WhatsApp Image 2025 06 12 at 7.14.18 PM scaled

Rain Alert : ಒಂದು ವಾರ ಈ ಭಾಗಗಳಲ್ಲಿ ರಣಭೀಕರ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ.!

WhatsApp Group Telegram Group

ಭಾರತೀಯ ಹವಾಮಾನ ಇಲಾಖೆಯ (IMD) ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ತೀವ್ರವಾಗಿ ಸುರಿಯಲಿದೆ. ಮುಂದಿನ ಒಂದು ವಾರದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಭಾರತದಲ್ಲಿ, ವಿಶೇಷವಾಗಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಉಷ್ಣಾಂಶ ದಾಖಲಾಗುತ್ತಿದೆ. ಇಂದು (ಜೂನ್ 12) ಕೆಲವೆಡೆ 40.9°C ರಿಂದ 45°C ವರೆಗೆ ತಾಪಮಾನ ಏರಿಕೆಯೊಂದಿಗೆ ಕೆಂಪು ಎಚ್ಚರಿಕೆ (Red Alert) ಜಾರಿಗೊಳಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಭಾರತದಲ್ಲಿ, ತೆಲಂಗಾಣದ 10 ಜಿಲ್ಲೆಗಳಾದ ಆದಿಲಾಬಾದ್, ಕುಮಾರಂ ಭೀಮ್ ಆಸಿಫಾಬಾದ್, ಜಗ್ತಿಯಾಲ್, ವಿಕಾರಾಬಾದ್, ಮಹಬೂಬ್ನಗರ, ನಾಗರ್ ಕರ್ನೂಲ್, ನಾರಾಯಣಪೇಟ್, ವನಪರ್ತಿ, ಸಂಗಾರೆಡ್ಡಿ ಮತ್ತು ಜೋಗುಲಾಂಬ ಗದ್ವಾಲ್‌ಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆ ಸುರಿಯಲಿದೆ. ಕರ್ನಾಟಕದಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇಂದಿನಿಂದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ದಾವಣಗೆರೆ, ಹಾಸನ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ.

ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಗೋವಾ ರಾಜ್ಯಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ. ಜೂನ್ 12-15ರವರೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ, ಜೂನ್ 12-17ರವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ, ಜೂನ್ 16ರವರೆಗೆ ಕೇರಳ ಮತ್ತು ಲಕ್ಷದ್ವೀಪದಲ್ಲಿ ಮತ್ತು ಜೂನ್ 17ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಬಹುದು. ಹವಾಮಾನ ಇಲಾಖೆಯು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories