ಹವಾಮಾನ ಇಲಾಖೆಯಿಂದ ಬಂದ ತಾಜಾ ಮಾಹಿತಿಯಂತೆ, ಕರ್ನಾಟಕ ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣವಿರಲಿದೆ. ಈ ಸಮಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯೂ ಉಂಟು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರಲಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ದಿನವಾರು ಮಳೆ ಮುನ್ಸೂಚನೆ:
September 9: ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ.
September 10: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆ. ದಕ್ಷಿಣ ಕರ್ನಾಟಕದ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು.
September 11: ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು. ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ ಮತ್ತು ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.
September 12: ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು. ದಕ್ಷಿಣ ಕರ್ನಾಟಕದ ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು.
September 13 & 14: ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು. ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುਮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು.
ರಾಜ್ಯದ ನಿವಾಸಿಗಳು ಮಳೆಗೆ ಸಂಬಂಧಿಸಿದ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.