Rain Alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

rain alert today may 10

ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಕಂಗೆಟ್ಟಿದ್ದ ಜನ ನಿನ್ನೆ ಮಳೆರಾಯನ ಆಗಮನದಿಂದ ನಿಟ್ಟುಸಿರು ಬಿಡುವಂತಾಗಿದೆ. ನಿನ್ನೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬಿದ್ದಿದೆ. ಈ ಸಮಯದಲ್ಲೇ ಮುಂದಿನ 2 ವಾರ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆ ಸೇರಿದಂತೆ ರಾಜ್ಯದ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಿದೆ .

ಮೇ. 10 ರಿಂದ ಮಳೆ ಪ್ರಮಾಣ ಇನ್ನಷ್ಟು ಜಿಲ್ಲೆಗಳಿಗೆ ವ್ಯಾಪಿಸಲಿದ್ದು, ಮೇ13 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯ ನೀಡಿದ ಹವಾಮಾನ ಇಲಾಖೆ 

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮೇ 9 : ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 10: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮೇ 11 &12: ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವೆಡೆ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 13ರಿಂದ 15ರವರಗೆ: ರಾಜ್ಯದ ಕೆಲ ಭಾಗಗಳಲ್ಲಿ ಕನಿಷ್ಠ 50 ಮಿ.ಮೀ.ನಿಂದ ಗರಿಷ್ಠ 70 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!