Karnataka Rain – ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಮಳೆ ಮುನ್ಸೂಚನೆ, ಹವಾಮಾನ ಇಲಾಖೆ ಸೂಚನೆ ಇಲ್ಲಿದೆ

rainn 1

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗು ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ ಎಂದುಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ ?

ಇಂದಿನಿಂದ ನವೆಂಬರ್ 22ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ನ.19 ರಿಂದ 22 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್‌ ನಿಂದ ನವೆಂಬರ್‌ ಮೊದಲ ವಾರದವರೆಗಿನ ಮಳೆ ಮಾಪನದ ಪ್ರಕಾರ ಇಡೀ ರಾಜ್ಯದಲ್ಲಿ ಮೈಸೂರು ಜಿಲ್ಲೆ ಬಿಟ್ಟರೆ ಎಲ್ಲೂ ವಾಡಿಕೆಗಿಂಥ ಹೆಚ್ಚು ಮಳೆಯಾಗಿಲ್ಲ. ಬೆಂಗಳೂರು ನಗರ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮಂಡ್ಯ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿತ್ತು. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್‌ನಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯೇ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

ಇದನ್ನೂ ಓದಿ – ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದೊರಿಗೆ ಗುಡ್ ನ್ಯೂಸ್, ಶೀಘ್ರದಲ್ಲೆ ಕಾರ್ಡ್ ವಿತರಣೆ, ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ –  Free LPG – ಇನ್ನೂ ಮುಂದೆ  ಬಿಪಿಎಲ್‌ ಕಾರ್ಡ್‌ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!