ಕರ್ನಾಟಕದಲ್ಲಿ ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಮಳೆಯ ವಿವರ
ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದಾದ್ಯಂತ, ವಿಶೇಷವಾಗಿ ಕರ್ನಾಟಕ, ಕೇರಳ, ಮತ್ತು ತಮಿಳುನಾಡಿನಲ್ಲಿ ನಿರಂತರ ಮಳೆಯಾಗುವ ಸಾಧ್ಯತೆಯಿದೆ. ಈ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್ 16 ರಿಂದ 21 ರವರೆಗೆ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ, ಆದರೆ ಬೆಂಗಳೂರು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಗಾಳಿಯೊಂದಿಗೆ ಮಳೆಯಾಗಲಿದೆ.
ಆಗಸ್ಟ್ 17
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದ್ದು, ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಮತ್ತು ವಿಜಯಪುರದಲ್ಲಿ ಮಧ್ಯಮ ರಿಂದ ಭಾರೀ ಮಳೆಯಾಗಬಹುದು. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಮತ್ತು ರಾಯಚೂರಿನಲ್ಲಿ ಸಾಧಾರಣ ರಿಂದ ಮಧ್ಯಮ ಮಳೆ ಸಂಭವಿಸಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮತ್ತು ಶಿವಮೊಗ್ಗದಲ್ಲಿ ಗಾಳಿಯೊಂದಿಗೆ ಮಳೆಯಾಗಲಿದೆ.
ಆಗಸ್ಟ್ 18-19
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ, ಮತ್ತು ವಿಜಯಪುರದಲ್ಲಿ ಮಧ್ಯಮ ರಿಂದ ಭಾರೀ ಮಳೆಯ ಮುನ್ಸೂಚನೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನದಲ್ಲಿ ಗಾಳಿಯೊಂದಿಗೆ ಮಳೆಯಾಗಲಿದೆ. ಇತರ ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮತ್ತು ಮಂಡ್ಯದಲ್ಲಿ ಸಾಧಾರಣ ಮಳೆಯ ಸಾಧ್ಯತೆಯಿದೆ.
ಆಗಸ್ಟ್ 20-21
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಮತ್ತು ರಾಯಚೂರಿನಲ್ಲಿ ಸಾಧಾರಣ ರಿಂದ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮ ಗಳೂರು, ಮತ್ತು ಇತರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯ ಮುನ್ಸೂಚನೆಯಿದೆ.
ಆರೋಗ್ಯ ಮತ್ತು ಮುಂಜಾಗ್ರತಾ ಕ್ರಮಗಳು
ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ, ಸಂಚಾರದಲ್ಲಿ ಅಡಚಣೆಗಳು, ಮತ್ತು ಬೆಟ್ಟಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಅಪಾಯವಿದೆ. ರೈತರು ತಮ್ಮ ಬೆಳೆಗಳ ರಕ್ಷಣೆಗೆ ಮುಂಜಾಗ್ರತೆ ವಹಿಸಬೇಕು, ಮತ್ತು ಸ್ಥಳೀಯ ಆಡಳಿತವು ಮೂಲಸೌಕರ್ಯದ ಹಾನಿಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಜನರು ತಮ್ಮ ಆರೋಗ್ಯದ ರಕ್ಷಣೆಗಾಗಿ ಬೆಚ್ಚಗಿನ ಬಟ್ಟೆ ಧರಿಸಿ, ಕುದಿಸಿದ ನೀರನ್ನು ಕುಡಿಯಲು, ಮತ್ತು ಸೋಂಕಿನ ಕಾಯಿಲೆಗಳಿಂದ ರಕ್ಷಣೆಗಾಗಿ ಬಿಸಿ ಆಹಾರ ಸೇವಿಸಲು ತಜ್ಞರು ಶಿಫಾರಸು ಮಾಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.