಹೌದು, ಈಗ 50X80 ವಿಸ್ತೀರ್ಣದಲ್ಲಿ ನಿವೇಶನ ಹೊಂದಿರುವವರು ಮತ್ತು 4 ಯುನಿಟ್ ಮನೆ ಕಟ್ಟಿಕೊಳ್ಳುವವರು ಸರ್ಕಾರ ನೋಂದಾಯಿತ ವಾಸ್ತುಶಿಲ್ಪಿ ಅಥವಾ ಇಂಜಿನಿಯರ್ ಮೂಲಕ ಆನ್‌ಲೈನ್‌ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಕಳೆದ ವರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿತ್ತು , ಈ ಬಾರಿ 10 ಸಾವಿರ ನಕ್ಷೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ಮನೆ ಕಟ್ಟುವ ನಿಮ್ಮ ಕನಸನ್ನು ಈಗ ತ್ವರಿತವಾಗಿ ನನಸಾಗಿಸಬಹುದು.

ಹೊಸ ಆಸ್ತಿ ತೆರಿಗೆ ಪದ್ಧತಿ:

ಡಿಕೆ ಶಿವಕುಮಾರ್ ಅವರ ಪ್ರಕಾರ, 2008 ರಲ್ಲಿ ಜಾರಿಗೆ ತಂದಿರುವ ಆಸ್ತಿ ತೆರಿಗೆ ಪದ್ಧತಿಯನ್ನು ಸರಳಗೊಳಿಸಲಾಗಿದೆ ಮತ್ತು ಹೊಸ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ . ಈ ಹೊಸ ಪದ್ಧತಿಯಲ್ಲಿ ಏನೆಲ್ಲಾ ಬದಲಾವಣೆಗಳಿವೆ ಎಂದು ತಿಳಿಯೋಣ

2008ರಲ್ಲಿ ಜಾರಿ ಮಾಡಲಾಗಿದ್ದ ಆಸ್ತಿ ತೆರಿಗೆ ಪದ್ಧತಿಯಲ್ಲಿ ಆಸ್ತಿಗಳನ್ನು ಒಟ್ಟು 18 ವರ್ಗೀಕರಣ ಮಾಡಲಾಗಿದ್ದು, ಇದರಿಂದ ತೆರಿಗೆ ಪಾವತಿಯಲ್ಲಿ ಸಮಸ್ಯೆ ಸೃಷ್ಟಿಯಾಗುತಿತ್ತು. ಆದರೆ ಇದೀಗ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಿ 6 ವರ್ಗೀಕರಣಗಳನ್ನಾಗಿ(6 classifications) ಮಾಡಲಾಗಿದೆ. ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ(Commercial), ಕೈಗಾರಿಕಾ(Industrial), ಸ್ಟಾರ್ ಹೊಟೇಲ್(Star Hotel), ವಿನಾಯಿತಿ ನೀಡಲಾದ ಹಾಗೂ ಸಂಪೂರ್ಣ ಖಾಲಿ ಜಮೀನುಗಳು ಎಂದು ವರ್ಗೀಕರಣ ಮಾಡಲಾಗಿದೆ. ಈ ಹೊಸ ಆಸ್ತಿ ತೆರಿಗೆ ಪದ್ಧತಿ ಇದೇ ಏಪ್ರಿಲ್‌ನಿಂದ ಜಾರಿಗೆ ತರಬೇಕು ಎಂದು ಹೇಳಲಾಗಿದೆ.

ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, BBMP ) ಖಾತಾ ವಿತರಣೆ:

ಈಗ ನಿಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿ, ಖಾತಾ ಪಡೆಯಬಹುದು. ಹೌದು, ಆಸ್ತಿ ತೆರಿಗೆ ಪಾವತಿಗೆ ತಮ್ಮನ್ನು ತಾವು ಘೋಷಣೆ ಮಾಡಿಕೊಳ್ಳದ ನಾಗರಿಕರು ಈಗ ತಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಇಂತಹವರಿಗೆ ಆಸ್ತಿ ತೆರಿಗೆ ಸಂಖ್ಯೆ ಮತ್ತು ಬಿಬಿಎಂಪಿ ಖಾತಾ ನೀಡಲಾಗುವುದು. ಬಿಬಿಎಂಪಿಯಿಂದ ದಾಖಲೆ ಸರಿಯಾಗಿ ಇರುವರಿಗೆ ಎ ಖಾತಾ ನೀಡಲಾಗುತ್ತದೆ. ಕನ್ವರ್ಷನ್ ಮಾಡಿಕೊಳ್ಳದೇ, ಯೋಜನೆ ಇಲ್ಲದವರಿಗೆ ಬಿ ಖಾತಾ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!