Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 7ರಿಂದ ಭಾರಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

rain news today

WhatsApp Group Telegram Group

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಈಗ ಕಾಡತೊಡಗಿದೆ. ಹೀಗಾಗಿ ಜನರು ಮಳೆ ಮೋಡಗಳನ್ನು ಹುಡುಕುತ್ತಾ ಆಕಾಶ ನೋಡುವಾಗ ಮಳೆ ಬರುವ ಬಗ್ಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ! ಮೇ 7ರಿಂದ ರಾಜ್ಯದಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ, ಕೊಡಗು, ಮೈಸೂರಿನಲ್ಲಿ ಇಂದು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಗುರುವಾರ ಬೆಂಗಳೂರಿನ ಬಹುತೇಕ ಕಡೆ ಮಳೆಯಾಗಿದೆ. ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ.

ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ವರದಿ ಪ್ರಕಾರ ಮೇ 5ರವರೆಗೆ ಅಂದರೆ ಭಾನುವಾರದವರೆಗೂ ರಾಜ್ಯದಲ್ಲಿ ಉಷ್ಣ ಅಲೆ ಇರಲಿದೆ. ಅದರ ನಡುವೆ ಶುಕ್ರವಾರ ಕೊಡಗು ಮತ್ತು ಮೈಸೂರು ಜಿಲ್ಲೆಯ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಶನಿವಾರ, ಭಾನುವಾರ ಹಾಗೂ ಸೋಮವಾರ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು,ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್​, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ,ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮೇ 8ಕ್ಕೆ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ವಿಜಯನಗರ , ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ ಹಾಗೂ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಎಂದಿನಂತೆ ಒಣ ಹವೆ ಮುಂದುವರೆಯಲಿದೆ ಎಂದು ಐಎಂಡಿ ಹೇಳಿದೆ.

ಮೇ 9ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗಲಿದ್ದರೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ಗುರುವಾರ ಕುಂದಾಪುರ, ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದೆ. ರಾಯಚೂರಿನಲ್ಲಿ 43.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!