WhatsApp Image 2024 02 14 at 6.24.38 AM

Railway Jobs : ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ, ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Categories:
WhatsApp Group Telegram Group

ಈ ವರದಿಯಲ್ಲಿ ಭಾರತೀಯ ರೈಲ್ವೆ (RRB) ಇಲಾಖೆಯಲ್ಲಿ ಇರುವ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ನೇಮಕಾತಿ (Recruitment) 2024:

ರೈಲ್ವೆ ನೇಮಕಾತಿ ಮಂಡಳಿ (RRB) 9000 ಟೆಕ್ನಿಷಿಯನ್ (Technician) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಭಾರತದ ಎಲ್ಲಾ ರೈಲ್ವೆ ವಲಯಗಳಲ್ಲಿ ನಡೆಯಲಿದೆ. RRB ತಂತ್ರಜ್ಞರ ನೇಮಕಾತಿ 2024 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ, ಪರೀಕ್ಷೆ ದಿನಾಂಕಗಳು ಮತ್ತು ಇತರ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಲಾಗುವುದು.

ನೇಮಕಾತಿ ಸಂಸ್ಥೆ : ಭಾರತೀಯ ರೈಲ್ವೆ ಇಲಾಖೆ, ರೈಲ್ವೆ ನೇಮಕಾತಿ ಮಂಡಳಿ(Railway Recruitment Board, RRB)

ಪೋಸ್ಟ್ ಹೆಸರು : ಟೆಕ್ನಿಷಿಯನ್( Technician)

ಒಟ್ಟು ಹುದ್ದೆಗಳ ಸಂಖ್ಯೆ: 9000

ಉದ್ಯೋಗ ಸ್ಥಳ: ಭಾರತದ ಎಲ್ಲಾ ರೈಲ್ವೆ ವಲಯಗಳಲ್ಲಿ

ಹುದ್ದೆಗಳ ವಿವರ :

Technician Gr. I Signal – 1100

Technician Gr. III – 7900

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ ನಂತರ ಐಟಿಐ(ITI) ಶಿಕ್ಷಣ ಪಡೆದು, ಎನ್‌ಸಿವಿಟಿ(NCVT)ಅಥವಾ ಎಸ್‌ಸಿವಿಟಿ(SCTV) ಪ್ರಮಾಣ ಪತ್ರ ಪಡೆದವರು, ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮ ಇನ್‌ ಇಂಜಿನಿಯರಿಂಗ್‌ ಪದವಿ ಗಳಿಸಿದವರು ಮತ್ತು ತಾಂತ್ರಿಕ ವಿಷಯಗಳಲ್ಲಿ ಪದವಿ ಅಥವಾ ಇಂಜಿನಿಯರಿಂಗ್‌ ಪದವಿ ಗಳಿಸಿದವರು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂಲೈ 1 2024 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 36 ವರ್ಷ ಮೀರಿರಬಾರದು.

ಸಂಬಳ ಎಷ್ಟು?

Technician Gr. I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ವೇತನ -29,200/-

Technician Gr. III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ವೇತನ – 19,900/-

ಅರ್ಜಿ ಶುಲ್ಕ :

Gen/OBC /EWS ಅಭ್ಯರ್ಥಿಗಳಿಗೆ – 500 ರೂ. ಗಳು
SC /ST /ESM/ ಮಹಿಳಾ ಅಭ್ಯರ್ಥಿಗಳಿಗೆ- 250 ರೂ. ಗಳು
ಶುಲ್ಕವನ್ನು ಆನ್ಲೈನ್ ಮೂಲಕ ಪವತಿಸಬೇಕು.

ಆಯ್ಕೆ ಪ್ರಕ್ರಿಯೆ :

RRB ನೇಮಕಾತಿ 2023 ಹುದ್ದೆಯ ಅಧಿಸೂಚನೆಯ ಆಯ್ಕೆ ಪ್ರಕ್ರಿಯೆಯು ಈ ಕೆಳಗಿನಂತಿರುತ್ತದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಪಿಇಟಿ(PET)
ಪಿಎಸ್‌ಟಿ(PST)
ವೈದ್ಯಕೀಯ ಪರೀಕ್ಷೆ(Medical Test)
ದಾಖಲೆಗಳ ಪರಿಶೀಲನೆ(Document Verification),

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 9-03-2024
ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ : 08- 04 -2024

ಪ್ರಮುಖ ಲಿಂಕ್’ಗಳು:

ಕಿರು ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: indianrailways.gov.in

ಅರ್ಜಿ ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ಕೇಳಲಾದ ವಿವರಗಳನ್ನು ಭರ್ತಿ ಮಾಡಿ

ಹಂತ 3: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ

ಹಂತ 4: ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories