rain news

Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

WhatsApp Group Telegram Group

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ಮೂರು ದಿನಗಳಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಬಿದ್ದಿದ್ದು, ಭೂಮಿ ಕೊಂಚ ಮಟ್ಟಿಗೆ ತಂಪಾಗಿದೆ. ಆದ್ರೂ ಈ ಬಿಸಿಲಿನ ತಾಪಕ್ಕೆ ಜನ ಬೇಸತ್ತಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ರಾಜ್ಯದಲ್ಲಿ ಇಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರಿಗೆ ಮಳೆಯ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 50km ವೇಗದಲ್ಲಿ ಗಾಳಿ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿ ಮುಂದಿನ ಏಳು ದಿನಗಳ ನಗರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

ಇದೇ ಹವಾಮಾನ ಮುಂದಿನ ಎರಡು ದಿನ ಮುಂದುವರಿಯಲಿದೆ. ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತ

WhatsApp Group Join Now
Telegram Group Join Now

Popular Categories