Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!

rain alert may6

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು. ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮೇ 11 ರ ವರೆಗೆ ಮಳೆಯ ಮುನ್ಸೂಚನೆಯನ್ನು ಸಹ ಬಿಡುಗಡೆ ಮಾಡಿದೆ. ಮೇ 6 ಇಂದಿನಿಂದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಅತಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಮತ್ತು ಮಿಂಚಿನ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಉಳಿದ ಭಾಗವು ಶುಷ್ಕವಾಗಿರುತ್ತದೆ ಎಂದು ಹೇಳಿದೆ.ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.

Karnataka weather Updates : ಕರ್ನಾಟಕ ಹವಾಮಾನ ವರದಿ

ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ ಮುಂದುವರೆಯಲಿದೆ. ಈಗಾಗಲೇ ದಕ್ಷಿಣ ಒಳನಾಡು ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ. ಆದರೆ, ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಿಲ್ಲ.ಮೇ 6 ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.

 ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮೇ 7ರಿಂದ ಮೇ 10ರವರೆಗೆ ಜೋರಾಗಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೇ 7ರಿಂದ ಐದು ದಿನ, ಉತ್ತರ ಕನ್ನಡದಲ್ಲಿ ಮೇ 10ರಿಂದ ಮೂರು ದಿನ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರಿನಲ್ಲಿ ಮೇ 8ರಿಂದ ಮೇ 10ರವರೆಗೆ ಸಾಧಾರಣ ವರ್ಷಧಾರೆ ಯಾಗಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.

ಮೇ ತಿಂಗಳ ವಾಡಿಕೆ ಮಳೆಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಮೇ ತಿಂಗಳ ಅಂತ್ಯಕ್ಕೂ ಮುನ್ನ ವಾಡಿಕೆ ಮಳೆ ಕನಿಷ್ಠ ಪ್ರಮಾಣದಲ್ಲಾದ್ರೂ ಸುರಿಯುವ ನಿರೀಕ್ಷೆ ಹೊಂದಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ ಮುನ್ಸೂಚನೆ ಇದೆಯಾದರೂ, ಶಾಖದ ಅಲೆಯ ವಾತಾವರಣ ಕಡಿಮೆಯಾಗಿಲ್ಲ. ಕರ್ನಾಟಕದ 18 ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರಂತೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 6 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

  • ಬೆಂಗಳೂರು – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 39)
  • ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
  • ಚಿತ್ರದುರ್ಗ – 28.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
  • ಗದಗ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)
  • ಹೊನ್ನಾವರ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76)
  • ಕಲಬುರಗಿ – 31.5 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 22)
  • ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)
  • ಕಾರವಾರ – 36.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59 )
2024 ರಲ್ಲಿ ಉತ್ತಮ ಮಳೆ

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!