Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಮುನ್ಸೂಚನೆ.

rai alert today

ಕರ್ನಾಟಕದ ಹಲವೆಡೆ ವರುಣನ ಆಗಮನವಾಗಿದೆ. ಇಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಬಿದ್ದಿದೆ. ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು ಸೇರಿದಂತೆ ಕೊಡಗು ಮತ್ತು ಶಿವಮೊಗ್ಗದಲ್ಲಿ ಭರ್ಜರಿ ಮಳೆ ಬಂದಿದೆ. ಇನ್ನೂ ಉತ್ತರ ಕರ್ನಾಟಕದ ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದಿಂದ ಜನ ಖುಷಿಯಾಗಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಇದೀಗ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಲಿದೆ. ಮಲೆನಾಡು ಭಾಗ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ, ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ, ಹಾವೇರಿಯಲ್ಲಿ ಭರ್ಜರಿಯಾಗಿ ಮಳೆ ಸುರಿಯಲಿದೆ ಎನ್ನಲಾಗಿದೆ.

ಇನ್ನು ಉತ್ತರ ಕರ್ನಾಟಕದ ವಿಜಯಪುರ, ವಿಜಯನಗರ, ಗದಗ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ. ಇಂದು ರಾಮನಗರ ಚಾಮರಾಜನಗರ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ವಿಜಯಪುರ ಕಲಬುರಗಿ ಬೀ ವಿಜಯನಗರ ಬೆಳಗಾವಿ ಬಾಗಲಕೋಟೆ ಯಾದಗಿರಿ ರಾಯಚೂರು ಗದಗ ಕೊಪ್ಪಳ ಮೈಸೂರು ಕೊಡಗು ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಶಿವಮೊಗ್ಗ ತುಮಕೂರು ಕೋಲಾರ ಹಾಸನ ಚಿತ್ರದುರ್ಗ ದಾವಣಗೆರೆ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿರುತ್ತದೆ.

ಶಿವಮೊಗ್ಗ, ಶೃಂಗೇರಿ, ತೀರ್ಥಹಳ್ಳಿ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗಿದೆ. ಭಾಲ್ಕಿ, ಮುಂಡಗೋಡ, ಹುಮುನಾಬಾದ್, ಬೀದರ್, ಬೆಳಗಾವಿ, ನರಗುಂದ, ಕಕ್ಕೇರಿ, ಅಥಣಿ, ಯಲಬುರ್ಗಾ, ಜಯಪುರ, ಬಾಳೆಹೊನ್ನೂರು, ನಾಪೋಕ್ಲು, ತ್ಯಾಗರ್ತಿ, ಮೈಸೂರಿನಲ್ಲಿ ಮಳೆಯಾಗಿದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.

2024 ರಲ್ಲಿ ಉತ್ತಮ ಮಳೆ

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.

2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!