Rain News – ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಜ.10 ರವರೆಗೆ ಭಾರಿ ಮಳೆ ಸಾಧ್ಯತೆ. ವರ್ಷದ ಮೊದಲ ಮಳೆಯ ಆಗಮನ.!

rain alert 6

WhatsApp Group Telegram Group

ರಾಜ್ಯದಲ್ಲಿ ಹೊಸ ವರ್ಷಕ್ಕೆ ವರುಣನ ಆಗಮನವಾಗಿದೆ, ಹೌದು 2024 ಹೊಸ ವರ್ಷದ ಮೊದಲ ಮಳೆ ಕರಾವಳಿ ಜಿಲ್ಲೆಗಳಲ್ಲಿ ಆಗಿದೆ. ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಶೀತದ ಗಾಳಿ ಹೆಚ್ಚಾಗಿದೆ, ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದೆ. ರಾಜಧಾನಿ ಬೆಂಗಳೂರಿನಲ್ಲಿ ಶೀತ ಗಾಳಿಯದ್ದು ಬೆಳಗ್ಗೆಯಿಂದಲೇ ಮಾಡೋಕೆ ವಾತಾವರಣ ನಿರ್ಮಾಣವಾಗಿದೆ. ಇನ್ನೂ ರಾಜ್ಯದ 22 ಜಿಲ್ಲೆಗಳಲ್ಲಿ ಜನವರಿ 9 ರವರೆಗೆ ಮಳೆಯ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ,ವಿಜಯನಗರದಲ್ಲಿ ಜನವರಿ 6 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಒಂದು ವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 4 ರಿಂದ 10 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

2024 ರಲ್ಲಿ ಉತ್ತಮ ಮಳೆ

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.

2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!