ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಇಂದು ಡಿ.10 ಭಾನುವಾರದಿಂದ ಸೋಮವಾರದ ಮುಂಜಾನೆಯವರೆಗೂ ಬೆಂಗಳೂರು ಹಾಗೂ ಸುತ್ತಮುತ್ತಲಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು. ಸುತ್ತಮುತ್ತಲಿನ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮಳೆ ಸುರಿಯುವ ಸಾಧ್ಯತೆಯಿದ್ದು. ಕೆಲವು ಕಡೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಕಾಣಲಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.
ಇನ್ನು ಡಿಸೆಂಬರ್ 11ರ ಸೋಮವಾರ ದಿನದಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಜಿಲ್ಲೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಾಗಿದ್ದು. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಹಗುರದಿಂದ ಮಳೆಯಾಗುಗುವ ಸಾಧ್ಯತೆ ಇದೆ. ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಇನ್ನು ಡಿಸೆಂಬರ್ 12ರ ಮಂಗಳವಾರ ದಿನ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಾತ್ರ ಮಳೆ ಬೀಳುವ ಸಾಧ್ಯತೆ ಇದೆ.
ಡಿಸೆಂಬರ್ 13ರ ಬುಧವಾರ ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರವಾಗಿ ಮಳೆ ಬೀಳುವ ಸಾಧ್ಯತೆಯಿದ್ದು. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಕಂಡು ಬರಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ