mungaru male june 1st

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರು! ಜೂ. 2ರ ನಂತರ ಭಾರಿ ಮಳೆ ಮುನ್ಸೂಚನೆ!

WhatsApp Group Telegram Group

ಈಗಾಗಲೇ ಕೇರಳದಲ್ಲಿ ನೈರುತ್ಯ ಮುಂಗಾರು ಚುರುಕಾಗಿ ಬಾರಿ ಮಳೆ ಯಾಗುತ್ತಿದೆ. ಹಾಗಾಗಿ ಜೀವನ ಎರಡರಿಂದ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ನಿನ್ನಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಮಾರುತಗಳು ಅಬ್ಬರದ ಪ್ರದರ್ಶನ ತೋರುತ್ತಿದ್ದು ಕರ್ನಾಟಕದಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ವರದಿ

ಸದ್ಯ ಮಳೆ ಬ್ರೇಕ್ ನೀಡಿದ್ದು, ಜೂನ್ 2ರ ನಂತರ ಮತ್ತೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮುಂದಿನ ಎರಡು ದಿನ ಮಳೆ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇದೇ ಜೂನ್ 2ರಿಂದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಮುಂಗಾರು ಪ್ರಾರಂಭವಾಗಲಿದ್ದು. ಸದ್ಯಪೂರ್ವ ಮುಂಗಾರು ಮಳೆ ಇಳಿಕೆಯಾಗಿದೆ ಹಾಗಾಗಿ ಇದು ಮುಂಗಾರು ಪ್ರವೇಶಕ್ಕೆ ಮುನ್ಸೂಚನೆಯ ಎಂದು ತಜ್ಞರು ಹೇಳಿದ್ದಾರೆ. ಜೂನ್ & ಜುಲೈಗೆ ಒಳ್ಳೆಯ ಮಳೆಯು ಬೀಳುವ ನಿರೀಕ್ಷೆ ಇರುವುದು ಖುಷಿ ಕೊಡುತ್ತಿದೆ. ಈ ನಿರೀಕ್ಷೆಗೆ ಪೂರಕವಾಗಿ ನಿನ್ನೆ ಅಧಿಕೃತವಾಗಿ ಮುಂಗಾರು ಮಳೆ ಮೋಡಗಳು ಕೇರಳ ರಾಜ್ಯಕ್ಕೆ ಎಂಟ್ರಿಯನ್ನ ಕೊಟ್ಟಿವೆ.

ಭಾರಿ ಮಳೆ ಸಾಧ್ಯತೆ..!

ಕರ್ನಾಟಕದಲ್ಲಿದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್ 1ಕ್ಕೆ ರಾಜ್ಯಕ್ಕೆ ಮುಂಗಾರು  ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. 

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ 30– 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಯ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories